mr_ulb/10-2SA.usfm

1439 lines
273 KiB
Plaintext
Raw Normal View History

2019-01-21 20:20:50 +00:00
\id 2SA - Kannada Unlocked Literal Bible
2018-04-26 17:00:56 +00:00
\ide UTF-8
2019-01-21 20:20:50 +00:00
\rem Copyright © 2017 Bridge Connectivity Solutions. This translation is made available to you under the terms of the Creative Commons Attribution-ShareAlike 4.0 License
\h 2 ಸಮುವೇಲನು
\toc1 ಸಮುವೇಲನು - ದ್ವಿತೀಯ ಭಾಗ
\toc2 2 ಸಮುವೇಲನು
2018-04-26 17:00:56 +00:00
\toc3 2sa
2019-01-21 20:20:50 +00:00
\mt1 ಸಮುವೇಲನು - ದ್ವಿತೀಯ ಭಾಗ
\is ಗ್ರಂಥಕರ್ತೃತ್ವ
\ip 2 ಸಮುವೇಲನ ಪುಸ್ತಕವನ್ನು ಬರೆದ ಗ್ರಂಥಕರ್ತನನ್ನು ಗುರುತಿಸುವುದಿಲ್ಲ. ಪ್ರವಾದಿಯಾದ ಸಮುವೇಲನು ಮೃತನಾದುದರಿಂದ ಅವನು ಗ್ರಂಥಕರ್ತನಾಗಿರಲು ಸಾಧ್ಯವಿಲ್ಲ. ಮೂಲತಃ, 1 ಮತ್ತು 2 ಸಮುವೇಲ ಪುಸ್ತಕಗಳು ಒಂದೇ ಪುಸ್ತಕವಾಗಿದ್ದಿತ್ತು. ಸೆಪ್ಟುಜೆಂಟ್ ಭಾಷಾಂತರಕಾರರು ಅವುಗಳನ್ನು ಎರಡು ಪುಸ್ತಕಗಳಾಗಿ ವಿಭಜಿಸಿದರು. ಆದ್ದರಿಂದ ಮೊದಲನೆಯ ಪುಸ್ತಕವು ಸೌಲನ ಮರಣದೊಂದಿಗೆ ಕೊನೆಗೊಂಡಿತು ಮತ್ತು ಎರಡನೇ ಪುಸ್ತಕವು ದಾವೀದನ ಆಳ್ವಿಕೆಯೊಂದಿಗೆ ಆರಂಭವಾಯಿತು, ದಾವೀದನನ್ನು ಯೆಹೂದದ ಕುಲದ ಅರಸನನ್ನಾಗಿ ಮಾಡಲಾಯಿತ್ತು ಮತ್ತು ನಂತರ ಅವನನ್ನು ಇಸ್ರಾಯೇಲ್ಯರೆಲ್ಲರ ಅರಸನನ್ನಾಗಿ ಮಾಡಲಾಯಿತು.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ.ಪೂ. 1050-722 ರ ನಡುವಿನ ಕಾಲದಲ್ಲಿ ಬರೆದಿರಬಹುದು.
\ip ಡ್ಯೂಟೆರೊನೊಮಿಸ್ಟಿಕ್ ಹಿಸ್ಟರಿ (ಧರ್ಮೋಪದೇಶಕಾಂಡ ಇತಿಹಾಸದ) ಭಾಗವಾಗಿ ಇದು ಬಾಬೆಲಿನ ಸೆರೆವಾಸದ ಸಮಯದಲ್ಲಿ ಬರೆಯಲ್ಪಟ್ಟಿತು.
\is ಸ್ವೀಕೃತದಾರ
\ip ಒಂದು ವಿಧದಲ್ಲಿ, ದಾವೀದನ ಮತ್ತು ಸೊಲೊಮೋನನ ಆಳ್ವಿಕೆಯಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ಯರು ಮೂಲ ವಾಚಕರು, ಹಾಗೆಯೇ ಅವರ ನಂತರದ ಪೀಳಿಗೆಗಳು ಆಗಿರುತ್ತಾರೆ.
\is ಉದ್ದೇಶ
\ip 2 ಸಮುವೇಲನ ಪುಸ್ತಕವು ಅರಸನಾದ ದಾವೀದನ ಆಳ್ವಿಕೆಯ ದಾಖಲೆಯಾಗಿದೆ. ಈ ಪುಸ್ತಕವು ದಾವೀದನ ಒಡಂಬಡಿಕೆಯನ್ನು ಅದರ ಐತಿಹಾಸಿಕ ಸನ್ನಿವೇಶದಲ್ಲಿ ಕ್ರಮವಾಗಿಡುತ್ತದೆ. ದಾವೀದನು ಯೆರೂಸಲೇಮನ್ನು ಇಸ್ರಾಯೇಲ್ಯರ ರಾಜಕೀಯ ಮತ್ತು ಧಾರ್ಮಿಕ ಕೇಂದ್ರವಾಗಿ ಮಾಡಿದನು (2 ಸಮು. 5:6-12; 6:1-17). ಯೆಹೋವನ ಮಾತು (2 ಸಮು. 7:4-16) ಮತ್ತು ದಾವೀದನ ಮಾತುಗಳು (2 ಸಮು. 23:1-7) ದೇವರಿಗೆ ಕೊಟ್ಟಿರುವ ಸಾಮ್ರಾಜ್ಯದ ಮಹತ್ವವನ್ನು ಒತ್ತಿ ಹೇಳುತ್ತದೆ. ಮೆಸ್ಸೀಯನ ಸಹಸ್ರವರ್ಷದ ಪ್ರಭುತ್ವವನ್ನು ಸಹ ಪ್ರವಾದನಾ ರೂಪವಾಗಿ ಸೂಚಿಸಲಾಗಿದೆ.
\is ಮುಖ್ಯಾಂಶ
\ip ಏಕೀಕರಣ
\iot ಪರಿವಿಡಿ
\io1 1. ದಾವೀದನ ಸಾಮ್ರಾಜ್ಯದ ಉದಯ (1-10)
\io1 2. ದಾವೀದನ ಸಾಮ್ರಾಜ್ಯದ ಪತನ (11-20)
\io1 3. ಅನುಬಂಧ (21-24)
2018-04-26 17:00:56 +00:00
\s5
\c 1
2019-01-21 20:20:50 +00:00
\s ಸೌಲನ ಯೋನಾತನರ ಮರಣದ ಸುದ್ದಿಯು ದಾವೀದನಿಗೆ ಮುಟ್ಟಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಸೌಲನು ಸತ್ತನಂತರ, ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗ್ ಪಟ್ಟಣದಲ್ಲಿ ಎರಡು ದಿನ ಇದ್ದನು.
\v 2 ಮೂರನೆಯ ದಿನದಲ್ಲಿ ಸೌಲನ ಠಾಣ್ಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 3 ದಾವೀದನು ಅವನನ್ನು, <<ನೀನು ಎಲ್ಲಿಂದ ಬಂದಿ>> ಎಂದು ಕೇಳಲು ಅವನು, <<ನಾನು ಇಸ್ರಾಯೇಲರ ಠಾಣ್ಯದಿಂದ ತಪ್ಪಿಸಿಕೊಂಡು ಬಂದೆನು>> ಎಂದು ಉತ್ತರಕೊಟ್ಟನು.
\v 4 ಆಗ ದಾವೀದನು, <<ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು>> ಅನ್ನಲು ಆ ಮನುಷ್ಯನು, <<ಇಸ್ರಾಯೇಲರು ರಣರಂಗದಿಂದ ಓಡಿಹೋದರು. ಅನೇಕರು ಗಾಯಗೊಂಡು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನನೂ ಮರಣಹೊಂದಿದರು>> ಎಂದು ತಿಳಿಸಿದನು.
\v 5 ದಾವೀದನು ಈ ವರ್ತಮಾನ ತಂದ ಆ ಪ್ರಾಯಸ್ಥನಿಗೆ <<ಸೌಲನೂ ಅವನ ಮಗನಾದ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು>> ಎಂದು ಪ್ರಶ್ನಿಸಲು ಅವನು,
2018-04-26 17:00:56 +00:00
\s5
2019-01-21 20:20:50 +00:00
\v 6 <<ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು.
\v 7 ಅವನು ತಿರುಗಿಕೊಂಡು ನನ್ನನ್ನು ನೋಡಿ ಕರೆದನು.
2018-04-26 17:00:56 +00:00
\s5
2019-01-21 20:20:50 +00:00
\v 8 ನಾನು, <ಇಗೋ ಬಂದೆನು> ಎಂದು ಹೇಳಿ ಹೋದಾಗ ಅವನು <ನೀನಾರು?> ಎಂದು ಕೇಳಿದ್ದಕ್ಕೆ, <ನಾನು ಅಮಾಲೇಕ್ಯನು> ಎಂದು ಉತ್ತರಕೊಟ್ಟೆನು.
\v 9 ಆಗ ಅವನು ನನಗೆ, <ನೀನು ದಯೆಮಾಡಿ ಹತ್ತಿರ ಬಂದು ನನ್ನನ್ನು ಕೊಂದು ಹಾಕು. ಯಾಕೆಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವುದರಿಂದ ನನಗೆ ಸಂಕಟ ಹಿಡಿದದೆ> ಎಂದು ಹೇಳಿದನು.
\v 10 ನಾನು ಹತ್ತಿರ ಹೋಗಿ ಅವನು ಬಿದ್ದನಂತರ ಬದುಕಲಾರನೆಂದು ನೆನಸಿ, ಅವನನ್ನು ಕೊಂದು ಹಾಕಿ, ಅವನ ತಲೆಯ ಮೇಲಣ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ>> ಅಂದನು.
2018-04-26 17:00:56 +00:00
\s5
2019-01-21 20:20:50 +00:00
\v 11 ಸೌಲನೂ ಅವನ ಮಗನಾದ ಯೋನಾತಾನನೂ, ಯೆಹೋವನ ಪ್ರಜೆಗಳಾದ ಇಸ್ರಾಯೇಲರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ ದಾವೀದನೂ ಅವನ ಜನರೂ
\v 12 ತಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಳಾಡಿ, ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು.
\v 13 ದಾವೀದನು ವರ್ತಮಾನ ತಂದ ಯುವಕನನ್ನು, <<ನೀನು ಎಲ್ಲಿಯವನು?>> ಎಂದು ಕೇಳಿದನು. ಅವನು, <<ನಾನು ಇಸ್ರಾಯೇಲರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನು>> ಎಂದು ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 14 ದಾವೀದನು ಅವನಿಗೆ, <<ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?>> ಎಂದು ಹೇಳಿ
\v 15 ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, <<ಹೋಗಿ ಇವನನ್ನು ಕೊಂದುಹಾಕು>> ಎಂದು ಆಜ್ಞಾಪಿಸಲು ಅವನು ಅಮಾಲೇಕ್ಯನನ್ನು ಹೊಡೆದು ಕೊಂದನು.
\v 16 ದಾವೀದನು, <<ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು>> ಅಂದನು.
\s ದಾವೀದನು ಸೌಲಯೋನಾತಾನರನ್ನು ಕುರಿತು ರಚಿಸಿದ ಶೋಕಗೀತೆ
\p
2018-04-26 17:00:56 +00:00
\s5
2019-01-21 20:20:50 +00:00
\v 17 ದಾವೀದನು ಸೌಲ ಯೋನಾತನರ ಕುರಿತು ಒಂದು ಶೋಕಗೀತೆಯನ್ನು ರಚಿಸಿ,
\v 18 ಬಿಲ್ಲೆ ಎಂಬ ಈ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಆ ಗೀತವು ಯಾಷಾರ್ ಗ್ರಂಥದಲ್ಲಿ
\f +
\fr 1:18
\fq ಯಾಷಾರ್ ಗ್ರಂಥ
\ft ಬಹುಶಃ ಈ ಪುಸ್ತಕವು ಬಹಳ ಪ್ರಾಚೀನ ಯುದ್ಧ ಗೀತೆಗಳ ಸಂಗ್ರಹವಾಗಿದೆ. ಇದನ್ನು ಯೆಹೋಶುವ 10:13 ರಲ್ಲಿ ಉಲ್ಲೇಖಿಸಲಾಗಿದೆ. ಹೀಬ್ರೂ ಪದ ಯಾಷಾರಿಗೆ "ಪ್ರಾಮಾಣಿಕ" ಅಥವಾ "ನೀತಿವಂತ" ಎಂಬರ್ಥವಿದೆ.
\f* ಬರೆದಿರುತ್ತದೆ.
\q
\v 19 <<ಇಸ್ರಾಯೇಲರೇ, ನಿಮ್ಮ
\f +
\fr 1:19
\ft ಅಥವಾ ನಾಯಕರು.
\f* ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣು ಪಾಲಾಗಿ ಹೋಯಿತು. ಅಯ್ಯೋ ಪರಾಕ್ರಮಶಾಲಿಗಳೇ, ನೀವು ಹೇಗೆ ಹತರಾದಿರಿ.
\q
\v 20 ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು.
\q
\s5
\v 21 ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.
\q
\v 22 ಯೋನಾತಾನನ ಬಿಲ್ಲು ಹತರಾದವರ ರಕ್ತವನ್ನು ಹೀರದೆಯೂ ಪರಾಕ್ರಮಶಾಲಿಗಳ ಕೊಬ್ಬನ್ನು ರುಚಿಸದೆಯೂ ಬರುತ್ತಿರಲಿಲ್ಲ. ಸೌಲನ ಕತ್ತಿಯು ವ್ಯರ್ಥವಾಗಿ ಹಿಂದಿರುಗುತ್ತಿರಲಿಲ್ಲ.
\q
\s5
\v 23 ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.
\q
\v 24 ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ, ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ, ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ?
\q
\s5
\v 25 ಅಯ್ಯೋ ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮರಣ ಹೊಂದಿದಿರಿ. ಯೋನಾತಾನನು ನಿಮ್ಮ ಬೆಟ್ಟದಲ್ಲಿ ಹತನಾಗಿ ಬಿದ್ದನಲ್ಲಾ
\q
\v 26 ಯೋನಾತಾನನೇ, ನನ್ನ ಸಹೋದರನೇ ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ. ನೀನು ನನಗೆ ಮನೋಹರನಾಗಿದ್ದಿ. ನನ್ನ ಮೇಲಿನ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದು. ಅದು ಸತಿ ಪ್ರೇಮಕ್ಕಿಂತ ಶ್ರೇಷ್ಠವಾದದ್ದು.
\q
\v 27 ಅಯ್ಯೋ ಪರಾಕ್ರಮಶಾಲಿಗಳು ಹೇಗೆ ಹತರಾದರು, ಯುದ್ಧದ ಆಯುಧಗಳು ಹೇಗೆ ಹಾಳಾದವು.>>
2018-04-26 17:00:56 +00:00
\s5
\c 2
2019-01-21 20:20:50 +00:00
\s ದಾವೀದನಿಗೆ ಯೆಹೂದ್ಯರ ಅರಸನಾಗಿ ರಾಜಾಭಿಷೇಕವಾದದ್ದು
\p
\v 1 ಅನಂತರ ದಾವೀದನು ಯೆಹೋವನನ್ನು, <<ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?>> ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, <<ಯಾವ ಊರಿಗೆ ಹೋಗಲಿ?>> ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.
\v 2 ಆಗ ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳನ್ನೂ ಕರೆದುಕೊಂಡು ಅಲ್ಲಿಗೆ ಹೋದನು.
\v 3 ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಮಾಡಿದರು.
2018-04-26 17:00:56 +00:00
\p
\s5
2019-01-21 20:20:50 +00:00
\v 4 ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.
\v 5 ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, <<ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ.
2018-04-26 17:00:56 +00:00
\s5
2019-01-21 20:20:50 +00:00
\v 6 ಯೆಹೋವನ ಒಡಂಬಡಿಕೆಯ ನಂಬಿಕೆ ಮತ್ತು ಸತ್ಯ ನಿಮ್ಮೊಂದಿಗಿರಲಿ. ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.
\v 7 ಯೆಹೂದ್ಯರು ನನ್ನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ಅರಸನಾದ ಸೌಲನು ಸತ್ತುಹೋದರೂ ನೀವು ಶೂರರಾಗಿರಿ, ನಿಮ್ಮ ಕೈಗಳು ಜೋಲುಬೀಳದಿರಲಿ>> ಎಂದು ಹೇಳಿ ಕಳುಹಿಸಿದನು.
\s ಈಷ್ಬೋಶೆತನು ಇಸ್ರಾಯೇಲಿನಲ್ಲಿ ಅರಸನಾದದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 8 ಸೌಲನ ಸೇನಾಧಿಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ
\f +
\fr 2:8
\ft ಅಥವಾ ಈಷಬಾಲೆ.
\f* ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿಮಿಗೆ ಕರೆದುಕೊಂಡು ಹೋಗಿ
\v 9 ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 10 ಸೌಲನ ಮಗನಾದ ಈಷ್ಬೋಶೆತನು ನಲ್ವತ್ತು ವರ್ಷದವನಾದಾಗ ಇಸ್ರಾಯೇಲರನ್ನು ಆಳತೊಡಗಿ ಎರಡು ವರ್ಷ ರಾಜ್ಯಭಾರ ಮಾಡಿದನು. ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು.
\v 11 ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರ್ಷ ಆರು ತಿಂಗಳುಗಳು.
\s ಇಸ್ರಾಯೇಲ್ ಮತ್ತು ಯೆಹೂದ್ಯರ ನಡುವೆ ಯುದ್ಧ
\p
2018-04-26 17:00:56 +00:00
\s5
2019-01-21 20:20:50 +00:00
\v 12 ಒಂದು ದಿನ ನೇರನ ಮಗನಾದ ಅಬ್ನೇರನೂ, ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.
\v 13 ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.
2018-04-26 17:00:56 +00:00
\s5
2019-01-21 20:20:50 +00:00
\v 14 ಆಗ ಅಬ್ನೇರನು ಯೋವಾಬನಿಗೆ, <<ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ>> ಎಂದು ಹೇಳಲು ಯೋವಾಬನು, <<ಆಗಲಿ>> ಅಂದನು.
\v 15 ಆಗ ಸೌಲನ ಮಗನಾದ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಸಮಸಂಖ್ಯೆಯಾಗಿ ಹೊರಟು ಬಂದರು.
2018-04-26 17:00:56 +00:00
\s5
2019-01-21 20:20:50 +00:00
\v 16 ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆಹಿಡಿದು, ಕತ್ತಿಯಿಂದ ಪಕ್ಕೆಯಲ್ಲಿ ತಿವಿದಿದ್ದರಿಂದ ಎಲ್ಲರೂ ಸತ್ತು ಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ <<
\f +
\fr 2:16
\ft ಅಥವಾ ಹದಗತ್ತಿ ಹೊಲ.
\f* ಹೆಲ್ಕಾತ್ ಹಸ್ಸೂರಿಂ>> ಎಂದು ಹೆಸರಾಯಿತು.
\v 17 ಅನಂತರ ಆ ದಿನ ಘೋರ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು.
\s ಅಸಾಹೇಲನ ಮರಣ
\p
2018-04-26 17:00:56 +00:00
\s5
2019-01-21 20:20:50 +00:00
\v 18 ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.
\v 19 ಇವನು ಎಡಕ್ಕಾದರೂ ಬಲಕ್ಕಾದರೂ ತಿರುಗದೇ ಅಬ್ನೇರನನ್ನು ಹಿಂದಟ್ಟಿದನು.
2018-04-26 17:00:56 +00:00
\s5
2019-01-21 20:20:50 +00:00
\v 20 ಅಬ್ನೇರನು ಹಿಂತಿರುಗಿ ನೋಡಿ, <<ನೀನು ಅಸಾಹೇಲನೋ?>> ಎಂದು ಕೇಳಿದ್ದಕ್ಕೆ ಅವನು ಹೌದೆಂದು ಉತ್ತರಕೊಟ್ಟನು.
\v 21 ಆಗ ಅಬ್ನೇರನು ಅವನಿಗೆ, <<ನನ್ನನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಿಕೊಂಡು ಯುವಕರಲ್ಲೊಬ್ಬನನ್ನು ಹಿಡಿದು ಸುಲಿದುಕೋ>> ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 22 ಅಬ್ನೇರನು ತಿರುಗಿ ಅಸಾಹೇಲನಿಗೆ, <<ನನ್ನನ್ನು ಬಿಟ್ಟು ಹೋಗು, ನಾನೇಕೆ ನಿನ್ನನ್ನು ನೆಲಕ್ಕುರುಳಿಸಬೇಕು? ಹಾಗೆ ಮಾಡಿದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ>> ಅಂದನು.
\v 23 ಅಸಾಹೇಲನು ಬಿಟ್ಟು ಹೋಗುವುದಕ್ಕೆ ಒಪ್ಪದ ಕಾರಣ ಅಬ್ನೇರನು ಬರ್ಜಿಯನ್ನು ಹಿಂದಿನಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಹೊರಗೆ ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತು ಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.
2018-04-26 17:00:56 +00:00
\s5
2019-01-21 20:20:50 +00:00
\v 24 ಆದರೆ ಯೋವಾಬನೂ, ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು <<ಅಮ್ಮಾ>> ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಯೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ.
\v 25 ಬೆನ್ಯಾಮೀನ್ಯರು ಒಂದೇ ಗುಂಪಾಗಿ ಕೂಡಿಕೊಂಡು ಅಬ್ನೇರನ ಬಳಿಗೆ ಬಂದು ಗುಡ್ಡದ ಮೇಲೆ ನಿಂತರು.
\p
2018-04-26 17:00:56 +00:00
\s5
2019-01-21 20:20:50 +00:00
\v 26 ಆಗ ಅಬ್ನೇರನು, <<ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ>> ಎಂದನು.
\v 27 ಅದಕ್ಕೆ ಯೋವಾಬನು, <<ದೇವರ ಜೀವದಾಣೆ, ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ ಜನರು ನಾಳೆ ಬೆಳಗಾಗುವವರೆಗೆ ತಮ್ಮ ಬಂಧುಗಳನ್ನು ಹಿಂದಟ್ಟದೆ ಬಿಡುವುದಿಲ್ಲ>> ಎಂದು ಉತ್ತರಕೊಟ್ಟು ಕೂಡಲೇ ತುತ್ತೂರಿಯನ್ನು ಊದಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 28 ಆಗ ಅವರು ಇಸ್ರಾಯೇಲ್ಯರನ್ನು ಹಿಂದಟ್ಟದೆ ಬಿಟ್ಟಿದ್ದರಿಂದ ಯುದ್ಧವು ನಿಂತುಹೋಯಿತು.
\v 29 ಅಬ್ನೇರನೂ ಅವನ ಜನರೂ ಅರಾಬಾ ತಗ್ಗಿನಲ್ಲಿ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಯೊರ್ದನ್ ಹೊಳೆದಾಟಿ,
\f +
\fr 2:29
\ft ಅಂದರೆ ಬೆಳಿಗ್ಗೆಯೆಲ್ಲಾ.
\f* ಬಿಥ್ರೋನ ಕಣಿವೆಯನ್ನು ಹಾದು, ಮಹನಯಿಮಿಗೆ ಸೇರಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 30 ಯೋವಾಬನು ಅಬ್ನೇರನನ್ನು ಹಿಂದಟ್ಟದೆ ಬಿಟ್ಟು, ಹಿಂದಿರುಗಿ ಬಂದು, ಜನರನ್ನು ಸೇರಿಸಿ ಲೆಕ್ಕಮಾಡಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಸೈನಿಕರೂ ಅಸಾಹೇಲನೂ ಇರಲಿಲ್ಲ.
\v 31 ಆದರೆ ದಾವೀದನ ಸೈನಿಕರು ಅಬ್ನೇರನ ಜನರಾಗಿರುವ ಬೆನ್ಯಾಮೀನ್ಯರಲ್ಲಿ ಮುನ್ನೂರ ಅರವತ್ತು ಮಂದಿಯನ್ನು ಕೊಂದಿದ್ದರು.
\v 32 ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.
2018-04-26 17:00:56 +00:00
\s5
\c 3
\p
2019-01-21 20:20:50 +00:00
\v 1 ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.
\s ದಾವೀದನ ಮಕ್ಕಳು
\p
2018-04-26 17:00:56 +00:00
\s5
2019-01-21 20:20:50 +00:00
\v 2 ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು; ಚೊಚ್ಚಲ ಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು.
\v 3 ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.
2018-04-26 17:00:56 +00:00
\s5
2019-01-21 20:20:50 +00:00
\v 4 ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು. ಐದನೆಯವನು ಶೆಫಟ್ಯನು, ಇವನು ಅಬೀಟಲಳ ಮಗನು.
\v 5 ಆರನೆಯವನು ಇತ್ರಾಮನು. ಇವನು ದಾವೀದನಿಗೆ ಅವನ ಹೆಂಡತಿಯಾದ ಎಗ್ಲಳಲ್ಲಿ ಹುಟ್ಟಿದವನು. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಇವರೇ.
\s ಅಬ್ನೇರನು ದಾವೀದನ ಪಕ್ಷಕ್ಕೆ ಸೇರಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 6 ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧ ನಡೆಯುತ್ತಿರುವಾಗ ಸೌಲನ ವಂಶದವರಲ್ಲಿ ಅಬ್ನೇರನೇ ಬಲಿಷ್ಠನಾಗಿದ್ದನು.
\v 7 ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, <<ನೀನು ನನ್ನ ತಂದೆಯ ಉಪಪತ್ನಿಯರನ್ನು ಕೂಡಿದ್ದೇಕೆ?>> ಎಂದು ಕೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 8 ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, <<ಈ ವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ಮಿತ್ರರಿಗೂ ದಯೆತೋರಿಸುತ್ತಿದ್ದೇನಲ್ಲಾ. ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?
2018-04-26 17:00:56 +00:00
\s5
2019-01-21 20:20:50 +00:00
\v 9 ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,
\v 10 ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ>> ಅಂದನು.
\v 11 ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರಕೊಡಲಾರದೆ ಹೋದನು.
\p
2018-04-26 17:00:56 +00:00
\s5
2019-01-21 20:20:50 +00:00
\v 12 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಪ್ರಯತ್ನದಲ್ಲಿ ನಾನು ನಿನ್ನ ಸಂಗಡ ಕೈಜೋಡಿಸುತ್ತೇನೆ>> ಎಂದು ಹೇಳಿಸಿದನು.
\v 13 ಅದಕ್ಕೆ ದಾವೀದನು, <<ಒಳ್ಳೆಯದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ಆದರೆ ನಿನ್ನಿಂದ ನನಗೆ ಒಂದು ಸಹಾಯ ಬೇಕು. ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ, ನೀನು ನನ್ನ ಮುಖವನ್ನು ನೋಡಕೂಡದು>> ಎಂದು ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 14 ಆಗ ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು>> ಎಂಬುದಾಗಿ ಆಜ್ಞಾಪಿಸಿದನು.
\v 15 ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆಯಿಸಿದನು.
\v 16 ಆಗ ಪಲ್ಟೀಯೇಲನು ಬಹುರೀಮಿನವರೆಗೆ ಅಳುತ್ತಾ ಆಕೆಯ ಹಿಂದೆ ಹೋದನು. ಅನಂತರ ಅಬ್ನೇರನು ಅವನಿಗೆ, <<ಹಿಂದಿರುಗಿ ಮನೆಗೆ ಹೋಗು>> ಎಂದು ಹೇಳಲು ಅವನು ಹಿಂದಿರುಗಿ ಹೋದನು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ಅಬ್ನೇರನು ಇಸ್ರಾಯೇಲರ ಹಿರಿಯರಿಗೆ, <<ದಾವೀದನು ನಮ್ಮ ಅರಸನಾಗಬೇಕೆಂದು ನೀವು ಮೊದಲು ಅಪೇಕ್ಷಿಸಿದಂತೆಯೇ ಈಗ ಮಾಡಿರಿ.
\v 18 ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 19 ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲರೂ ಬೆನ್ಯಾಮೀನ್ಯರೆಲ್ಲರೂ ಒಪ್ಪಿಕೊಂಡು ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕೋಸ್ಕರ ಹೆಬ್ರೋನಿಗೆ ಹೊರಟನು.
\v 20 ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣ ಮಾಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 21 ಅಬ್ನೇರನು ದಾವೀದನಿಗೆ, <<ನಾನು ಹೊರಟುಹೋಗಿ ಇಸ್ರಾಯೇಲರನ್ನೆಲ್ಲಾ ಕೂಡಿಸಿ, ನನ್ನ ಒಡೆಯನಾದ ಅರಸನ ಬಳಿಗೆ ಕರೆದುಕೊಂಡು ಬರುವೆನು. ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು. ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು>> ಎಂದು ಹೇಳಲು ದಾವೀದನು ಅವನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು.
\s ಅಬ್ನೇರನ ಹತ್ಯೆ
\p
2018-04-26 17:00:56 +00:00
\s5
2019-01-21 20:20:50 +00:00
\v 22 ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಭಟರು ಯೋವಾಬನೂ ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂತಿರುಗಿ ಬಂದರು. ಅವನು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು.
\v 23 ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ, ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು, ಅರಸನ ಬಳಿಗೆ ಹೋಗಿ,
2018-04-26 17:00:56 +00:00
\s5
2019-01-21 20:20:50 +00:00
\v 24 <<ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ. ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದೇಕೆ?
\v 25 ನೇರನ ಮಗನಾದ ಅಬ್ನೇರನ ಸಂಗತಿ ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವುದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೇ>> ಎಂದು ಹೇಳಿ,
\v 26 ಯೋವಾಬನು ದಾವೀದನನ್ನು ಬಿಟ್ಟು, ಹೊರಗೆ ಹೋಗಿ, ಅಬ್ನೇರನನ್ನು ಕರೆತರುವಂತೆ ದೂತರನ್ನು ಕಳುಹಿಸಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 27 ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 28 ಸ್ವಲ್ಪ ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಿಗೆ ಮುಟ್ಟಿತು. ಆಗ ಅವನು, <<ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ, ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.
\v 29 ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ>> ಅಂದನು.
\v 30 ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.
\s ದಾವೀದನು ಅಬ್ನೇರನಿಗಾಗಿ ಶೋಕಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 31 ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, <<ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ>> ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು.
\v 32 ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು. ಜನರೆಲ್ಲರೂ ಅತ್ತರು.
2018-04-26 17:00:56 +00:00
\s5
2019-01-21 20:20:50 +00:00
\v 33 ದಾವೀದನು ಅಬ್ನೇರನನ್ನು ಕುರಿತು,
\q <<ಅಬ್ನೇರನೇ ನಿನಗೆ ಮೂರ್ಖರಿಗಾಗುವಂತೆ ದುರ್ಮರಣವಾಯಿತೋ?
\q
\v 34 ನಿನ್ನ ಕೈಗಳು ಕಟ್ಟಲ್ಪಡಲಿಲ್ಲ. ನಿನ್ನ ಕಾಲುಗಳಿಗೆ ಬೇಡಿಗಳು ಹಾಕಿರಲಿಲ್ಲ.
\q ನೀನು ದುಷ್ಟರಿಂದ ಹತನಾದಂತೆ ಹತನಾದಿ>>
\m ಎಂದು ಶೋಕಗೀತೆಯನ್ನು ಹಾಡಲು ಜನರು ತಿರುಗಿ ಅತ್ತರು.
\p
2018-04-26 17:00:56 +00:00
\s5
2019-01-21 20:20:50 +00:00
\v 35 ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, <<ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ>> ಎಂದು ಆಣೆಯಿಟ್ಟು ಹೇಳಿದನು.
\v 36 ಜನರು ಇದನ್ನು ಕಂಡು ಮೆಚ್ಚಿದರು. ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.
2018-04-26 17:00:56 +00:00
\s5
2019-01-21 20:20:50 +00:00
\v 37 ನೇರನ ಮಗನಾದ ಅಬ್ನೇರನ ಕೊಲೆಯಲ್ಲಿ ಅರಸನು ಕೈಹಾಕಲಿಲ್ಲವೆಂಬುದು ಅವನ ಎಲ್ಲಾ ಜನರಿಗೂ ಇಸ್ರಾಯೇಲರಿಗೂ ಅದೇ ದಿನ ಗೊತ್ತಾಯಿತು.
\v 38 ಅರಸನು ತನ್ನ ಸೇವಕರಿಗೆ, <<ಈ ದಿನ ಇಸ್ರಾಯೇಲರಲ್ಲಿ ಹತವಾದವನು, ಪ್ರಭುವೂ, ಮಹಾಪುರುಷನೂ ಆಗಿದ್ದಾನೆಂಬುದು ನಿಮಗೆ ಗೊತ್ತಿದೆಯಲ್ಲಾ.
\v 39 ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ>> ಎಂದು ಹೇಳಿದನು.
2018-04-26 17:00:56 +00:00
\s5
\c 4
2019-01-21 20:20:50 +00:00
\s ಈಷ್ಬೋಶೆತನು ಕೊಲ್ಲಲ್ಪಟ್ಟದ್ದು
\p
\v 1 ಅಬ್ನೇರನು ಹೆಬ್ರೋನಿನಲ್ಲಿ ಸತ್ತನೆಂಬ ವರ್ತಮಾನವು ಸೌಲನ ಮಗನಾದ ಈಷ್ಬೋಶೆತನಿಗೆ ಮುಟ್ಟಿದಾಗ ಅವನ ಕೈಗಳು ಜೋಲುಬಿದ್ದವು. ಇಸ್ರಾಯೇಲರೆಲ್ಲರು ಕಳವಳಗೊಂಡರು.
\v 2 ಸೌಲನ ಮಗನಿಗೆ ಬಾಣ, ರೇಕಾಬ ಎಂಬ ಇಬ್ಬರು ಸೇನಾಧಿಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. ಬೇರೋತ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ.
\v 3 ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ, ಇಂದಿನ ವರೆಗೂ ಅಲ್ಲೇ ಪ್ರವಾಸಿಗಳಾಗಿದ್ದಾರೆ.
2018-04-26 17:00:56 +00:00
\p
\s5
2019-01-21 20:20:50 +00:00
\v 4 ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾಗಿದ್ದು ಹೇಗೆಂದರೆ, ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ, ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು.
\p
2018-04-26 17:00:56 +00:00
\s5
2019-01-21 20:20:50 +00:00
\v 5 ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬುವರು ಅವನ ಮನೆಯ ಬಳಿಗೆ ಬಂದರು.
\v 6 ಆಗ ಬಾಗಿಲು ಕಾಯುವವಳು ಗೋದಿ ಕೇರುತ್ತಿದ್ದು ಹಾಗೆಯೇ ತೂಕಡಿಸಿ ನಿದ್ದೆಮಾಡುತ್ತಿರುವುದನ್ನು ಬಾಣ ಮತ್ತು ರೇಕಾಬರು ಕಂಡು ರಹಸ್ಯವಾಗಿ ಒಳಗೆ ಜಾರಿಕೊಂಡರು.
\v 7 ಅವರು ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದು, ಕೊಂದುಹಾಕಿ, ತಲೆಯನ್ನು ಕತ್ತರಿಸಿ, ಅದನ್ನು ತೆಗೆದುಕೊಂಡು, ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ,
2018-04-26 17:00:56 +00:00
\s5
2019-01-21 20:20:50 +00:00
\v 8 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು, ಆ ತಲೆಯನ್ನು ಅವನಿಗೆ ತೋರಿಸಿ, <<ಇಗೋ ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ. ಅರಸನಾದ ನಮ್ಮ ಒಡೆಯನಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯಿ ತೀರಿಸಿದ್ದಾನೆ>> ಅಂದನು.
\v 9 ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣರಿಗೆ,
\v 10 <<ಸೌಲನ ಮರಣವಾರ್ತೆಯನ್ನು ತಿಳಿಸುವುದು ಶುಭಕರವೆಂದು ಭಾವಿಸಿ ಬಂದು, ನನಗೆ ಹೇಳಿದವನನ್ನು ಹಿಡಿದು ಅವನಿಗೆ ಚಿಕ್ಲಗಿನಲ್ಲಿ ಮರಣದಂಡನೆಯೆಂಬ ಬಹುಮಾನವನ್ನು ಸಲ್ಲಿಸಿದೆನಲ್ಲವೋ?
2018-04-26 17:00:56 +00:00
\s5
2019-01-21 20:20:50 +00:00
\v 11 ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು>> ಎಂದು ಹೇಳಿ,
\v 12 ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು, ಕೈಕಾಲುಗಳನ್ನು ಕತ್ತರಿಸಿ, ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.
2018-04-26 17:00:56 +00:00
\s5
\c 5
2019-01-21 20:20:50 +00:00
\s ದಾವೀದನನ್ನು ಇಸ್ರಾಯೇಲರೆಲ್ಲರ ಮೇಲೆ ಅರಸನಾದದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, <<ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,
\v 2 ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, <ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ> >> ಅಂದರು.
2018-04-26 17:00:56 +00:00
\s5
2019-01-21 20:20:50 +00:00
\v 3 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.
\v 4 ದಾವೀದನು ಮೂವತ್ತು ವರ್ಷದವನಾದಾಗ ಅರಸನಾಗಿ, ನಲ್ವತ್ತು ವರ್ಷ ಆಳಿದನು.
\v 5 ಅವನು ಹೆಬ್ರೋನಿನಲ್ಲಿದ್ದು ಯೆಹೂದ ಕುಲವೊಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು. ಯೆರೂಸಲೇಮಿನಲ್ಲಿದ್ದು ಯೆಹೂದ್ಯರನ್ನು ಮತ್ತು ಎಲ್ಲಾ ಇಸ್ರಾಯೇಲರನ್ನು ಆಳಿದ್ದು ಮೂವತ್ತು ಮೂರು ವರ್ಷಗಳು.
2018-04-26 17:00:56 +00:00
\s5
2019-01-21 20:20:50 +00:00
\v 6 ದಾವೀದನು ತನ್ನ ಜನರನ್ನು ಕರೆದುಕೊಂಡು ಯೆರೂಸಲೇಮಿನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರುವುದಿಲ್ಲವೆಂದು ತಿಳಿದು ದಾವೀದನಿಗೆ, <<ನೀನು ಒಳಗೆ ಬರಲಾರೆ, ಕುರುಡರು ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು>> ಎಂದು ಹೇಳಿದರು.
\v 7 ಅದರೂ ದಾವೀದನು ದಾವೀದನಗರ ಎನ್ನಿಸಿಕೊಳ್ಳುವ ಚೀಯೋನಿನ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಆ ದಿನ ದಾವೀದನು, <<ಯೆಬೂಸಿಯರನ್ನು ಜಯಿಸಬೇಕೆಂದಿರುವವನು, ಜಲದ್ವಾರದ ಮೂಲಕ ಹತ್ತಿ ಹೋಗಿ, ನನ್ನನ್ನು ದ್ವೇಷಿಸುವ ಕುರುಡರನ್ನು ಮತ್ತು ಕುಂಟರನ್ನು ಕಂದಕದಲ್ಲಿ ನಾಶಪಡಿಸಬೇಕು>> ಎಂದು ಹೇಳಿದನು. ಆದುದರಿಂದ <<ಕುರುಡರೂ ಕುಂಟರೂ
\f +
\fr 5:8
\ft ಅಥವಾ ಯೆಹೋವನ ಮನೆ.
\f* ಅರಮನೆಯ ಒಳಗೆ ಬರಲಾಗದು>> ಎಂಬ ಗಾದೆಯುಂಟು.
\s ದಾವೀದನು ಯೆರೂಸಲೇಮನ್ನು ವಶಪಡಿಸಿಕೊಂಡದ್ದು
\p
\v 9 ದಾವೀದನು ಆ ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.
\v 10 ಸೇನಾಧೀಶ್ವರನಾದ ಯೆಹೋವ ದೇವರು ಅವನ ಸಂಗಡ ಇದ್ದುದರಿಂದ ಅವನು ಆಧಿಕ ಪ್ರಬಲಗೊಳ್ಳುತ್ತಾ ಬಂದನು.
2018-04-26 17:00:56 +00:00
\s5
2019-01-21 20:20:50 +00:00
\v 11 ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.
\v 12 ಇದರಿಂದ ದಾವೀದನು, <<ಯೆಹೋವನು ನನ್ನನ್ನು ಇಸ್ರಾಯೇಲರ ರಾಜನನ್ನಾಗಿ ಸ್ಥಿರಪಡಿಸಿ, ತನ್ನ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದ್ದಾನೆ>> ಎಂದು ತಿಳಿದುಕೊಂಡನು.
2018-04-26 17:00:56 +00:00
\s5
2019-01-21 20:20:50 +00:00
\v 13 ದಾವೀದನು ಹೆಬ್ರೋನಿನಿಂದ ಯೆರೂಸಲೇಮಿಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಮತ್ತು ಉಪಪತ್ನಿಯರನ್ನಾಗಿಯೂ ಮಾಡಿಕೊಂಡಿದ್ದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳು ಹುಟ್ಟಿದರು.
\v 14 ಅಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,
\v 15 ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ,
\v 16 ಎಲೀಷಾಮ, ಎಲ್ಯಾದ ಮತ್ತು ಎಲೀಫೆಲೆಟ್.
\s ದಾವೀದನು ಫಿಲಿಷ್ಟಿಯರನ್ನು ಎರಡು ಸಾರಿ ಸೋಲಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 17 ಇಸ್ರಾಯೇಲರು ದಾವೀದನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ತಲುಪಿದಾಗ ಅವರು ಅವನನ್ನು ಸೆರೆಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.
\v 18 ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 19 ಅದನ್ನು ತಿಳಿದು ದಾವೀದನು ಯೆಹೋವನನ್ನು, <<ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?>> ಎಂದು ಕೇಳಿದನು. ಅದಕ್ಕೆ ಯೆಹೋವನು, <<ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು>> ಎಂದು ಉತ್ತರಕೊಟ್ಟನು.
\v 20 ಆಗ ಅವನು ಹೋಗಿ ಅವರನ್ನು ಸೋಲಿಸಿ, <<ಯೆಹೋವನು ಕಟ್ಟೆ ಒಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು, ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆ>> ಎಂದು ಹೇಳಿ ಆ ಯುದ್ಧ ಸ್ಥಳಕ್ಕೆ <<
\f +
\fr 5:20
\ft ಅಂದರೆ ದೇವರು ನಮ್ಮ ಪರವಾಗಿ ಹೋರಾಡುವವನು.
\f* ಬಾಳ್ ಪೆರಾಚೀಮ್>> ಎಂದು ಹೆಸರಿಟ್ಟನು.
\v 21 ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.
\p
2018-04-26 17:00:56 +00:00
\s5
2019-01-21 20:20:50 +00:00
\v 22 ಫಿಲಿಷ್ಟಿಯರು ಇನ್ನೊಮ್ಮೆ ಹೊರಟು ಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.
\v 23 ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, <<ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.
2018-04-26 17:00:56 +00:00
\s5
2019-01-21 20:20:50 +00:00
\v 24 ಆ ಬಾಕಾ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದು ಅವರ ಮೇಲೆ ದಾಳಿಮಾಡು>> ಎಂದನು.
\v 25 ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ, ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು.
2018-04-26 17:00:56 +00:00
\s5
\c 6
2019-01-21 20:20:50 +00:00
\s ದಾವೀದನು ಯೆಹೋವನ ಮಂಜೂಷವನ್ನು ಯೆರೂಸಲೇಮಿಗೆ ತಂದದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಅನಂತರ ದಾವೀದನು ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ಅವರ ಸಂಗಡ
\v 2 ದೇವರ ಮಂಜೂಷವನ್ನು ತರುವುದಕ್ಕಾಗಿ ಯೆಹೂದ ದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾಗಿತ್ತು.
2018-04-26 17:00:56 +00:00
\s5
2019-01-21 20:20:50 +00:00
\v 3 ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು, ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಮಾರ್ಗ ತೋರಿಸುತ್ತಾ ಮುನ್ನಡೆಸಿದರು.
\v 4 ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲ್ಪಟ್ಟ ದೇವರ ಮಂಜೂಷದ ಮುಂದೆ ಅಹಿಯೋವನೂ ಹೋಗುತ್ತಿದ್ದನು.
\v 5 ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು.
2018-04-26 17:00:56 +00:00
\s5
2019-01-21 20:20:50 +00:00
\v 6 ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.
\v 7 ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.
2018-04-26 17:00:56 +00:00
\s5
2019-01-21 20:20:50 +00:00
\v 8 ಯೆಹೋವನು ಉಜ್ಜನನ್ನು ಹತ್ಯಮಾಡಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ <<ಪೆರೆಚ್ ಉಜ್ಜಾ>> ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಅದೇ ಹೆಸರಿರುತ್ತದೆ.
\v 9 ಆ ದಿನ ದಾವೀದನು ಯೆಹೋವನಿಗೆ ಭಯಪಟ್ಟು, <<ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?>> ಎಂದುಕೊಂಡು,
2018-04-26 17:00:56 +00:00
\s5
2019-01-21 20:20:50 +00:00
\v 10 ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.
\v 11 ಯೆಹೋವನ ಮಂಜೂಷವು ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ದಿನಗಳಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 12 ಯೆಹೋವನು ಹೀಗೆ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ, ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸಾಹದಿಂದ ದಾವೀದನಗರಕ್ಕೆ ತಂದನು.
\v 13 ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ, ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 14 ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.
\v 15 ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲರೂ ಅರ್ಭಟಿಸುತ್ತಾ, ತುತ್ತೂರಿ ಊದುತ್ತಾ, ಯೆಹೋವನ ಮಂಜೂಷವನ್ನು ತಂದರು.
2018-04-26 17:00:56 +00:00
\s5
2019-01-21 20:20:50 +00:00
\v 16 ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು
\v 17 ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 18 ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.
\v 19 ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
\p
2018-04-26 17:00:56 +00:00
\s5
2019-01-21 20:20:50 +00:00
\v 20 ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, <<ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ>> ಅಂದಳು.
2018-04-26 17:00:56 +00:00
\s5
2019-01-21 20:20:50 +00:00
\v 21 ಆಗ ದಾವೀದನು ಮೀಕಲಳಿಗೆ, <<ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.
\v 22 ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರ ಹೊಂದುವುದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು>> ಎಂದನು.
\v 23 ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವ ವರೆಗೂ ಮಕ್ಕಳೇ ಆಗಲಿಲ್ಲ.
2018-04-26 17:00:56 +00:00
\s5
\c 7
2019-01-21 20:20:50 +00:00
\s ಯೆಹೋವನು ದಾವೀದನಿಗೆ ವಾಗ್ದಾನಮಾಡಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು.
\v 2 ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, <<ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 3 ನಾತಾನನು ಅರಸನಿಗೆ, <<ಆಗಲಿ, ನಿನ್ನ ಹೃದಯದ ಆಲೋಚನೆಯಂತೆ ಮಾಡು. ಯೆಹೋವನು ನಿನ್ನ ಸಂಗಡ ಇರುತ್ತಾನೆ>> ಅಂದನು.
\p
\v 4 ಅದೇ ರಾತ್ರಿಯಲ್ಲಿ ನಾತಾನನಿಗೆ ಯೆಹೋವನ ಮಾತು ಕೇಳಿ ಬಂತು.
\v 5 ಯೆಹೋವನು, <<ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ <ನೀನು ನನಗೋಸ್ಕರ ಮನೆಯನ್ನು ಕಟ್ಟಬೇಕೋ?
\s5
\v 6 ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.
\v 7 ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?> ಎಂಬುದಾಗಿ ಯೆಹೋವನು ಅನ್ನುತ್ತಾನೆ>> ಎಂದು ಹೇಳು.
\s5
\v 8 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, <<ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, <ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.
\v 9 ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು.
\s5
\v 10 ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.
\v 11 ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದ ಇಲ್ಲಿಯವರೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನೀನು ಶತ್ರುಭಯವಿಲ್ಲದೆ ನೆಮ್ಮದಿಯಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ
\f +
\fr 7:11
\ft ಸಂತತಿಯನ್ನು
\f* ಒಂದು ಮನೆಯನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.
\s5
\v 12 ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.
\v 13 ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.
\v 14 ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು.
\s5
\v 15 ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ
\v 16 ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು> >> ಎಂದು
\v 17 ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.
\s ದಾವೀದನ ಕೃತಜ್ಞತಾ ಪ್ರಾರ್ಥನೆ
\p
2018-04-26 17:00:56 +00:00
\s5
2019-01-21 20:20:50 +00:00
\v 18 ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, <<ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.
\v 19 ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ.
\v 20 ಕರ್ತನೇ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ನಾನು ಇನ್ನೇನು ಹೇಳಲಿ?
2018-04-26 17:00:56 +00:00
\s5
2019-01-21 20:20:50 +00:00
\v 21 ನೀನು ನಿನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೋಸ್ಕರ, ನಿನ್ನ ಇಷ್ಟಾನುಸಾರವಾಗಿ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ, ಅವುಗಳ ಅನುಭವಗಳನ್ನು ನಿನ್ನ ಸೇವಕನಿಗೆ ಉಂಟುಮಾಡದ್ದೀ.
\v 22 ದೇವರೇ, ಯೆಹೋವನೇ! ನೀನೇ ಮಹೋನ್ನತನು. ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ನೀನು ನಮಗೆ ನೀಡಿದ್ದೆಲ್ಲವನ್ನು ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬುದು ನಿಶ್ಚಯ.
\v 23 ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.
2018-04-26 17:00:56 +00:00
\s5
2019-01-21 20:20:50 +00:00
\v 24 ಇಸ್ರಾಯೇಲರು ಸದಾಕಾಲವೂ ನಿನ್ನ ಪ್ರಜೆಯಾಗಿರಬೇಕೆಂದು ನಿರ್ಣಯಿಸಿದ ಯೆಹೋವನೇ, ನೀನು ಅವರಿಗೆ ದೇವರಾದಿ.
\v 25 ದೇವರೇ, ಯೆಹೋವನೇ! ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನು ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.
\v 26 ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲರ ದೇವರು ಎಂಬ ನಿನ್ನ ನಾಮಧೇಯಗಳಿಗೆ ಸದಾಕಾಲವೂ ಮಹಿಮೆಯುಂಟಾಗಲಿ. ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.
2018-04-26 17:00:56 +00:00
\s5
2019-01-21 20:20:50 +00:00
\v 27 ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ನಿನ್ನ ಸೇವಕನಾದ ನನಗೆ <ನಾನು ನಿನಗೋಸ್ಕರ ಮನೆ ಕಟ್ಟುವೆನು> ಎಂದು ವಾಗ್ದಾನ ಮಾಡಿದ್ದರಿಂದ ಅವನು ಈ ಪ್ರಕಾರ ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.
\v 28 ಕರ್ತನೇ, ಯೆಹೋವನೇ! ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ. ನಿನ್ನ ವಾಕ್ಯವು ಸತ್ಯವಾದದ್ದು.
\v 29 ಆದುದರಿಂದ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸು. ಸದಾಕಾಲವೂ ಅದರ ಮೇಲೆ ನಿನ್ನ ಕಟಾಕ್ಷವಿರಲಿ. ಕರ್ತನೇ, ಯೆಹೋವನೇ! ವಾಗ್ದಾನ ಮಾಡಿದವನು ನೀನೇ. ನಿನ್ನ ಆಶೀರ್ವಾದದಿಂದ ನಿನ್ನ ಸೇವಕನ ಮನೆಯಲ್ಲಿ ನಿತ್ಯ ಸೌಭಾಗ್ಯವಿರಲಿ>> ಎಂದು ವಿಜ್ಞಾಪಿಸಿದನು.
2018-04-26 17:00:56 +00:00
\s5
\c 8
2019-01-21 20:20:50 +00:00
\s ದಾವೀದನ ಜಯಗಳು
2018-04-26 17:00:56 +00:00
\p
2019-01-21 20:20:50 +00:00
\v 1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
2018-04-26 17:00:56 +00:00
\s5
2019-01-21 20:20:50 +00:00
\v 2 ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.
\p
2018-04-26 17:00:56 +00:00
\s5
2019-01-21 20:20:50 +00:00
\v 3 ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.
\v 4 ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 5 ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.
\v 6 ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.
\p
2018-04-26 17:00:56 +00:00
\s5
2019-01-21 20:20:50 +00:00
\v 7 ಅವನು ಹದದೆಜೆರನ
\f +
\fr 8:7
\ft ಅಥವಾ ಅಧಿಕಾರಿಗಳು.
\f* ಸೇವಕರ ಬಳಿ ಇದ್ದ ಬಂಗಾರದ ಗುರಾಣಿಗಳನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.
\v 8 ಇದಲ್ಲದೆ ಅರಸನಾದ ದಾವೀದನು ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
\v 10 ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 11 ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ,
\v 12 ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 13 ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು.
\v 14 ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.
\s ದಾವೀದನ ಸರದಾರರು
\p
2018-04-26 17:00:56 +00:00
\s5
2019-01-21 20:20:50 +00:00
\v 15 ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.
\v 16 ಚೆರೂಯಳ ಮಗನಾದ ಯೋವಾಬನೂ ಅವನ ಸೇನಾಧಿಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ರಾಜವಂಶಸ್ಥದ ಇತಿಹಾಸಕಾರನಾಗಿದ್ದನು.
\v 17 ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,
\v 18 ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು
\f +
\fr 8:18
\ft ಅಥವಾ ಯಾಜಕರಾಗಿದ್ದರು.
\f* ರಾಜನ ಮುಖ್ಯಸಲಹೆಗಾರರಾಗಿದ್ದರು.
2018-04-26 17:00:56 +00:00
\s5
\c 9
2019-01-21 20:20:50 +00:00
\s ದಾವೀದನು ಮೆಫೀಬೋಶೆತನಿಗೆ ದಯೆತೋರಿಸಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಒಂದು ದಿನ ದಾವೀದನು, <<ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ>> ಎನ್ನಲು,
\v 2 ಅದಕ್ಕೆ ಅವರು ಸೌಲನ ಮನೆಯಲ್ಲಿ ದಾಸನಾಗಿದ್ದ ಚೀಬನೆಂಬ ಒಬ್ಬ ಮನುಷ್ಯನನ್ನು ಕರೆದುಕೊಂಡು ಬಂದರು. ಅರಸನು ಅವನನ್ನು, <<ನೀನು ಚೀಬನೋ?>> ಎಂದು ಕೇಳಲು ಅವನು, <<ನಿನ್ನ ಸೇವಕನಾದ ನಾನು ಚೀಬನೆ>> ಎಂದು ಉತ್ತರ ಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 3 ಅರಸನು ಅವನಿಗೆ, <<ಸೌಲನ ಕುಟುಂಬದಲ್ಲಿ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ>> ಎಂದನು. ಆಗ ಚೀಬನು ಅರಸನಿಗೆ <<ಯೋನಾತಾನನಿಗೆ ಎರಡೂ ಕಾಲು ಕುಂಟಾದ ಒಬ್ಬ ಮಗನಿದ್ದಾನೆ>> ಎಂದು ಹೇಳಿದನು.
\p
\v 4 ಅರಸನು, <<ಅವನು ಎಲ್ಲಿರುತ್ತಾನೆ?>> ಎಂದು ಅವನನ್ನು ಕೇಳಲು ಚೀಬನು, <<ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿರುತ್ತಾನೆ>> ಎಂದು ಉತ್ತರಕೊಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 5 ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರೆಯಿಸಿದನು.
\v 6 ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು ಮೆಫೀಬೋಶೆತನೇ ಅನ್ನಲು ಅವನು, <<ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 7 ಆಗ ದಾವೀದನು ಅವನಿಗೆ, <<ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು>> ಎಂದು ಹೇಳಿದನು.
\v 8 ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರಮಾಡಿ, <<ಸತ್ತ ನಾಯಿಯಂತಿರುವ ನನ್ನನ್ನು ನೀನು ಕಟಾಕ್ಷಿಸಲು ನಿನ್ನ ದಾಸನಾದ ನಾನು ಎಷ್ಟರವನು?>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು ಅವನಿಗೆ, <<ನಿನ್ನ ಯಜಮಾನನಾದ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿದ್ದೇನೆ.
\v 10 ನೀನು, ನಿನ್ನ ಮಕ್ಕಳೂ ಮತ್ತು ನಿನ್ನ ದಾಸರು ನಿನ್ನ ಯಜಮಾನನ ಮೊಮ್ಮಗನ ಆಹಾರಕ್ಕಾಗಿ ಭೂಮಿಯನ್ನು ವ್ಯವಸಾಯ ಮಾಡಿ, ಅದರ ಬೆಳೆಯನ್ನು ಇವರ ಮನೆಯವರ ಅಶನಾರ್ಥವಾಗಿ (ಜೀವನಾಂಶಕ್ಕಾಗಿ) ತಂದು ಕೊಡಬೇಕು. ಆದರೆ ಮೆಫೀಬೋಶೆತ್ತಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವುದು>> ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ, ಇಪ್ಪತ್ತು ಮಂದಿ ಸೇವಕರು ಇದ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 11 ಚೀಬನು ಅರಸನಿಗೆ, <<ಒಡೆಯನಾದ ಅರಸನ ಅಪ್ಪಣೆಯಂತೆ ನಿನ್ನ ಸೇವಕನು ನಡೆಯುವನು>> ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುವವನಾದನು.
\v 12 ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯವರೆಲ್ಲರೂ, ಅವನ ಸೇವಕರಾದರು.
\v 13 ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದರಿಂದ ಅವನು ಯೆರೂಸಲೇಮಿನಲ್ಲೇ ವಾಸಮಾಡಿದನು. ಅವನ ಎರಡು ಕಾಲುಗಳು ಕುಂಟಾಗಿದ್ದವು.
2018-04-26 17:00:56 +00:00
\s5
\c 10
2019-01-21 20:20:50 +00:00
\s ದಾವೀದನು ಅಮ್ಮೋನಿಯರ ಮತ್ತು ಅರಾಮ್ಯರ ವಿರುದ್ಧ ಯುದ್ಧಮಾಡಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಇದಾದ ನಂತರ ಅಮ್ಮೋನಿಯರ ಅರಸನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ಅರಸನಾದನು.
\v 2 ದಾವೀದನು, <<ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು>> ಎಂದುಕೊಂಡು, ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು.
\v 3 ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, <<ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ>> ಎಂದು ಹೇಳಿದರು.
2018-04-26 17:00:56 +00:00
\s5
2019-01-21 20:20:50 +00:00
\v 4 ಇದರಿಂದ ಹಾನೂನನು ದಾವೀದನ ಪ್ರತಿನಿಧಿಗಳನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಸೊಂಟದಿಂದ ಕೆಳಗೆ ಅವರ ನಗ್ನತೆಯು ಕಾಣುವಂತೆ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.
\v 5 ಅವರು ಈ ವರ್ತಮಾನವನ್ನು ದಾವೀದನಿಗೆ ಹೇಳಿ ಕಳುಹಿಸಿದಾಗ ಅವನು ಬಹಳವಾಗಿ ಅಪಮಾನ ಹೊಂದಿದ ಅವರಿಗೆ <<ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋ ಪಟ್ಟಣದಲ್ಲಿದ್ದು ಅನಂತರ ಹಿಂತಿರುಗಿ ಬನ್ನಿರಿ>> ಎಂದು ತನ್ನ ಸೇವಕರ ಮೂಲಕ ಹೇಳಿಕಳುಹಿಸಿದ.
\p
2018-04-26 17:00:56 +00:00
\s5
2019-01-21 20:20:50 +00:00
\v 6 ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು
\v 7 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು.
\v 8 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹರಚಿಸಿದರು. ಚೋಬ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮತ್ತು ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.
\v 10 ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 11 ಯೋವಾಬನು ಅವನಿಗೆ, <<ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ. ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.
\v 12 ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ>> ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 13 ಯೋವಾಬನು ಅವನ ಜನರು ಅರಾಮ್ಯರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.
\v 14 ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು.
\p
2018-04-26 17:00:56 +00:00
\s5
2019-01-21 20:20:50 +00:00
\v 15 ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಒಟ್ಟಾಗಿ ಕೂಡಿಬಂದರು.
\v 16 ಹದದೆಜೆರನು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಬರಲು ಹೇಳಿ ಕಳುಹಿಸಿದನು. ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ಈ ಸುದ್ದಿಯು ದಾವೀದನಿಗೆ ತಲುಪಿದಾಗ ಅವನು ಇಸ್ರಾಯೇಲರೆಲ್ಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ವ್ಯೂಹರಚಿಸಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ,
\v 18 ಅರಾಮ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ವತ್ತು ಸಾವಿರ ಮಂದಿ
\f +
\fr 10:18
\ft ಅಥವಾ ಕಾಲಾಳುಗಳು.
\f* ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.
\v 19 ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದೆವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ.
2018-04-26 17:00:56 +00:00
\s5
\c 11
2019-01-21 20:20:50 +00:00
\s ದಾವೀದನ ನೀಚಕೃತ್ಯಗಳು
\p
\v 1 ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.
2018-04-26 17:00:56 +00:00
\p
\s5
2019-01-21 20:20:50 +00:00
\v 2 ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.
\v 3 ಕೂಡಲೆ ದಾವೀದನು ಒಬ್ಬನನ್ನು ಕರೆದು, <<ಆ ಸ್ತ್ರೀ ಯಾರು?>> ಎಂದು ವಿಚಾರಿಸಲು ಅವನು, <<ಆಕೆಯು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆ ಅಲ್ಲವೇ?>> ಎಂದು ಉತ್ತರ ಕೊಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 4 ಆಗ ದಾವೀದನು ಆಗ ತಾನೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ಕರೆದು ತರುವಂತೆ ದೂತರನ್ನು ಕಳುಹಿಸಿದನು. ಆಕೆಯು ಬರಲು ಅವನು ಆಕೆಯನ್ನು ಸಂಗಮಿಸಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು.
\v 5 ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 6 ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, <<ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು>> ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು.
\v 7 ಊರೀಯನು ಬಂದಾಗ ದಾವೀದನು, <<ಯೋವಾಬನೂ ಮತ್ತು ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದಿದೆ?>> ಎಂದು ವಿಚಾರಿಸಿದ, ನಂತರ
\v 8 ಅವನಿಗೆ, <<ಮನೆಗೆ ಹೋಗಿ ಕೈಕಾಲು ತೊಳೆದುಕೋ
\f +
\fr 11:8
\fq ಮನೆಗೆ ಹೋಗಿ ಕೈಕಾಲು ತೊಳೆದುಕೋ
\ft ಕೇವಲ ಕೆರಗಳನ್ನು ಧರಿಸಿಕೊಂಡು ಧೂಳಿನ ರಸ್ತೆಗಳಲ್ಲಿನ ಮಾಡಿದ ಸುದೀರ್ಘ ಪ್ರಯಾಣದ ನಂತರ ಉರಿಯನಿಗೆ ದಣಿವಾರಿಸಿಕೊಳ್ಳುವುದಕ್ಕಿರುವ ಆಮಂತ್ರಣವೇ ಹೊರತು ಬೇರೇನೂ ಇಲ್ಲ ಎಂದು ಅನೇಕರು ಯೋಚಿಸುತ್ತಾರೆ (ಆದಿ. 18.4; 19.2; 24.32; ನ್ಯಾಯ. 19.21). ಆದಾಗ್ಯೂ, ಇತರ ವ್ಯಾಖ್ಯಾನಕಾರರು, ಇದು ಕೆಲವೊಂದು ಸಂದರ್ಭಗಳಲ್ಲಿ ಲೈಂಗಿಕ ಸಂಭೋಗವನ್ನು ಸೂಚಿಸುವಂಥ ಸೌಮ್ಯೋಕ್ತಿಯಾಗಿದೆ ಎಂದು ಉಲ್ಲೇಖಿಸುತ್ತಾರೆ, ಏಕೆಂದರೆ "ಪಾದಗಳು" ಎಂಬ ಪದವು ಕೆಲವೊಮ್ಮೆ ಜನನಾಂಗಗಳನ್ನು ಸೂಚಿಸುತ್ತದೆ (ನೋಡಿರಿ, ಉದಾಹರಣೆಗೆ, ರೂತ 3.4, 7, 8; ಪರಮ 5.3). ಉರಿಯನು ಲೈಂಗಿಕತೆಯ ಬಗ್ಗೆ ಯೋಚಿಸುವಂತೆ ಮಾಡುವಂಥ ಸಂದಿಗ್ಧ ಅರ್ಥವುಳ್ಳ ಅಭಿವ್ಯಕ್ತಿಯನ್ನು ದಾವೀದನು ಉದ್ದೇಶಪೂರ್ವಕವಾಗಿ ಬಳಸಿರುವ ಸಾಧ್ಯತೆಯಿದೆ.
\f* >> ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು.
\v 10 ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನವು ದಾವೀದನಿಗೆ ತಿಳಿದಾಗ ಅವನು ಊರೀಯನಿಗೆ, <<ನೀನು ಪ್ರಯಾಣಮಾಡಿಕೊಂಡು ಬಂದಿಯಲ್ಲಾ, ಯಾಕೆ ಮನೆಗೆ ಹೋಗಲಿಲ್ಲ?>> ಅಂದನು.
\v 11 ಅದಕ್ಕೆ ಊರೀಯನು, <<ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ>> ಎಂದು ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 12 ಆಗ ದಾವೀದನು ಅವನಿಗೆ, <<ನೀನು ಈ ಹೊತ್ತು ಇಲ್ಲೇ ಇರು. ನಾಳೆ ನಿನ್ನನ್ನು ಕಳುಹಿಸುತ್ತೇನೆ>> ಎಂದು ಆಜ್ಞಾಪಿಸಿದನು. ಊರೀಯನು ಆ ದಿನ ಯೆರೂಸಲೇಮಿನಲ್ಲೇ ಇದ್ದನು.
\v 13 ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 14 ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು.
\v 15 ಅದರಲ್ಲಿ, <<ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂಭಾಗದಲ್ಲಿ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿರಿ>> ಎಂಬುದಾಗಿ ಬರೆದಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 16 ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶೂರರಾದ ಶತ್ರುಸೈನಿಕರು ಎಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು.
\v 17 ಆ ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಾಡಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಸಹ ಸತ್ತನು.
\p
2018-04-26 17:00:56 +00:00
\s5
2019-01-21 20:20:50 +00:00
\v 18 ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ, <<ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು.
\v 19 ನೀನು ಯುದ್ಧ ಸಮಾಚಾರವನ್ನು ಹೇಳಿ ಮುಗಿಸಿದ ನಂತರ ಅರಸನು ಕೋಪಗೊಂಡು ನಿನ್ನನ್ನು,
\v 20 <ನೀವು ಯುದ್ಧ ಮಾಡುವುದಕ್ಕಾಗಿ ಪಟ್ಟಣದ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರಗೋಡೆಯ ಮೇಲಣಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ?
2018-04-26 17:00:56 +00:00
\s5
2019-01-21 20:20:50 +00:00
\v 21 ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?> ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು>> ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 22 ಆ ದೂತನು ಹೋಗಿ ಯೋವಾಬನ ಆಜ್ಞೆಯಂತೆ ದಾವೀದನಿಗೆ ತಿಳಿಸಿದ್ದೇನೆಂದರೆ,
\v 23 <<ಆ ಊರಿನವರು ಮಹಾಸೈನ್ಯಬಲದೊಡನೆ ಯುದ್ಧಮಾಡುವುದಕ್ಕೆ ಬಯಲಿಗೆ ಬಂದರು. ನಾವು ಅವರನ್ನು ಊರ ಬಾಗಿಲಿನವರೆಗೂ ಹಿಂದಟ್ಟಿದೆವು.
2018-04-26 17:00:56 +00:00
\s5
2019-01-21 20:20:50 +00:00
\v 24 ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದ್ದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಸತ್ತನು>> ಎಂದನು.
\p
\v 25 ಅದಕ್ಕೆ ದಾವೀದನು ದೂತನಿಗೆ, <<ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 26 ಊರೀಯನ ಮರಣದ ವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು.
\v 27 ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.
2018-04-26 17:00:56 +00:00
\s5
\c 12
2019-01-21 20:20:50 +00:00
\s ದಾವೀದನಿಗೆ ನಾತಾನನ ಮುಖಾಂತರ ಸಂದೇಶ
2018-04-26 17:00:56 +00:00
\p
2019-01-21 20:20:50 +00:00
\v 1 ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, <<ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು.
\v 2 ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು.
\v 3 ಬಡವನಿಗೆ ಒಂದು ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ಮಗಳಂತೆ ಅವನ ಸಂಗಡಲೂ, ಅವನ ಮಕ್ಕಳ ಸಂಗಡಲೂ ಬೆಳೆಯುತ್ತಾ, ಅವರೊಡನೆ ರೊಟ್ಟಿ ತಿನ್ನುತ್ತಾ, ಅವರ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆ ಮೇಲೆಯೇ ಒರಗಿಕೊಂಡು ನಿದ್ದೆ ಮಾಡುತ್ತಿತ್ತು.
2018-04-26 17:00:56 +00:00
\s5
2019-01-21 20:20:50 +00:00
\v 4 ಒಂದು ದಿನ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಹೆಣ್ಣುಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅಡಿಗೆ ಮಾಡಿಸಿದನು>> ಎಂದು ಹೇಳಿದನು.
\v 5 ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, <<ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು.
\v 6 ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 7 ಆಗ ನಾತಾನನು ದಾವೀದನನ್ನು ನೋಡಿ, <<ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, <ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.
\v 8 ಇದಲ್ಲದೆ ನಾನು ನಿನಗೆ ನಿನ್ನ ಯಜಮಾನನ ಮನೆಯನ್ನು ಒಪ್ಪಿಸಿದೆನು. ಅವನ ಹೆಂಡತಿಯರನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಇಸ್ರಾಯೇಲ್ ಹಾಗೂ ಯೆಹೂದ ಕುಲಗಳನ್ನು ನಿನಗೆ ವಶಪಡಿಸಿದೆನು. ಇದೂ ಸಾಕಾಗಾದೆ ಹೋಗಿದ್ದರೆ ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆನು.
2018-04-26 17:00:56 +00:00
\s5
2019-01-21 20:20:50 +00:00
\v 9 ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.
\v 10 ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 11 ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.
\v 12 ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಹಗಲಿನಲ್ಲೇ ನೆರವೇರುವುದು> >> ಎಂದನು.
\s ದಾವೀದನ ಪಶ್ಚಾತ್ತಾಪ
\p
\v 13 ಆಗ ದಾವೀದನು ನಾತಾನನಿಗೆ, <<ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ>> ಎಂದು ಹೇಳಿದನು. ನಾತಾನನು ಅವನಿಗೆ <<ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 14 ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು>> ಎಂದು ಹೇಳಿ ಮನೆಗೆ ಹೊರಟುಹೋದನು.
\v 15 ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಯೆಹೋವನ ಪೆಟ್ಟಿನಿಂದ ಬಹಳವಾಗಿ ಅಸ್ವಸ್ಥವಾಯಿತು.
\p
2018-04-26 17:00:56 +00:00
\s5
2019-01-21 20:20:50 +00:00
\v 16 ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.
\v 17 ಅವನ ಮನೆಯ ಹಿರಿಯ ಸೇವಕರು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೇ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.
\v 18 ಏಳನೆಯ ದಿನ ಮಗು ಸತ್ತುಹೋಯಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, <<ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣದ ವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ>> ಎಂದು ಮಾತನಾಡಿಕೊಳ್ಳುತ್ತಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 19 ಸೇವಕರು ಈ ಪ್ರಕಾರ ಪಿಸುಗುಟ್ಟುವುದನ್ನು ಕಂಡು ದಾವೀದನು, ಮಗು ಸತ್ತು ಹೋಯಿತೆಂದು ತಿಳಿದು ಸೇವಕರನ್ನು, <<ಮಗು ಸತ್ತುಹೋಯಿತೋ?>> ಎಂದು ಕೇಳಿದನು. ಅವರು, <<ಹೌದು ಸತ್ತುಹೋಯಿತು>> ಎಂದು ಉತ್ತರ ಕೊಟ್ಟರು
\v 20 ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 21 ಇದನ್ನು ನೋಡಿ ಅವನ ಸೇವಕರು ಅವನಿಗೆ, <<ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸಮಾಡಿದ್ದೀ. ಹುಡುಗನು ಸತ್ತ ನಂತರ ಎದ್ದು ಊಟ ಮಾಡಿರುವೆ>> ಎಂದರು.
\v 22 ದಾವೀದನು ಅವರಿಗೆ, <<ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು.
\v 23 ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ>> ಎಂದು ಉತ್ತರ ಕೊಟ್ಟನು.
\s ಸೊಲೊಮೋನನ ಜನನ
\p
2018-04-26 17:00:56 +00:00
\s5
2019-01-21 20:20:50 +00:00
\v 24 ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆಯು ಒಬ್ಬ ಮಗನನ್ನು ಹೆತ್ತಾಗ ದಾವೀದನು ಅವನಿಗೆ <<ಸೊಲೊಮೋನನು>> ಎಂದು ಹೆಸರಿಟ್ಟನು. ಯೆಹೋವನು ಅವನನ್ನು ಪ್ರೀತಿಸಿದನು.
\v 25 ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಯೆಹೋವನ ಪ್ರೀತಿಯ ನಿಮಿತ್ತ ಆ ಹುಡುಗನಿಗೆ <<
\f +
\fr 12:25
\ft ಅಂದರೆ ಯೆಹೋವನಿಗೆ ಪ್ರಿಯನು.
\f* ಯೆದೀದ್ಯ>> ಎಂದು ಹೆಸರಿಟ್ಟನು.
\s ದಾವೀದನು ರಬ್ಬ ಪಟ್ಟಣವನ್ನು ವಶಮಾಡಿಕೊಂಡದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 26 ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.
\v 27 ಯೋವಾಬನು ದಾವೀದನಿಗೆ ದೂತರ ಮುಖಾಂತರವಾಗಿ, <<ನಾನು ರಬ್ಬಕ್ಕೆ ಮುತ್ತಿಗೆ ಹಾಕಿ, ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.
\v 28 ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ, ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ, ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವುದು>> ಎಂದು ಹೇಳಿ ಕಳುಹಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 29 ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು.
\v 30 ಇದಲ್ಲದೆ ಅವನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲೆ
\f +
\fr 12:30
\fq ನಾಲ್ಕು ಸಾವಿರ ತೊಲೆ
\ft ಸುಮಾರು 34 ಕಿಲೋಗ್ರಾಂ.
\f* ತೂಕವುಳ್ಳದ್ದಾಗಿತ್ತು. ಅಲ್ಲದೆ ಅದರಲ್ಲಿ ಅಮೂಲ್ಯರತ್ನವನ್ನು ಇರಿಸಲಾಗಿತ್ತು. ಅವರು ಅದನ್ನು ದಾವೀದನ ಶಿರಸ್ಸಿನ ಮೇಲಿರಿಸಿದರು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು.
2018-04-26 17:00:56 +00:00
\s5
2019-01-21 20:20:50 +00:00
\v 31 ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.
2018-04-26 17:00:56 +00:00
\s5
\c 13
2019-01-21 20:20:50 +00:00
\s ಅಮ್ನೋನನು ಮತ್ತು ತಾಮಾರಳು
\p
\v 1 ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಸುಂದರಿಯಾದ ಒಬ್ಬಳು ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.
\v 2 ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ತಾಮಾರಳು ಕನ್ಯೆಯಾಗಿದ್ದರಿಂದ ಆಕೆಗೆ ಏನು ಮಾಡಲು ಸಾಧ್ಯವಿಲ್ಲವೆಂದು ಅಮ್ನೋನನು ತಿಳಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 3 ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.
\v 4 ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, <<ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ>> ಎಂದು ಕೇಳಲು ಅವನು, <<ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ>> ಎಂದು ಉತ್ತರ ಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 5 ಆಗ ಯೋನಾದಾಬನು ಅವನಿಗೆ, <<ನೀನು ಅಸ್ವಸ್ಥನಾದವನಂತೆ ಹಾಸಿಗೆಯ ಮೇಲೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ನೋಡುವುದಕ್ಕೆ ಬಂದಾಗ ಅವನಿಗೆ, <ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸು. ಆಕೆ ನನ್ನೆದುರಿನಲ್ಲಿಯೆ ಸಿದ್ಧಮಾಡಿ, ತನ್ನ ಕೈಯಿಂದಲೇ ಊಟಮಾಡಿಸಲಿ> ಎಂದು ಹೇಳು>> ಎಂದನು.
\p
\v 6 ಅಮ್ನೋನನು ಅಸ್ವಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, <<ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣ ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 7 ಆಗ ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ, <<ನೀನು ನಿನ್ನ ಅಣ್ಣನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಆಹಾರವನ್ನು ಸಿದ್ಧಮಾಡು>> ಎಂದು ಹೇಳಿದನು.
\v 8 ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು. ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ, ಅವನ ಕಣ್ಣ ಮುಂದೆಯೇ ರೊಟ್ಟಿಗಳನ್ನು ಮಾಡಿದಳು.
\v 9 ಅನಂತರ ಆಕೆಯು ಅವುಗಳನ್ನು ಪಾತ್ರೆಯಿಂದ ತೆಗೆದು, ಅವನ ಮುಂದೆ ಇಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 10 ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ, <<ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ>> ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಆಹಾರವನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು.
\v 11 ಕೂಡಲೆ ಅವನು ಆಕೆಯನ್ನು ಹಿಡಿದು <<ನನ್ನ ತಂಗಿಯೇ ಬಂದು ನನ್ನ ಸಂಗಡ ಮಲಗಿಕೋ>> ಎಂದನು.
\v 12 ಆಕೆಯು; <<ಅಣ್ಣನೇ, ಬೇಡ, ನನ್ನನ್ನು ಅಪಮಾನಪಡಿಸಬೇಡ, ಇಸ್ರಾಯೇಲರಲ್ಲಿ ಇಂಥ ನೀಚಕಾರ್ಯವು ನಡೆಯಬಾರದು. ಇಂಥ ಅವಮಾನಕರವಾದ ಕೆಲಸವನ್ನು ಮಾಡಬೇಡ.
2018-04-26 17:00:56 +00:00
\s5
2019-01-21 20:20:50 +00:00
\v 13 ಈ ಅಪಮಾನವನ್ನು ನಾನು ಮರೆಮಾಡುವುದಾದರೂ ಹೇಗೆ? ನಿನಗಂತೂ ಇಸ್ರಾಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತನಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು>> ಎಂದಳು.
\v 14 ಆದರೆ ಅವನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 15 ಇದಾದ ಮೇಲೆ ಅವನಿಗೆ ಆಕೆಯ ಮೇಲೆ ದ್ವೇಷಹುಟ್ಟಿತು. ಅವಳ ಬಗ್ಗೆ ಇದ್ದ ಪ್ರೀತಿಗಿಂತ ಆಕೆಯ ಮೇಲಿನ ದ್ವೇಷವೇ ಹೆಚ್ಚಾಯಿತು.
\v 16 ಅಮ್ನೋನನು ಆಕೆಗೆ, <<ಎದ್ದು ಹೋಗು>> ಎಂದು ಹೇಳಿದಾಗ ಆಕೆಯು, <<ಹಾಗೆ ಮಾಡಬೇಡ, ನನ್ನನ್ನು ಹೊರಡಿಸಿಬಿಡುವುದು ನೀನು ಮಾಡಿದ ಮೊದಲನೆಯ ಅನ್ಯಾಯಕ್ಕಿಂತ ಹೆಚ್ಚಿನ ಅನ್ಯಾಯವಾಗಿದೆ>> ಅಂದಳು.
\v 17 ಆದರೆ ಅವನು ಆಕೆಯ ಮಾತನ್ನು ಕೇಳದೆ, ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಆಳನ್ನು ಕರೆದು ಅವನಿಗೆ, <<ಇವಳನ್ನು ಹೊರಗೆ ತಳ್ಳಿ ಕದವನ್ನು ಮುಚ್ಚು>> ಎಂದು ಆಜ್ಞಾಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 18 ಆಕೆಯು ನಾನಾ ವರ್ಣವುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಇದೇ ತರಹದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು. ಆತನ ಸೇವಕರು ಆಕೆಯನ್ನು ಹೊರಗೆ ಕಳುಹಿಸಿ ಕದವನ್ನು ಮುಚ್ಚಿದನು.
\v 19 ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.
2018-04-26 17:00:56 +00:00
\s5
2019-01-21 20:20:50 +00:00
\v 20 ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು, <<ನಿನ್ನ ಅಣ್ಣನಾದ ಅಮ್ನೋನನು ನಿನ್ನನ್ನು ಸಂಗಮಿಸಿದನೋ? ತಂಗಿ, ಈಗ ಸುಮ್ಮನಿರು. ಅವನು ನಿನ್ನ ಅಣ್ಣನಲ್ಲವೋ? ಈ ಸಂಗತಿಯನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ>> ಎಂದು ಹೇಳಿದನು. ತಾಮಾರಳು ಒಂಟಿಯಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಮಾಡಿದಳು.
\v 21 ಅರಸನಾದ ದಾವೀದನು ಈ ಸಂಗತಿಯನ್ನು ಕೇಳಿ ಬಹಳವಾಗಿ ಕೋಪಗೊಂಡನು.
\v 22 ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೆಯ ಮಾತುಗಳನ್ನಾಗಲಿ ಕೆಟ್ಟ ಮಾತುಗಳನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.
\s ಅಬ್ಷಾಲೋಮನು ಅಮ್ನೋನನನ್ನು ಕೊಂದದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 23 ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು.
\v 24 ಅವನು ಅರಸನ ಬಳಿಗೆ ಹೋಗಿ ಅವನನ್ನು, <<ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರೆಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಬರಲಿ>> ಎಂದು ಬೇಡಿಕೊಂಡನು.
2018-04-26 17:00:56 +00:00
\s5
2019-01-21 20:20:50 +00:00
\v 25 ಅರಸನು ಅವನಿಗೆ, <<ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು>> ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಹೋಗಲಿಲ್ಲ. ಅವನನ್ನು ಆಶೀರ್ವದಿಸಿದನು ಅಷ್ಟೇ.
\v 26 ಆಗ ಅಬ್ಷಾಲೋಮನು, <<ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ಕಳುಹಿಸು>> ಅಂದನು. ಅದಕ್ಕೆ ಅರಸನು, <<ಅವನೇಕೆ ನಿನ್ನ ಸಂಗಡ ಬರಬೇಕು?>> ಎಂದು ಕೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 27 ಆದರೆ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನು ಕಳುಹಿಸಿದನು.
\v 28 ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, <<ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ>> ಎಂದು ಹೇಳಿದನು.
\v 29 ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.
2018-04-26 17:00:56 +00:00
\s5
2019-01-21 20:20:50 +00:00
\v 30 ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, <<ಅಬ್ಷಾಲೋಮನು ರಾಜಪುತ್ರರೆಲ್ಲರನ್ನು ಕೊಂದು ಹಾಕಿದನು ಒಬ್ಬನನ್ನೂ ಉಳಿಸಲಿಲ್ಲ>> ಎಂಬ ಸುದ್ದಿ ಮುಟ್ಟಿತು.
\v 31 ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.
2018-04-26 17:00:56 +00:00
\s5
2019-01-21 20:20:50 +00:00
\v 32 ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, <<ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಾಗಿನಿಂದ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದಲೇ ತೋರುತ್ತಿತ್ತು.
\v 33 ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ. ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ>> ಎಂದು ಹೇಳಿ ಸಂತೈಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 34 ಅಬ್ಷಾಲೋಮನು ತಪ್ಪಿಸಿಕೊಂಡು ಓಡಿಹೋದನು. ಅಷ್ಟರಲ್ಲಿ ದಾರಿನೋಡುತ್ತಿದ್ದ ಕಾವಲುಗಾರನು, ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವುದನ್ನು ಕಂಡನು.
\v 35 ಯೋನಾದಾಬನು ಅರಸನಿಗೆ, <<ಇಗೋ ರಾಜಕುಮಾರರು ಬರುತ್ತಿದ್ದಾರೆ. ನಿನ್ನ ಸೇವಕನ ಮಾತಿನಂತೆಯೆ ಆಯಿತಲ್ಲವೋ?>> ಎಂದು ಹೇಳಿ ಮುಗಿಸುವಷ್ಟರಲ್ಲಿ,
\v 36 ರಾಜಕುಮಾರರು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು.
2018-04-26 17:00:56 +00:00
\s5
2019-01-21 20:20:50 +00:00
\v 37 ದಾವೀದನು ತನ್ನ ಮಗನಿಗೋಸ್ಕರ ಪ್ರತಿದಿನವೂ ದುಃಖಪಡುತ್ತಿದ್ದನು.
\v 38 ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು.
\v 39 ಅರಸನಾದ ದಾವೀದನು ಅಮ್ನೋನನ ಮರಣದ ವಿಷಯವಾಗಿ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು.
2018-04-26 17:00:56 +00:00
\s5
\c 14
2019-01-21 20:20:50 +00:00
\s ಅಬ್ಷಾಲೋಮನು ಹಿಂದಿರುಗಲು ಯೋವಾಬನ ಪ್ರಯತ್ನ
2018-04-26 17:00:56 +00:00
\p
2019-01-21 20:20:50 +00:00
\v 1 ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು
\v 2 ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, <<ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,
\v 3 ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು>> ಎಂದು ಆಜ್ಞಾಪಿಸಿ, ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 4 ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು, <<ಅರಸನೇ ರಕ್ಷಿಸು>> ಎಂದು ಕೂಗಿದಳು.
\v 5 ಅರಸನು, <<ನಿನಗೇನಾಯಿತು?>> ಎಂದು ಆಕೆಯನ್ನು ಕೇಳಲು ಆಕೆಯು,
\v 6 <<ನಾನು ವಿಧವೆ, ಗಂಡನು ಸತ್ತು ಹೋಗಿದ್ದಾನೆ. ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿನ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರು ಯಾರೂ ಇರಲಿಲ್ಲವಾದ್ದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.
\m
2018-04-26 17:00:56 +00:00
\s5
2019-01-21 20:20:50 +00:00
\v 7 ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು <ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ> ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ>> ಎಂದು ಉತ್ತರ ಕೊಟ್ಟಳು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಆಗ ಅರಸನು, <<ನೀನು ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ>> ಎಂದು ಹೇಳಿದನು.
\v 9 ಆ ತೆಕೋವದ ಸ್ತ್ರೀಯು, <<ಅರಸನೇ, ಒಡೆಯನೇ ಅಪರಾಧವು ನನ್ನ ಮೇಲೆಯೂ, ನನ್ನ ಕುಟುಂಬದ ಮೇಲೆಯು ಇರಲಿ. ಅರಸನಿಗೂ ಅವನ ಸಿಂಹಾಸನಕ್ಕೂ ದೋಷ ಹತ್ತದಿರಲಿ>> ಎಂದಳು.
2018-04-26 17:00:56 +00:00
\s5
2019-01-21 20:20:50 +00:00
\v 10 ಅರಸನು ಆಕೆಗೆ, <<ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ>> ಎಂದನು.
\p
\v 11 ಆಗ ಆ ಸ್ತ್ರೀಯು, <<ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ನಾಶಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬುದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು>> ಎಂದು ಬೇಡಿಕೊಂಡಳು. ಅದಕ್ಕೆ ಅರಸನು, <<ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 12 ಆಗ ಸ್ತ್ರೀಯು, <<ನನ್ನ ಒಡೆಯನೇ, ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ>> ಅನ್ನಲು ಅರಸನು, <<ಹೇಳು>> ಎಂದನು.
\v 13 ಆಕೆಯು, <<ಅರಸನು ಈ ತೀರ್ಪು ಕೊಟ್ಟಿದ್ದರಿಂದ ತನ್ನನ್ನು ತಾನೇ ಅಪರಾಧಿ ಎಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟ ಮಗನನ್ನು ಸೇರಿಸಿಕೊಳ್ಳದೆ ಹೋಗುವುದರಿಂದ ದೇವಪ್ರಜೆಗೆ ವಿರೋಧವಾಗಿ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?
\v 14 ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.
2018-04-26 17:00:56 +00:00
\s5
2019-01-21 20:20:50 +00:00
\v 15 ಅದಿರಲಿ ಜನರು ನಿನ್ನ ಸೇವಕಿಯಾದ ನನ್ನನ್ನು ಹೆದರಿಸಿದ್ದರಿಂದ, <ನಾನು ಈ ಸಂಗತಿಯನ್ನು ಅರಸನಿಗೆ ತಿಳಿಸಿದರೆ, ತನ್ನ ಸೇವಕಿಯ ಬಿನ್ನಹವನ್ನು ಲಾಲಿಸಬಹುದು ಎಂದುಕೊಂಡು ನನ್ನ ಒಡೆಯನಾದ ಅರಸನಿಗೆ ಇದನ್ನು ತಿಳಿಸುವುದಕ್ಕೆ ಬಂದೆನು ಎಂದಳು.
\v 16 ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ, ನನ್ನ ಮಗನನ್ನೂ ದೇವರ ಸ್ವತ್ತಿನಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.>
\v 17 ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ>> ಎಂದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 18 ಆಗ ಅರಸನು ಆ ಸ್ತ್ರೀಗೆ, <<ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ. ನೀನು ಅದನ್ನು ಮರೆಮಾಚದೆ ತಿಳಿಸಬೇಕು>> ಎಂದನು. ಆಗ ಆಕೆಯು, <<ಅರಸನ ಅಪ್ಪಣೆಯಾಗಲಿ>> ಎಂದು ಉತ್ತರಕೊಟ್ಟಳು.
\v 19 ಅರಸನು, <<ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?>> ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, <<ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.
\v 20 ಅಬ್ಷಾಲೋಮನು ನಡೆದಿರುವ ಘಟನೆಯಿಂದ ಅರಸನು ಕೋಪಗೊಳ್ಳದೆ ಇರುವಂತೆ ವಿಷಯವನ್ನು ಈ ರೀತಿ ಹೇಳುವಂತೆ ನಿನ್ನ ಸೇವಕನಾದ ಯೋವಾಬನೇ ಇದನ್ನು ಕಲಿಸಿದನು. ಆದರೆ ನನ್ನ ಒಡೆಯನು ದೇವದೂತನಂಥ ಜ್ಞಾನಿ. ಅವನು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವನು>> ಎಂದು ಉತ್ತರಕೊಟ್ಟಳು.
2018-04-26 17:00:56 +00:00
\s5
2019-01-21 20:20:50 +00:00
\v 21 ಅನಂತರ ಅರಸನು ಯೋವಾಬನಿಗೆ, <<ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ, ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರೆದುಕೊಂಡು ಬಾ>> ಅಂದನು.
\s ದಾವೀದ ಅಬ್ಷಾಲೋಮರ ಸಂಧಾನ
\p
\v 22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, <<ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 23 ನಂತರ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.
\v 24 ಆದರೆ ಅರಸನು, <<ಅಬ್ಷಾಲೋಮನು ತನ್ನ ಮನೆಗೆ ಹೋಗಲಿ, ಅವನು ನನ್ನ ಮುಖವನ್ನು ನೋಡಬಾರದು>> ಎಂದು ಆಜ್ಞಾಪಿಸಿದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 25 ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.
\v 26 ಅವನ ತಲೆಯ ಕೂದಲು ಬಹು ಭಾರವಾದ್ದರಿಂದ ಪ್ರತಿ ವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ಕೂದಲು ರಾಜರ ತೂಕದ ಪ್ರಕಾರ
\f +
\fr 14:26
\ft 2.3 ಕಿಲೋಗ್ರಾಂ.
\f* ಇನ್ನೂರು ರೂಪಾಯಿ ತೂಕವಾಗುತ್ತಿತ್ತು.
\v 27 ಅವನಿಗೆ ಮೂರು ಮಂದಿ ಗಂಡು ಮಕ್ಕಳೂ, ಒಬ್ಬಳು ಮಗಳು ಇದ್ದಳು. ಮಗಳ ಹೆಸರು ತಾಮಾರಳು. ಈಕೆಯು ಬಹು ಸುಂದರಿಯಾಗಿದ್ದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 28 ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರ್ಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು.
\v 29 ಒಂದು ದಿನ ಅವನು ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 30 ಆದುದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ, <<ನೋಡಿರಿ, ಸಮೀಪದಲ್ಲಿಯೇ ಯೋವಾಬನ ಜವೆಗೋದಿಯ ಹೊಲವುಂಟಲ್ಲಾ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ>> ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
\v 31 ಆಗ ಯೋವಾಬನು ಅಬ್ಷಾಲೋಮನ ಮನೆಗೆ ಹೋಗಿ, <<ನಿನ್ನ ಸೇವಕರು ನನ್ನ ಹೊಲಕ್ಕೆ ಬೆಂಕಿ ಹಚ್ಚಿದ್ದೇಕೆ?>> ಎಂದು ಅವನನ್ನು ಕೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 32 ಅದಕ್ಕೆ ಅಬ್ಷಾಲೋಮನು ಅವನಿಗೆ, <<ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ, ಅಲ್ಲೇ ಇದ್ದರೆ ಒಳ್ಳೆಯದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು. ನಾನು ಹೇಗೂ ಅರಸನ ದರ್ಶನ ಮಾಡಬೇಕು. ನಾನು ಅಪರಾಧಿಯಾಗಿದ್ದರೆ ನನ್ನನ್ನು ಕೊಲ್ಲಿಸಲಿ>> ಎಂದನು.
\v 33 ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೇಕಳುಹಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಅರಸನು ಅವನನ್ನು ಮುದ್ದಿಟ್ಟನು.
2018-04-26 17:00:56 +00:00
\s5
\c 15
2019-01-21 20:20:50 +00:00
\s ಅಬ್ಷಾಲೋಮನ ಒಳಸಂಚು
2018-04-26 17:00:56 +00:00
\p
2019-01-21 20:20:50 +00:00
\v 1 ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.
\v 2 ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, <<ನೀವು ಯಾವ ಊರಿನರವರು?>> ಎಂದು ಕೇಳುವನು. ಅವರು, <<ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು>> ಎಂದು ಉತ್ತರ ಕೊಡುವರು.
2018-04-26 17:00:56 +00:00
\s5
2019-01-21 20:20:50 +00:00
\v 3 ಆಗ ಅಬ್ಷಾಲೋಮನು, <<ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ.
\v 4 ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು>> ಎಂದು ಹೇಳುವನು.
2018-04-26 17:00:56 +00:00
\s5
2019-01-21 20:20:50 +00:00
\v 5 ಯಾರಾದರೂ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವರನ್ನು ಕೂಡಲೆ ಕೈಚಾಚಿ ಅವರನ್ನು ಹಿಡಿದು ಮುದ್ದಿಡುವನು.
\v 6 ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.
2018-04-26 17:00:56 +00:00
\s5
2019-01-21 20:20:50 +00:00
\v 7 ನಾಲ್ಕು ವರ್ಷಗಳಾದ ನಂತರ ಅಬ್ಷಾಲೋಮನು ಅರಸನಿಗೆ, <<ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ.
\v 8 ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ>> ಎಂದು ವಿಜ್ಞಾಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 9 ಆಗ ಅರಸನು, <<ಹೋಗಿಬಾ, ನಿನಗೆ ಶುಭವಾಗಲಿ>> ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟು ಹೋದನು.
\v 10 ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, <<ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ <ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ> >> ಎಂದು ಹೇಳಿಸಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 11 ಅಬ್ಷಾಲೋಮನು ಯೆರೂಸಲೇಮಿನಿಂದ ಆರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ.
\v 12 ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.
\s ದಾವೀದನು ಯೆರೂಸಲೇಮಿನಿಂದ ಓಡಿಹೋದದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 13 ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು.
\v 14 ಅವನು ಯೆರೂಸಲೇಮಿನಲ್ಲಿ ತನ್ನ ಸೇವಕರಿಗೆ, <<ಏಳಿರಿ, ಓಡಿಹೋಗೋಣ. ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ. ಅವನು ಆಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು, ನಮಗೆ ದುರ್ಗತಿಯನ್ನು ಉಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸುವನು>> ಎಂದು ಹೇಳಿದನು.
\v 15 ಸೇವಕರು ಅರಸನಿಗೆ, <<ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ>> ಎಂದು ಉತ್ತರ ಕೊಟ್ಟರು.
2018-04-26 17:00:56 +00:00
\s5
2019-01-21 20:20:50 +00:00
\v 16 ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.
\v 17 ಅರಸನು ಅವನ ಜೊತೆಯಲ್ಲಿ ಹೊರಟು ಹೋದ ಜನರೆಲ್ಲರೂ ಪಟ್ಟಣದ ಕಡೆಯ ಮನೆಯ ಬಳಿಯಲ್ಲಿ ಸ್ವಲ್ಪ ಹೊತ್ತು ನಿಂತರು.
\v 18 ದಾವೀದನೂ, ಅವನ ಎಲ್ಲಾ ಸೇವಕರೂ, ಎಲ್ಲಾ ಕೆರೇತ್ಯ ಮತ್ತು ಎಲ್ಲಾ ಪೆಲೇತ್ಯ ಎಂಬ ಕಾವಲು ದಂಡುಗಳೂ, ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಗಿತ್ತೀಯರೂ ಅರಸನ ಮುಂದೆ ಹಾದು ಹೋದರು.
\p
2018-04-26 17:00:56 +00:00
\s5
2019-01-21 20:20:50 +00:00
\v 19 ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, <<ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು.
\v 20 ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 21 ಅದಕ್ಕೆ ಇತ್ತೈ, <<ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು>> ಎಂದು ಉತ್ತರಕೊಟ್ಟನು.
\v 22 ಆಗ ದಾವೀದನು ಅವನಿಗೆ, <<ಒಳ್ಳೆಯದು, ಮುಂದೆ ನಡೆ>> ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೇವಕರನ್ನೂ, ಕುಟುಂಬದವರನ್ನೂ ಕರೆದುಕೊಂಡು ಮುಂದೆ ನಡೆದನು.
\v 23 ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 24 ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ
\f +
\fr 15:24
\ft ಅಥವಾ ಬೆಟ್ಟನ್ನೇರಿ ಹೋದನು.
\f* ಯಜ್ಞವನ್ನು ಅರ್ಪಿಸುತ್ತಿದ್ದನು.
\v 25 ಅರಸನು ಚಾದೋಕನಿಗೆ, <<ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.
\v 26 ಒಂದು ವೇಳೆ ಆತನು <ನಿನ್ನಲ್ಲಿ ನನಗೆ ಇಷ್ಟವಿಲ್ಲ> ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ>> ಎಂದನು.
\s5
\v 27 ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, <<ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು.
\v 28 ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು>> ಎಂದು ಹೇಳಿದನು.
\v 29 ಆಗ ಚಾದೋಕನೂ ಮತ್ತು ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗಿ ಅಲ್ಲೇ ವಾಸ ಮಾಡಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 30 ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.
\v 31 ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, <<ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು>> ಎಂದು ಪ್ರಾರ್ಥಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 32 ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.
\v 33 ಅರಸನು ಅವನಿಗೆ, <<ನೀನು ನನ್ನ ಸಂಗಡ ಬರುವುದಾದರೆ ನನಗೆ ಹೊರೆಯಾಗಿರುವೆ.
\v 34 ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, <ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ> ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು.
2018-04-26 17:00:56 +00:00
\s5
2019-01-21 20:20:50 +00:00
\v 35 ಅಲ್ಲಿ ನಿನ್ನ ಸಂಗಡ ಚಾದೋಕ್ ಮತ್ತು ಎಬ್ಯಾತಾರನೂ ಇರುತ್ತಾರಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ.
\v 36 ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು>> ಎಂದು ಹೇಳಿ ಅವನನ್ನು ಕಳುಹಿಸಿದನು.
\v 37 ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು.
2018-04-26 17:00:56 +00:00
\s5
\c 16
2019-01-21 20:20:50 +00:00
\s ಚೀಬನು ಅರಸನಿಗೆ ಆಹಾರ ತಂದದ್ದೂ
2018-04-26 17:00:56 +00:00
\p
2019-01-21 20:20:50 +00:00
\v 1 ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.
\v 2 ಅರಸನು ಚೀಬನನ್ನು, <<ಇವುಗಳನ್ನು ಯಾಕೆ ತಂದಿ?>> ಎಂದು ಕೇಳಿದನು. ಅವನು, <<ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಆಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲಿ ದಣಿದವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ>> ಎಂದು ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 3 ಅರಸನು ತಿರುಗಿ ಅವನನ್ನು, <<ನಿನ್ನ ಯಜಮಾನನ ಮಗನು ಎಲ್ಲಿದ್ದಾನೆ?>> ಎಂದು ಕೇಳಲು ಅವನು, <<ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲರು ಮರಳಿ ತನಗೇ ಕೊಡುವರೆಂದು ಹೇಳಿ ಅವನು ಯೆರೂಸಲೇಮಿನಲ್ಲೇ ಉಳಿದನು>> ಅಂದನು
\v 4 ಆಗ ಅರಸನು ಅವನಿಗೆ, <<ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ>> ಎಂದು ಹೇಳಲು ಅವನು, <<ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ>> ಎಂದನು.
\s ಶಿಮ್ಮಿಯು ದಾವೀದನನ್ನು ಶಪಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 5 ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು.
\v 6 ಅವನು ದಾವೀದನಿಗೂ, ಅವನ ಎಲ್ಲಾ ಸೇವಕರಿಗೂ, ಎಡಬಲದಲ್ಲಿರುವ ಸೈನಿಕರಿಗೂ ಮತ್ತು ಶೂರರಿಗೂ ಕಲ್ಲೆಸೆಯ ತೊಡಗಿದನು.
2018-04-26 17:00:56 +00:00
\s5
2019-01-21 20:20:50 +00:00
\v 7 ಅವನು ಅವರನ್ನು ಶಪಿಸುತ್ತಾ, <<ಹೋಗು ಕೊಲೆಗಾರನೆ, ನೀಚನೆ ಹೋಗು,
\v 8 ಸೌಲನ ರಾಜ್ಯವನ್ನು ಕಸಿದುಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯಿ ತೀರಿಸಿದ್ದಾನೆ. ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 9 ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ, <<ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ಶಪಿಸುವುದೇನು? ಅಪ್ಪಣೆಯಾಗಲಿ. ನಾನು ಅವನಿರುವಲ್ಲಿಗೆ ಹೋಗಿ, ಅವನ ತಲೆಯನ್ನು ಹಾರಿಸಿಕೊಂಡು ಬರುವೆನು>> ಎಂದನು.
\v 10 ಅದಕ್ಕೆ ಅರಸನು, <<ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, <ದಾವೀದನನ್ನು ಶಪಿಸು> ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ <ನೀನು ಹೀಗೇಕೆ ಮಾಡಿದಿ?> ಎಂದು ಅವನನ್ನು ಕೇಳುವವರು ಯಾರು?>> ಎಂದು ಉತ್ತರ ಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 11 ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, <<ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.
\v 12 ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 13 ದಾವೀದನೂ ಅವನ ಜನರೂ ದಾರಿ ಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ, ಕಲ್ಲೆಸೆಯುತ್ತಾ, ಮಣ್ಣೆರೆಚುತ್ತಾ ಗುಡ್ಡದ ಪಕ್ಕದಲ್ಲೇ ನಡೆಯುತ್ತಿದ್ದನು.
\v 14 ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ, ಹೋಗಬೇಕಾದ ಸ್ಥಳವನ್ನು ಸೇರಿ, ಅಲ್ಲಿ ವಿಶ್ರಮಿಸಿಕೊಂಡರು.
\s ಅಬ್ಷಾಲೋಮನು ಅಹೀತೋಫೆಲನ ಉಪದೇಶದಿಂದ ನಡೆದುಕೊಂಡ ರೀತಿ
\p
2018-04-26 17:00:56 +00:00
\s5
2019-01-21 20:20:50 +00:00
\v 15 ಅಬ್ಷಾಲೋಮನು ಎಲ್ಲಾ ಇಸ್ರಾಯೇಲರೊಡನೆ ಯೆರೂಸಲೇಮಿಗೆ ಬಂದನು. ಅಹೀತೋಫೇಲನೂ ಅವನ ಸಂಗಡ ಇದ್ದನು.
\v 16 ಅರ್ಕಿಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, <<ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ>> ಎಂದು ಕೂಗಿದನು.
2018-04-26 17:00:56 +00:00
\s5
2019-01-21 20:20:50 +00:00
\v 17 ಅಬ್ಷಾಲೋಮನು ಅವನಿಗೆ <<ಸ್ನೇಹಿತನ ಬಗ್ಗೆ ನಿನಗಿರುವ ಪ್ರಾಮಾಣಿಕತೆ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ?>> ಅಂದನು.
\v 18 ಅದಕ್ಕೆ ಹೂಷೈಯು, <<ಹಾಗಲ್ಲ ಯೆಹೋವನೂ, ಈ ಜನರೂ, ಎಲ್ಲಾ ಇಸ್ರಾಯೇಲರೂ ಯಾರನ್ನು ಆರಿಸಿದ್ದಾರೋ ನಾನು ಅವನ ಪಕ್ಷದವನಾಗಿರುತ್ತೇನೆ. ನಾನು ಅವನ ಬಳಿಯಲ್ಲಿ ವಾಸಿಸುವೆನು.
2018-04-26 17:00:56 +00:00
\s5
2019-01-21 20:20:50 +00:00
\v 19 ಇದಲ್ಲದೆ ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವೆ ಸಲ್ಲಿಸುವೆನು>> ಎಂದು ಉತ್ತರ ಕೊಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 20 ಅನಂತರ ಅಬ್ಷಾಲೋಮನು, <<ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು>> ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.
\v 21 ಆಗ ಅಹೀತೋಫೆಲನು, <<ಹೋಗಿ ನಿನ್ನ ತಂದೆಯು ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಯರೊಡನೆ ಸಂಗಮಿಸು. ಹೀಗೆ ಮಾಡುವುದಾದರೆ ನೀನು ನಿನ್ನ ತಂದೆಗೆ ವೈರಿಯಾಗುವೆ ಎಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವುದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು>> ಎಂದು ಉತ್ತರ ಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 22 ಆಗ ಅವರು ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರ ಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಸಂಗಮಿಸಿದನು.
\v 23 ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿರುವಷ್ಟು ಬೆಲೆಯಿತ್ತು. ದಾವೀದನೂ ಮತ್ತು ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.
2018-04-26 17:00:56 +00:00
\s5
\c 17
2019-01-21 20:20:50 +00:00
\s ಹೂಷೈಯು ಅಹೀತೋಫೆಲನ ಆಲೋಚನೆ ನಿರರ್ಥಕಪಡಿಸಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, <<ಅಪ್ಪಣೆಯಾಗಲಿ, ನಾನು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.
\v 2 ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು.
\v 3 ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು>> ಎಂದು ಹೇಳಿದನು.
\p
\v 4 ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.
2018-04-26 17:00:56 +00:00
\s5
2019-01-21 20:20:50 +00:00
\v 5 ಆಮೇಲೆ ಅಬ್ಷಾಲೋಮನು, <<ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ>> ಎಂದು ಹೇಳಿದನು.
\v 6 ಹೂಷೈಯನು ಅಬ್ಷಾಲೋಮನ ಬಳಿಗೆ ಬಂದಾಗ ಅವನನ್ನು, <<ಅಹೀತೋಫೆಲನು ಹೀಗೆ ಹೇಳುತ್ತಿದ್ದಾನೆ, ಇದರಂತೆ ಮಾಡಿದರೆ ಒಳ್ಳೆಯದಾಗುವುದೋ, ಇಲ್ಲವಾದರೆ ನಿನ್ನ ಅಭಿಪ್ರಾಯವೇನು?>> ಎಂದು ಕೇಳಿದನು.
\v 7 ಹೂಷೈಯು ಅಬ್ಷಾಲೋಮನಿಗೆ, <<ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 8 ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.
\v 9 ಅವನು ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು.
\v 10 ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.
2018-04-26 17:00:56 +00:00
\s5
2019-01-21 20:20:50 +00:00
\v 11 ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.
\v 12 ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.
2018-04-26 17:00:56 +00:00
\s5
2019-01-21 20:20:50 +00:00
\v 13 ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ>> ಎಂದನು.
\v 14 ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, <<ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ>> ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.
\s ಹೂಷೈಯು ದಾವೀದನನ್ನು ಎಚ್ಚರಿಸಿದ್ದು ಮತ್ತು ಅಹೀತೋಫೆಲನ ಮರಣ
\p
2018-04-26 17:00:56 +00:00
\s5
2019-01-21 20:20:50 +00:00
\v 15 ತರುವಾಯ ಹೂಷೈಯು ಯಾಜಕನಾದ ಚಾದೋಕ್ ಎಬ್ಯಾತಾರರಿಗೆ, <<ಅಹೀತೋಫೆಲನು ಅಬ್ಷಾಲೋಮನಿಗೂ ಮತ್ತು ಇಸ್ರಾಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು, ನಾನು ಹೀಗೆ ಹೇಳಿದ್ದೇನೆ.
\v 16 ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, <ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ> ಎಂದು ಹೇಳಿಕಳುಹಿಸಿರಿ>> ಎಂದನು
2018-04-26 17:00:56 +00:00
\s5
2019-01-21 20:20:50 +00:00
\v 17 ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ.
\v 18 ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು.
2018-04-26 17:00:56 +00:00
\s5
2019-01-21 20:20:50 +00:00
\v 19 ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.
\v 20 ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, <<ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?>> ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, <<ಅವರು ಹಳ್ಳ ದಾಟಿ ಹೋಗಿಬಿಟ್ಟರು>> ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.
2018-04-26 17:00:56 +00:00
\s5
2019-01-21 20:20:50 +00:00
\v 21 ಅವರು ಹೋದ ಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋದರು. ಅವರು ದಾವೀದನಿಗೆ, <<ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ. ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗು>> ಎಂದು ಹೇಳಿದನು.
\v 22 ಆಗ ದಾವೀದನೂ ಮತ್ತು ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್ ನದಿಯನ್ನು ದಾಟಿದರು. ಬೆಳಗಾದಾಗ ದಾಟಬೇಕಾದವನು ಒಬ್ಬನೂ ಇರಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 23 ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
\s ದಾವೀದನ ಪ್ರಯಾಣ; ಅವನಿಗೆ ದೊರೆತ ಆದರಣೆ
\p
2018-04-26 17:00:56 +00:00
\s5
2019-01-21 20:20:50 +00:00
\v 24 ದಾವೀದನು ಮಹನಯಿಮಿಗೆ ಹೋದನು. ಅಬ್ಷಾಲೋಮನು ಮತ್ತು ಇಸ್ರಾಯೇಲರೆಲ್ಲರೂ ಕೂಡಿಕೊಂಡು ಯೊರ್ದನ್ ನದಿಯನ್ನು ದಾಟಿದರು.
\v 25 ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು.
\f +
\fr 17:25
\ft ಅಥವಾ ಇಸ್ಮಾಯೇಲನಾದ.
\f* ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.
\v 26 ಇಸ್ರಾಯೇಲ್ಯರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು.
\p
2018-04-26 17:00:56 +00:00
\s5
2019-01-21 20:20:50 +00:00
\v 27 ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು
\v 28 ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವೆಗೋದಿ, ಹಿಟ್ಟು, ಹುರಿಗಾಳು, ಅವರೆಕಾಳು, ಅಲಸಂದಿ, ಬೇಳೆ ಜೇನುತುಪ್ಪ,
\v 29 ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.
2018-04-26 17:00:56 +00:00
\s5
\c 18
2019-01-21 20:20:50 +00:00
\s ಅಬ್ಷಾಲೋಮನ ಮರಣ
2018-04-26 17:00:56 +00:00
\p
2019-01-21 20:20:50 +00:00
\v 1 ತರುವಾಯ ಅರಸನಾದ ದಾವೀದನು ತನ್ನ ಬಳಿಯಲ್ಲಿ ಇದ್ದ ಸೈನಿಕರನ್ನು ಎಣಿಸಿ, ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಮತ್ತು ಶತಾಧಿಪತಿಗಳನ್ನು ನೇಮಿಸಿದನು.
\v 2 ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, <<ನಾನು ನಿಮ್ಮೊಂದಿಗೆ ಬರುತ್ತೇನೆ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 3 ಆಗ ಸೈನ್ಯದವರು ಅವನಿಗೆ, <<ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ
\f +
\fr 18:3
\ft ಅಥವಾ ನಮ್ಮಂತೆಯೇ ಹತ್ತು ಸಾವಿರ ಮಂದಿ ಇದ್ದಾರೆ.
\f* ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು>> ಎಂದನು.
\v 4 ಅರಸನು ಅವರಿಗೆ, <<ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ>> ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.
2018-04-26 17:00:56 +00:00
\s5
2019-01-21 20:20:50 +00:00
\v 5 ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, <<ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ>> ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.
2018-04-26 17:00:56 +00:00
\s5
2019-01-21 20:20:50 +00:00
\v 6 ಅನಂತರ ಸೈನಿಕರು ಇಸ್ರಾಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಾಯೀಮಿನ ಕಾಡಿನಲ್ಲಿ ಯುದ್ಧವಾಯಿತು.
\v 7 ಇಸ್ರಾಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.
\v 8 ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.
\v 10 ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, <<ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು>> ಎಂದು ಹೇಳಿದನು.
\v 11 ಯೋವಾಬನು ಅವನಿಗೆ, <<ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು, ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 12 ಅದಕ್ಕೆ ಆ ಮನುಷ್ಯನು ಯೋವಾಬನಿಗೆ, <<ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, <ಜಾಗರೂಕತೆಯಿಂದಿರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು> ಎಂದು ಆಜ್ಞಾಪಿಸಿದ್ದಾನಲ್ಲವೇ?
\v 13 ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ತಿಳಿಯದೆ ಇರುವುದಿಲ್ಲ. ಆಗ ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ>> ಎಂದು ಉತ್ತರ ಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 14 ಆಗ ಯೋವಾಬನು, <<ಇಲ್ಲಿ ನಿಂತು ತಡಮಾಡುವುದೇಕೆ>> ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ
\v 15 ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದು ಹಾಕಿದರು.
2018-04-26 17:00:56 +00:00
\s5
2019-01-21 20:20:50 +00:00
\v 16 ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ತುತ್ತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು.
\v 17 ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
2018-04-26 17:00:56 +00:00
\s5
2019-01-21 20:20:50 +00:00
\v 18 ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ.
\s ದಾವೀದನು ಮಗನಿಗಾಗಿ ಗೋಳಾಡಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 19 ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, <<ಅಪ್ಪಣೆಯಾಗಲಿ ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭ ವರ್ತಮಾನವನ್ನು ತಿಳಿಸುವೆನು>> ಎಂದನು.
\v 20 ಯೋವಾಬನು ಅವನಿಗೆ, <<ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 21 ಯೋವಾಬನು ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, <<ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು>> ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟುಹೋದನು.
\v 22 ಚಾದೋಕನ ಮಗನಾದ ಅಹೀಮಾಚನು ಪುನಃ ಯೋವಾಬನಿಗೆ, <<ಆಗಿದ್ದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡು>> ಎಂದು ಬೇಡಿಕೊಂಡನು. ಅದಕ್ಕೆ ಅವನು, <<ಮಗನೇ ಯಾಕೆ ಹೋಗಬೇಕೆನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವುದಿಲ್ಲವಲ್ಲಾ>> ಎಂದನು.
\v 23 ಆಗ ಅಹೀಮಾಚನು ಪುನಃ <<ಚಿಂತೆಯಿಲ್ಲ ನನ್ನನ್ನು ಕಳುಹಿಸು>> ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು <<ಹೋಗು>> ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 24 ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.
\v 25 ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು, <<ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು>> ಎಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು.
2018-04-26 17:00:56 +00:00
\s5
2019-01-21 20:20:50 +00:00
\v 26 ಅಷ್ಟರಲ್ಲಿ ಕಾವಲುಗಾರರು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, <<ಇಗೋ, ಇನ್ನೊಬ್ಬನು ಒಬ್ಬಂಟಿಗನಾಗಿ ಬರುತ್ತಿದ್ದಾನೆ>> ಎಂದು ಅರಸನಿಗೆ ತಿಳಿಸಿದನು. ಆಗ ಅರಸನು, <<ಹಾಗಾದರೆ ಅವನೂ ಸಮಾಚಾರ ತರುವವನು>> ಎಂದು ಹೇಳಿದನು.
\v 27 ಆಗ ಕಾವಲುಗಾರನು, <<ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ>> ಎಂದನು. ಅದಕ್ಕೆ ಅರಸನು, <<ಅವನು ಒಳ್ಳೆಯವನು, ಶುಭವರ್ತಮಾನ ತರುವವನು>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 28 ಅಹೀಮಾಚನು ಹತ್ತಿರ ಬಂದು ಅರಸನಿಗೆ, <<ಶುಭವಾಗಲಿ>> ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, <<ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ>> ಎಂದನು.
\v 29 ಆಗ ಅರಸನು ಅವನನ್ನು, <<ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ>> ಎಂದು ಕೇಳಿದನು. ಅದಕ್ಕೆ ಅಹೀಮಾಚನು, <<ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ>> ಎಂದು ಉತ್ತರಕೊಟ್ಟನು.
\v 30 ಆಗ ಅರಸನು ಅವನಿಗೆ, <<ನೀನು ಇತ್ತ ನಿಲ್ಲು>> ಎಂದು ಆಜ್ಞಾಪಿಸಿದನು. ಅವನು ನಿಂತನು.
2018-04-26 17:00:56 +00:00
\s5
2019-01-21 20:20:50 +00:00
\v 31 ಅಷ್ಟರಲ್ಲಿ ಕೂಷ್ಯನು ಬಂದು, <<ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ>> ಎಂದನು.
\v 32 ಅರಸನು ಅವನನ್ನು, <<ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?>> ಎಂದು ಕೇಳಲು ಅವನು, <<ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ>> ಎಂದು ಉತ್ತರ ಕೊಟ್ಟನು.
\v 33 ಇದನ್ನು ಕೇಳಿ ಅರಸನು ಎದೆಯೊಡದವನಾಗಿ, <<ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!>> ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.
2018-04-26 17:00:56 +00:00
\s5
\c 19
2019-01-21 20:20:50 +00:00
\s ಯೋವಾಬನು ಅರಸನನ್ನು ಗದರಿಸಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.
\v 2 ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು.
2018-04-26 17:00:56 +00:00
\s5
2019-01-21 20:20:50 +00:00
\v 3 ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು.
\v 4 ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, <<ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!>> ಎಂದು ಬಹಳವಾಗಿ ಗೋಳಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 5 ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, <<ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.
\v 6 ನೀನು ಶತ್ರುಗಳನ್ನು ಪ್ರೀತಿಸುವವನೂ, ಮಿತ್ರರನ್ನು ದ್ವೇಷಿಸುವವನೂ ಆಗಿದ್ದೀ. ನೀನು ನಿನ್ನ ಸೇನಾಧಿಪತಿಗಳನ್ನೂ, ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟೆ. ಇದರಿಂದ ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೆ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.
2018-04-26 17:00:56 +00:00
\s5
2019-01-21 20:20:50 +00:00
\v 7 ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು>> ಎಂದು ಹೇಳಿದನು.
\s ದಾವೀದನು ಪುನಃ ಯೆರೂಸಲೇಮಿಗೆ ಬಂದದ್ದು
\p
\v 8 ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ <<ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.
\v 10 ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?>> ಎಂದು ಮಾತನಾಡಿಕೊಂಡರು.
2018-04-26 17:00:56 +00:00
\s5
2019-01-21 20:20:50 +00:00
\v 11 ಇಸ್ರಾಯೇಲರು ಈ ಪ್ರಕಾರ ಮಾತನಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರಿಗೆ, <<ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ, <ಅರಸನಾದ ನನ್ನನ್ನು ತಿರುಗಿ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ತಡಮಾಡುತ್ತಿರುವುದೇಕೆ?
\v 12 ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ> ಎಂದು ಹೇಳಿರಿ.
2018-04-26 17:00:56 +00:00
\s5
2019-01-21 20:20:50 +00:00
\v 13 ಅಮಾಸನಿಗೆ, <ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ> ಎಂಬುದಾಗಿಯೂ ತಿಳಿಸಿರಿ>> ಎಂದು ಹೇಳಿ ಕಳುಹಿಸಿದನು.
\p
\v 14 ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, <<ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ>> ಎಂದು ಹೇಳಿಕಳುಹಿಸಿದರು.
\v 15 ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.
\s ದಾವೀದನು ಶಿಮ್ಮಿಯನ್ನು ಕ್ಷಮಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 16 ಬೆನ್ಯಾಮೀನ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.
\v 17 ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೆ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು
\v 18 ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ,
2018-04-26 17:00:56 +00:00
\s5
2019-01-21 20:20:50 +00:00
\v 19 <<ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.
\v 20 ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 21 ಚೆರೂಯಳ ಮಗನಾದ ಅಬೀಷೈಯು, <<ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ>> ಎಂದನು.
\v 22 ಅದಕ್ಕೆ ದಾವೀದನು, <<ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು>> ಎಂದು ನುಡಿದನು.
\v 23 ಅನಂತರ ಅರಸನು ಶಿಮ್ಮಿಗೆ, <<ನಿನಗೆ ಮರಣದಂಡನೆ ಆಗುವುದಿಲ್ಲ>> ಎಂದು ಪ್ರಮಾಣಮಾಡಿ ಹೇಳಿದನು.
\s ದಾವೀದನು ಮೆಫೀಬೋಶೆತನಿಗೆ ತೋರಿದ ಕರುಣೆ
\p
2018-04-26 17:00:56 +00:00
\s5
2019-01-21 20:20:50 +00:00
\v 24 ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುವವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
\v 25 ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, <<ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?>> ಎಂದು ಕೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 26 ಅವನು, <<ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ <ಕತ್ತೆಗೆ ತಡಿಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು> ಎಂದು ಆಜ್ಞಾಪಿಸಿದೆನು.
\v 27 ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.
\v 28 ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?>> ಎಂದು ಉತ್ತರ ಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 29 ಆಗ ಅರಸನು ಅವನಿಗೆ, <<ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು>> ಎಂದು ಹೇಳಿದನು.
\v 30 ಅದಕ್ಕೆ ಮೆಫೀಬೋಶೆತನು, <<ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು>> ಎಂದನು.
\s ದಾವೀದನು ಬರ್ಜಿಲ್ಲೈಗೆ ತೋರಿದ ದಯೆ
\p
2018-04-26 17:00:56 +00:00
\s5
2019-01-21 20:20:50 +00:00
\v 31 ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೆಲೀಮಿನಿಂದ ಯೊರ್ದನಿಗೆ ಬಂದಿದ್ದನು.
\v 32 ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.
\v 33 ಅರಸನು ಬರ್ಜಿಲ್ಲೈಗೆ, <<ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ, ನಾನು ಯೆರೂಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 34 ಅದಕ್ಕೆ ಬರ್ಜಿಲ್ಲೈಯು, <<ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ
\v 35 ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು?
\v 36 ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?
\m
2018-04-26 17:00:56 +00:00
\s5
2019-01-21 20:20:50 +00:00
\v 37 ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 38 ಅದಕ್ಕೆ ಅರಸನು, <<ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ>> ಎಂದು ಹೇಳಿದನು.
\v 39 ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.
\p
2018-04-26 17:00:56 +00:00
\s5
2019-01-21 20:20:50 +00:00
\v 40 ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು.
\s ಯೆಹೂದ್ಯರ ಮತ್ತು ಇಸ್ರಾಯೇಲರ ನಡುವೆ ವಾಗ್ವಾದ
\p
\v 41 ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, <<ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?>> ಎಂದು ಕೇಳಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 42 ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, <<ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ?>> ಎಂದು ಉತ್ತರ ಕೊಟ್ಟರು.
\v 43 ಆಗ ಇಸ್ರಾಯೇಲರು ಯೆಹೂದ್ಯರಿಗೆ, <<ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?>> ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.
2018-04-26 17:00:56 +00:00
\s5
\c 20
2019-01-21 20:20:50 +00:00
\s ಶೆಬನ ದಂಗೆ
\p
\v 1 ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, <<ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ>> ಎಂದನು.
\v 2 ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೊರ್ದನ್ ತಗ್ಗಿನಿಂದ ಯೆರೂಸಲೇಮಿನ ವರೆಗೂ ಅವನ ಜೊತೆಯಲ್ಲಿ ಹೋದರು.
2018-04-26 17:00:56 +00:00
\p
\s5
2019-01-21 20:20:50 +00:00
\v 3 ಅರಸನಾದ ದಾವೀದನು ಯೆರೂಸಲೇಮಿಗೆ ಬಂದ ಮೇಲೆ ತಾನು ಅರಮನೆ ಕಾಯುವುದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾಗಿ ಒಂದು ಮನೆಯಲ್ಲಿಟ್ಟು, ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಸಂಗಮಿಸಲಿಲ್ಲ. ಅವರು ಜೀವದಿಂದಿರುವವರೆಗೂ ವಿಧೆವೆಯರಂತಿದ್ದು ಕಾವಲಲ್ಲಿ ಇರಬೇಕಾಯಿತು.
\s ಅಮಾಸನ ಕೊಲೆ
\p
2018-04-26 17:00:56 +00:00
\s5
2019-01-21 20:20:50 +00:00
\v 4 ಅನಂತರ ಅರಸನು ಅಮಾಸನಿಗೆ, <<ನೀನು ಮೂರು ದಿನಗಳೊಳಗೆ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು>> ಎಂದು ಆಜ್ಞಾಪಿಸಿದನು.
\v 5 ಅಮಾಸನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬಾರದೆ ತಡಮಾಡಿದ್ದರಿಂದ
2018-04-26 17:00:56 +00:00
\s5
2019-01-21 20:20:50 +00:00
\v 6 ಅರಸನು ಅಬೀಷೈಗೆ, <<ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಜಡಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು>> ಎಂದನು.
\v 7 ಆಗ ಅವನು ಯೋವಾಬನ ಸೈನಿಕರನ್ನೂ, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳನ್ನೂ ಎಲ್ಲಾ ಶೂರರನ್ನೂ ಕರೆದುಕೊಂಡು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕೋಸ್ಕರ ಯೆರೂಸಲೇಮಿನಿಂದ ಹೊರಟರು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಅವರು ಗಿಬ್ಯೋನಿನಲ್ಲಿದ್ದ ದೊಡ್ಡ ಕಲ್ಲನ್ನು ಸಮೀಪಿಸಿದಾಗ ಅಮಾಸನು ಅವನೆದುರು ಬಂದನು. ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದ ಯೋವಾಬನೂ ಅವನನ್ನು ವಧಿಸುವುದಕ್ಕೆ ಹೋಗುತ್ತಿರುವಾಗ ಅವನ ಸೊಂಟಕ್ಕೆ ಕಟ್ಟಿದ ಕತ್ತಿಯೂ ಒರೆಯಿಂದ ಕೆಳಗೆ ಬಿದ್ದಿತು.
2018-04-26 17:00:56 +00:00
\s5
2019-01-21 20:20:50 +00:00
\v 9 ಅವನು ಅಮಾಸನನ್ನು, <<ಸಹೋದರನೇ ಕ್ಷೇಮವೋ>> ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು,
\v 10 ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,
2018-04-26 17:00:56 +00:00
\s5
2019-01-21 20:20:50 +00:00
\v 11 ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು, <<ದಾವೀದ ಹಾಗೂ ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ>> ಎಂದು ಕೂಗಿದನು
\v 12 ಮಾರ್ಗದ ಮಧ್ಯದಲ್ಲಿ ರಕ್ತದಲ್ಲಿ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಕಂಡ ಆ ಆಳು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು.
\v 13 ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೊಸ್ಕರ ಯೋವಾಬನನ್ನು ಹಿಂಬಾಲಿಸಿದರು.
\s ಶೆಬನ ಕೊಲೆ
\p
2018-04-26 17:00:56 +00:00
\s5
2019-01-21 20:20:50 +00:00
\v 14 ಶೆಬನು ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಆಬೇಲ್, ಬೇತ್ಮಾಕಾಕ್ಕೂ ಬಂದನು. ಬೇರಿಯರೆಲ್ಲರೂ ಸೇರಿಕೊಂಡು ಅವನೊಡನೆ ಆ ಊರನ್ನು ಸೇರಿದರು.
\v 15 ಯೋವಾಬನ ಕಡೆಯವರು ಆಬೇಲ್ ಬೇತ್ಮಾಕಾಕ್ಕೆ ಊರಿಗೆ ಮುತ್ತಿಗೆ ಹಾಕಿ ಅದಕ್ಕೆ ಎದುರಾಗಿ ಊರು ಗೋಡೆಗೆ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ, ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.
\v 16 ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬಳು ಹೆಂಗಸು ಅವರಿಗೆ, <<ಕೇಳಿರಿ, ದಯವಿಟ್ಟು ಕೇಳಿರಿ. ಯೋವಾಬನೊಂದಿಗೆ ನಾನು ಮಾತನಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ>> ಎಂದು ಕೂಗಿದಳು.
2018-04-26 17:00:56 +00:00
\s5
2019-01-21 20:20:50 +00:00
\v 17 ಯೋವಾಬನು ಬರಲು ಆ ಸ್ತ್ರೀಯು, <<ನೀನು ಯೋವಾಬನೋ?>> ಎಂದು ಅವನನ್ನು ಕೇಳಲು ಅವನು <<ಹೌದು ನಾನೇ>> ಎಂದು ಉತ್ತರ ಕೊಟ್ಟನು. ಆಕೆಯು, <<ನಿನ್ನ ದಾಸಿಯ ಮಾತನ್ನು ಕೇಳು>> ಅನ್ನಲು ಅವನು, <<ಕೇಳುತ್ತೇನೆ>> ಎಂದನು.
\v 18 ಆಗ ಆಕೆಯು, <<ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳೋಣ ಅಂದುಕೊಂಡು ಅವರ ಆಲೋಚನೆಯ ಮೇರೆಗೆ ತೀರ್ಮಾನವನ್ನು ತೆಗೆದುಕೊಳ್ಳುತ್ತಿದ್ದರು.
\v 19 ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?>> ಎಂದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 20 ಅದಕ್ಕೆ ಯೋವಾಬನು, <<ನುಂಗಿಬಿಡುವುದಾಗಲಿ, ಹಾಳುಮಾಡುವುದಾಗಲಿ ನನಗೆ ದೂರವಾಗಿರಲಿ ಅಂಥದ್ದು ಬೇಡವೇ ಬೇಡ.
\v 21 ಎಫ್ರಾಯೀಮಿನ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬುವವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನ್ನನ್ನೇ ಒಪ್ಪಿಸಿರಿ, ನಾನು ಊರನ್ನು ಬಿಟ್ಟು ಹೋಗುತ್ತೇನೆ>> ಎಂದು ಹೇಳಿದನು. ಆ ಸ್ತ್ರೀಯು ಯೋವಾಬನಿಗೆ, <<ನೋಡು ಈಗಲೇ ಅವನ ತಲೆಯು ಗೋಡೆಯ ಕಿಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವುದು>> ಎಂದು ಉತ್ತರ ಕೊಟ್ಟು,
\v 22 ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿ ಯೋವಾಬನಿದ್ದಲ್ಲಿಗೆ ಎಸೆದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇಮಿನಲ್ಲಿದ್ದ ಅರಸನ ಬಳಿಗೆ ಹೋದನು.
\s ದಾವೀದನ ಆಸ್ಥಾನಿಕರು
\p
2018-04-26 17:00:56 +00:00
\s5
2019-01-21 20:20:50 +00:00
\v 23 ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.
\v 24 ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು. ಅಹೀಲೂದನ ಮಗನಾದ ಯೆಹೋಷಾಫಾಟನು ಮುಖ್ಯ ದಾಖಲೆಮಾಡುವ ಲೇಖಕ.
\v 25 ಶೆವನು ಕಾರ್ಯದರ್ಶಿ, ಚಾದೋಕ್ ಮತ್ತು ಎಬ್ಯಾತಾರರು ಯಾಜಕರು.
\v 26 ಯಾಯೀರಿನವನಾದ ಈರನೂ ದಾವೀದನ ಯಾಜಕನು.
2018-04-26 17:00:56 +00:00
\s5
\c 21
2019-01-21 20:20:50 +00:00
\s ಗಿಬ್ಯೋನ್ಯರು ಮುಯ್ಯಿ ತೀರಿಸಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, <<ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ>> ಎಂದು ಉತ್ತರ ಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 2 ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.
\p
\v 3 ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, <<ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?>> ಎಂದು ಕೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 4 ಅದಕ್ಕೆ ಅವರು, <<ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯವು ಬೆಳ್ಳಿ ಬಂಗಾರದಿಂದ ಮುಗಿಯಲಾರದು. ಇಸ್ರಾಯೇಲ್ಯರನ್ನು ಕೊಲ್ಲುವ ಅಧಿಕಾರವು ನಮಗಿಲ್ಲ>> ಎಂದು ಉತ್ತರ ಕೊಟ್ಟರು. ಆಗ ಅರಸನು ಅವರಿಗೆ, <<ಏನು ಮಾಡಬೇಕು ಹೇಳಿರಿ ಮಾಡುತ್ತೇನೆ>> ಅಂದನು.
2018-04-26 17:00:56 +00:00
\s5
2019-01-21 20:20:50 +00:00
\v 5 ಆಗ ಅವರು, <<ನಮ್ಮನ್ನು ಇಸ್ರಾಯೇಲರ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ, ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು.
\v 6 ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು>> ಎಂದರು. ಅದಕ್ಕೆ ಅರಸನು, <<ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ>> ಅಂದನು.
2018-04-26 17:00:56 +00:00
\s5
2019-01-21 20:20:50 +00:00
\v 7 ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.
\p
\v 8 ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರಿಯೇಲನಿಗೆ ಸೌಲನ ಮಗಳಾದ ಮೀಕಲಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ಕರೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದರು.
\v 9 ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು
2018-04-26 17:00:56 +00:00
\s5
2019-01-21 20:20:50 +00:00
\v 10 ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.
\p
\v 11 ಅಯ್ಯಾಹನ ಮಗಳೂ, ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ಗೊತ್ತಾಯಿತು.
2018-04-26 17:00:56 +00:00
\s5
2019-01-21 20:20:50 +00:00
\v 12 ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೋಸ್ಕರ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ನೇತುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
\v 13 ದಾವೀದನು ಯಾಬೇಷಿನಲ್ಲಿದ್ದ ಸೌಲ ಮತ್ತು ಯೋನಾತಾನರ ಎಲುಬುಗಳನ್ನು ಗಿಬ್ಯೋನಿನಲ್ಲಿ ಹತರಾದವರ ಎಲುಬುಗಳನ್ನೂ ತೆಗೆದುಕೊಂಡರು.
2018-04-26 17:00:56 +00:00
\s5
2019-01-21 20:20:50 +00:00
\v 14 ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.
\s ದಾವೀದನ ಭಟರ ಶೂರಕೃತ್ಯಗಳು
\p
2018-04-26 17:00:56 +00:00
\s5
2019-01-21 20:20:50 +00:00
\v 15 ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಪುನಃ ಯುದ್ಧವಾಯಿತು. ದಾವೀದನು ತನ್ನ ಸೇವಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.
\v 16 ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.
\v 17 ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, <<ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು>> ಎಂದು ಖಂಡಿತವಾಗಿ ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 18 ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬುವನು ರೆಫಾಯನಾದ ಸೆಫ ಎಂಬುವನನ್ನು ಕೊಂದನು.
\p
\v 19 ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇಮಿನವನಾದ ಯಾರೇಯೋರೆಗೀಮ್ ಎಂಬುವವನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.
\p
2018-04-26 17:00:56 +00:00
\s5
2019-01-21 20:20:50 +00:00
\v 20 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು.
\v 21 ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.
\p
\v 22 ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರೂ ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.
2018-04-26 17:00:56 +00:00
\s5
\c 22
2019-01-21 20:20:50 +00:00
\s ದಾವೀದನ ರಚಿಸಿದ ಸ್ತುತಿಗೀತೆ
2018-04-26 17:00:56 +00:00
\p
2019-01-21 20:20:50 +00:00
\v 1 ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು:
\q
\v 2 ಯೆಹೋವನು ನನ್ನ ಬಂಡೆಯೂ, ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ.
\q
\s5
\v 3 ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.
\q
\v 4 ಯೆಹೋವನು ಸ್ತೋತ್ರಕ್ಕೆ ಅರ್ಹನು. ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
\q
\s5
\v 5 ಮರಣ ಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು.
\q
\v 6 ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು, ಮರಣಕರವಾದ ಉರುಲುಗಳು ನನ್ನನ್ನು ಸುತ್ತಿಕೊಂಡವು.
\q
\s5
\v 7 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು.
\q
\s5
\v 8 ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು.
\q
\v 9 ಆತನ ಮೂಗಿನಿಂದ ಹೊಗೆಯು ಬಂದಿತು. ಆತನ ಬಾಯಿಂದ ಅಗ್ನಿಜ್ವಾಲೆಯು ಹೊರಟು ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.
\q
\s5
\v 10 ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು. ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು.
\q
\v 11 ಕೆರೂಬಿವಾಹನನಾಗಿ ಹಾರಿದನು. ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು.
\q
\v 12 ಕತ್ತಲನ್ನೂ, ಜಲಮಯವಾಗಿರುವ ನೀಲಮೇಘಗಳನ್ನೂ, ತನ್ನ ಸುತ್ತಲೂ ಗುಡಾರದಂತೆ ಕವಿಸಿಕೊಂಡನು.
\q
\s5
\v 13 ಆತನ ಸಾನ್ನಿಧ್ಯ ಪ್ರಕಾಶದಿಂದ ಉರಿಗೆಂಡಗಳು ಹೊರಟವು.
\q
\v 14 ಯೆಹೋವನು ಆಕಾಶದಿಂದ ಗುಡುಗಿದನು. ಪರಾತ್ಪರನಾದ ದೇವರು ಧ್ವನಿಗೊಟ್ಟನು.
\q
\v 15 ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದುರಿಸಿಬಿಟ್ಟನು. ಸಿಡಿಲಿನಿಂದ ಅವುಗಳನ್ನು ಕಳವಳಗೊಳಿಸಿದನು.
\q
\s5
\v 16 ಆಗ ಯೆಹೋವನ ಗದರಿಕೆಯಿಂದಲೂ ಆತನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ಥಿವಾರವು ತೋರಿಬಂದವು.
\q
\s5
\v 17 ಆತನು ಮೇಲಣಲೋಕದಿಂದ ಕೈಚಾಚಿ ನನ್ನನ್ನು ಹಿಡಿದು! ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದನು.
\q
\v 18 ನನಗಿಂತ ಬಲಿಷ್ಠರೂ, ಪುಷ್ಠರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.
\q
\s5
\v 19 ಅವರು ನನ್ನ ಆಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು. ಆಗ ಯೆಹೋವನು ನನಗೆ ಉದ್ಧಾರಕನಾದನು.
\q
\v 20 ಆತನು ನನ್ನನ್ನು ಅಪಾಯದಿಂದ ಬಿಡಿಸಿದನು. ನನ್ನನ್ನು ಮೆಚ್ಚಿ
\f +
\fr 22:20
\ft ಅಥವಾ ವಿಶಾಲ ಸ್ಥಳದಲ್ಲಿ ಸೇರಿಸಿದನು.
\f* ರಕ್ಷಿಸಿದನು.
\q
\v 21 ಯೆಹೋವನು ನನ್ನ ಸನ್ನಡತೆಗೆ ತಕ್ಕ ಪ್ರತಿಫಲ ನೀಡಿದನು. ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು.
\q
\s5
\v 22 ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ ನನ್ನ ದೇವರನ್ನು ಬಿಟ್ಟು ದ್ರೋಹ ಮಾಡಲಿಲ್ಲ.
\q
\v 23 ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನೆದುರಿನಲ್ಲಿ ಇಟ್ಟುಕೊಂಡೆನು. ಆತನ ವಿಧಿಗಳಿಂದ ತಪ್ಪಿ ಹೋಗಲಿಲ್ಲ.
\q
\s5
\v 24 ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು. ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
\q
\v 25 ಆದ್ದರಿಂದ ನನ್ನ ನೀತಿಗೆ ತಕ್ಕಂತೆಯೂ, ಆತನ ದೃಷ್ಟಿಯಲ್ಲಿ ನನ್ನ ನಿರಪರಾಧಕ್ಕೆ ತಕ್ಕಂತೆಯೂ ಯೆಹೋವನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು.
\q
\s5
\v 26 ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವರಿಗೆ ನಿರ್ದೋಷಿಯೂ.
\q
\v 27 ಶುದ್ಧನಿಗೆ ಪರಿಶುದ್ಧನೂ, ವಕ್ರಬುದ್ಧಿಯವನಿಗೆ ವಕ್ರನೂ ಆಗಿರುವಿ.
\q
\s5
\v 28 ದೀನರನ್ನು ಉದ್ಧರಿಸುತ್ತಿ. ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ.
\q
\v 29 ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕನ್ನು ಕೊಟ್ಟು ನನ್ನ ಕತ್ತಲನ್ನು ಪರಿಹರಿಸುವನು.
\q
\s5
\v 30 ನಿನ್ನ ಬಲದಿಂದ
\f +
\fr 22:30
\ft ಅಥವಾ ನಾನು ಜಜ್ಜಿಹಾಕುವೆನು.
\f* ನಾನು ದಂಡಿನ ಮೇಲೆ ಬೀಳುವೆನು. ನನ್ನ ದೇವರ ಸಹಾಯದಿಂದ ಪ್ರಾಕಾರಗಳನ್ನು ಹಾರುವೆನು.
\q
\v 31 ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
\q
\s5
\v 32 ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?
\q
\v 33 ದೇವರು ನನ್ನ ಬಲವಾದ ಕೋಟೆಯಾಗಿದ್ದಾನೆ. ಆತನು ನನ್ನ ಮಾರ್ಗವನ್ನು ಸರಾಗಮಾಡುತ್ತಾನೆ.
\q
\s5
\v 34 ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ
\q
\v 35 ಆತನು ನನಗೆ ಯುದ್ಧ ವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
\q
\s5
\v 36 ನೀನು ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಕೃಪಾಕಟಾಕ್ಷವು ನನ್ನನ್ನು ಉನ್ನತಕ್ಕೆ ಏರಿಸಿದೆ.
\q
\v 37 ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಕಾಲುಗಳು ಕದಲುವುದಿಲ್ಲ.
\q
\s5
\v 38 ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು. ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
\q
\v 39 ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು. ಅವರು ನನ್ನ ಪಾದದ ಕೆಳಗೆ ಬೀಳುವರು.
\q
\s5
\v 40 ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದಿ. ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದಿ.
\q
\v 41 ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ. ನನ್ನ ಶತ್ರುಗಳನ್ನು ನಿರ್ಮೂಲ ಮಾಡುವೆನು.
\q
\s5
\v 42 ಅವರು ಸಹಾಯಕ್ಕಾಗಿ ಕೂಗಿಕೊಂಡರೂ ರಕ್ಷಿಸುವವನಿಲ್ಲ. ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
\q
\v 43 ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.
\q
\s5
\v 44 ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದಿ. ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದಿ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
\q
\v 45 ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು.
\q
\v 46 ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.
\q
\s5
\v 47 ಯೆಹೋವನು ಚೈತನ್ಯಸ್ವರೂಪನು. ನನ್ನ ಶರಣನಿಗೆ ಸ್ತೋತ್ರ. ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ.
\q
\v 48 ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು. ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.
\q
\v 49 ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತಿ.
\q
\s5
\v 50 ಈ ಕಾರಣದಿಂದ ಯೆಹೋವನೇ, ಅನ್ಯಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ನಿನ್ನ ನಾಮವನ್ನು ಸಂಕೀರ್ತಿಸುವೆನು.
\q
\v 51 ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ. ತಾನು ಅಭಿಷೇಕಿಸಿದ ದಾವೀದನಿಗೂ, ಅವನ ಸಂತತಿಯವರೆಗೆ ಸದಾಕಾಲವೂ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.
2018-04-26 17:00:56 +00:00
\s5
\c 23
2019-01-21 20:20:50 +00:00
\s ದಾವೀದನ ಕೊನೆಯ ಮಾತುಗಳು
\p
\v 1 ದಾವೀದನ ಕೊನೆಯ ಮಾತುಗಳು -
\q ಇಷಯನ ಮಗನಾದ ದಾವೀದನು,
\q ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು,
\q ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ,
\q ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು:
\q
\v 2 <<ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು.
\q1 ಆತನ ವಾಕ್ಯವು ನನ್ನ ಬಾಯಲ್ಲಿತ್ತು.
\q
\s5
\v 3 ಇಸ್ರಾಯೇಲರ ಶರಣನೂ,
\q1 ದೇವರೂ ಆಗಿರುವಾತನು ಹೇಳಿದ್ದೇನೆಂದರೆ,
\q1 ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,
\q
\v 4 ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ,
\q1 ಮೋಡಗಳನ್ನು ಚದುರಿಸಿಬಿಟ್ಟು,
\q1 ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.
\q
\s5
\v 5 ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ?
\q1 ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ?
\q1 ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ.
\q1 ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?
\q
\s5
\v 6 ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ.
\q1 ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ,
\q
\v 7 ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು.
\q1 ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.>>
\s ದಾವೀದನ ರಣವೀರರ ಶೌರ್ಯಸಾಹಸಗಳು
2018-04-26 17:00:56 +00:00
\p
\s5
2019-01-21 20:20:50 +00:00
\v 8 ದಾವೀದನೊಂದಿಗಿದ್ದ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷಬ್ ಬಷ್ಬೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.
2018-04-26 17:00:56 +00:00
\s5
2019-01-21 20:20:50 +00:00
\v 9 ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.
\v 10 ಇಸ್ರಾಯೇಲರು ಹೋದ ನಂತರ ಇವನು ನಿಂತುಕೊಂಡು, ಕತ್ತಿ ಹಿಡಿದು, ಕೈ ಸೋತು ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲರು ಸುಲಿದುಕೊಳ್ಳುವುದಕ್ಕಾಗಿ ಹಿಂದಿರುಗಿದರು.
2018-04-26 17:00:56 +00:00
\s5
2019-01-21 20:20:50 +00:00
\v 11 ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬುವವನು. ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದಿಯ ಹೊಲಕ್ಕೆ ಬಂದರು.
\v 12 ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ, ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾಜಯವನ್ನುಂಟುಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 13 ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗ್ಗಿಕಾಲದಲ್ಲಿ ಅವನ ಬಳಿಗೆ ಮೂವರು ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಾಗ,
\v 14 ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 15 ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ <<ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು>> ಎಂದೂ ಕೇಳಿದನು.
\v 16 ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.
\v 17 ಆದರೆ ಅವನು ಅದನ್ನು ಕುಡಿಯಲೊಲ್ಲದೆ, <<ಯೆಹೋವನೇ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಜೀವದಾಶೆ ತೊರೆದವರ ರಕ್ತವನ್ನು ನಾನು ಕುಡಿಯಬೇಕೆ? ಇದನ್ನು ಕುಡಿಯುವುದೇ ಇಲ್ಲ>> ಎಂದು ಹೇಳಿ, ಅದನ್ನು ಯೆಹೋವನ ಮುಂದೆ ಹೊಯ್ದನು.
\p ಆ ಮೂರು ಜನರು ಪರಾಕ್ರಮಶಾಲಿಗಳಾಗಿದ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 18 ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು.
\v 19 ಅ ಮೂವರಲ್ಲಿ ಘನತೆಯುಳ್ಳವನೂ, ನಾಯಕನೂ ಇವನೇ. ಇವನು ಮೊದಲಿನ ಮೂರು ಜನರಿಗಿಂತ ಹೆಚ್ಚು ಪ್ರಸಿದ್ಧನಾಗಿದ್ದನಲ್ಲವೇ?
2018-04-26 17:00:56 +00:00
\s5
2019-01-21 20:20:50 +00:00
\v 20 ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.
\v 21 ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.
2018-04-26 17:00:56 +00:00
\s5
2019-01-21 20:20:50 +00:00
\v 22 ಈ ಪರಾಕ್ರಮದ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.
\v 23 ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ, ಮೊದಲಿನ ಮೂವರು ಸೈನಿಕರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 24 ಮೂವತ್ತು ಮಂದಿ ರಣವೀರರ ಪಟ್ಟಿ- ಯೋವಾಬನ ತಮ್ಮನಾದ ಅಸಾಹೇಲನು,
\v 25 ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನಾನ್, ಹರೋದಿನವರಾದ ಶಮ್ಮ ಮತ್ತು ಎಲೀಕರು.
\v 26 ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ,
\v 27 ಅಣತೋತಿನವನಾದ ಅಬೀಯೆಜೆರ್, ಹುಷಾ ಊರಿನವನಾದ ಮೆಬುನ್ನೈ,
\v 28 ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ,
2018-04-26 17:00:56 +00:00
\s5
2019-01-21 20:20:50 +00:00
\v 29 ನೆಟೋಫದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ,
\v 30 ಪಿರಾತೋನ್ಯನಾದ ಬೆನಾಯ, ನಹಲೇ ಗಾಷಿನವನಾದ ಹಿದ್ದೈ.
\v 31 ಅರಾಬಾ ತಗ್ಗಿನವನಾದ ಅಬೀ ಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತ್,
\v 32 ಶಾಲ್ಬೋನ್ಯನಾದ ಎಲೆಯಖ್ಬಾ, ಯಾಷೇನನ ಮಕ್ಕಳು, ಯೋನಾತಾನನು,
2018-04-26 17:00:56 +00:00
\s5
2019-01-21 20:20:50 +00:00
\v 33 ಹರಾರ್ಯನಾದ ಶಮ್ಮ, ಅರಾರ್ಯನಾದ ಶಾರಾರನ ಮಗ ಅಹೀಯಾಮ್,
\v 34 ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ ಎಂಬುವನ ಮಗನಾದ ಎಲೀಯಾಮ್,
\v 35 ಕರ್ಮೆಲ್ಯನಾದ ಹೆಚ್ರೋ, ಅರ್ಬೀಯನಾದ ಪಾರೈ,
\v 36 ಚೋಬ ಊರಿನ ನಾತಾನ ಎಂಬುವನ ಮಗನಾದ ಇಗಾಲ್, ಗಾದ್ಯನಾದ ಬಾನೀ,
2018-04-26 17:00:56 +00:00
\s5
2019-01-21 20:20:50 +00:00
\v 37 ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ
\v 38 ಇತ್ರೀಯರಾದ ಈರಾ ಮತ್ತು ಗಾರೇಬರು,
\v 39 ಹಿತ್ತಿಯನಾದ ಊರೀಯ, ಒಟ್ಟಿಗೆ ಮೂವತ್ತೇಳು ಮಂದಿ.
2018-04-26 17:00:56 +00:00
\s5
\c 24
2019-01-21 20:20:50 +00:00
\s ಜನಗಣತಿಯು ಅದರ ಫಲವು
2018-04-26 17:00:56 +00:00
\p
2019-01-21 20:20:50 +00:00
\v 1 ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.
\v 2 ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, <<ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ>> ಎಂದು ಅವನಿಗೆ ಆಜ್ಞಾಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 3 ಆಗ ಯೋವಾಬನು ಅರಸನಿಗೆ, <<ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?>> ಅಂದನು.
\p
\v 4 ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.
2018-04-26 17:00:56 +00:00
\s5
2019-01-21 20:20:50 +00:00
\v 5 ಅವರು ಯೊರ್ದನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ಯಗ್ಜೇರಿಗೂ,
\v 6 ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೂಜೀ ಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.
\v 7 ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.
2018-04-26 17:00:56 +00:00
\s5
2019-01-21 20:20:50 +00:00
\v 8 ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿ ಬಂದರು.
\v 9 ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ.
\p
2018-04-26 17:00:56 +00:00
\s5
2019-01-21 20:20:50 +00:00
\v 10 ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, <<ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು>> ಎಂದು ಪ್ರಾರ್ಥಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 11 ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ,
\v 12 <<ನೀನು ದಾವೀದನ ಬಳಿ ಹೋಗಿ ಅವನಿಗೆ, <ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಟ್ಟಿದ್ದೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ> ಎಂಬುದಾಗಿ ಹೇಳು>> ಎಂದು ಆಜ್ಞಾಪಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 13 ಆಗ ಗಾದನು ದಾವೀದನ ಬಳಿಗೆ ಹೋಗಿ, <<ನಿನ್ನ ದೇಶದಲ್ಲಿ
\f +
\fr 24:13
\ft ಅಥವಾ ಮೂರು ವರ್ಷಗಳು.
\f* ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು>> ಎಂದನು.
\v 14 ಅದಕ್ಕೆ ದಾವೀದನು ಗಾದನಿಗೆ, <<ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 15 ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
\v 16 ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, <<ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ>> ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, <<ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ>> ಎಂದು ಬೇಡಿಕೊಂಡನು.
\s ದಾವೀದನು ಯಜ್ಞವೇದಿಯನ್ನು ಕಟ್ಟಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 18 ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, <<ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು>> ಎಂದು ಹೇಳಿದನು.
\v 19 ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.
\v 20 ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 21 ಅವನು, <<ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?>> ಎಂದು ಕೇಳಿದನು. ದಾವೀದನು ಅವನಿಗೆ, <<ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ>> ಎಂದು ಉತ್ತರಕೊಟ್ಟನು.
\p
\v 22 ಆಗ ಅರೌನನು ದಾವೀದನಿಗೆ, <<ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ, ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ನೊಗ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.
\v 23 ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 24 ಅರಸನು ಅರೌನನಿಗೆ, <<ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ>> ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು.
\v 25 ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.