\ip ಪ್ರಸಂಗಿಯ ಗ್ರಂಥವು ಅದರ ಗ್ರಂಥಕರ್ತನನ್ನು ಪ್ರತ್ಯಕ್ಷವಾಗಿ ಗುರುತಿಸುವುದಿಲ್ಲ. ಪ್ರಸಂಗಿ 1:1 ರಲ್ಲಿ ಕ್ಹೊಹೆಲೆಥ್ ಎಂಬ ಹೀಬ್ರೂ ಪದದಿಂದ ಗ್ರಂಥಕರ್ತನು ತನ್ನನ್ನು ತಾನು ಗುರುತಿಸಿಕೊಂಡಿದ್ದಾನೆ, ಆ ಪದವನ್ನು "ಪ್ರಸಂಗಿ" ಎಂದು ಅನುವಾದಿಸಲಾಗಿದೆ. ದಾವೀದನ ಮಗನೂ ಯೆರೂಸಲೇಮಿನಲ್ಲಿ ಆಳುವ ಅರಸನೂ, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡವನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು ಎಂದು ತನ್ನನ್ನು ತಾನು ಕರೆದುಕೊಳ್ಳುತ್ತಾನೆ (ಪ್ರಸಂಗಿ 1:1,16; 12:9). ದಾವೀದನ ಏಕೈಕ ಮಗನಾಗಿದ್ದ ಸೊಲೊಮೋನನು ಆ ಪಟ್ಟಣದಿಂದ ಎಲ್ಲಾ ಇಸ್ರಾಯೇಲ್ಯರನ್ನು ಆಳುವುದಕ್ಕಾಗಿ ದಾವೀದನ ನಂತರ ಯೆರೂಸಲೇಮಿನಲ್ಲಿ ಸಿಂಹಾಸನವನ್ನೇರಿದ್ದನು (1:12). ಸೊಲೊಮೋನನ್ನೇ ಈ ಪುಸ್ತಕವನ್ನು ಬರೆದಿದ್ದಾನೆಂದು ಸೂಚಿಸುವ ಕೆಲವೇ ಕೆಲವು ವಚನಗಳಿವೆ. ಸೊಲೊಮೋನನ ಮರಣದ ನಂತರ, ಬಹುಶಃ ನೂರಾರು ವರ್ಷಗಳ ನಂತರ ಈ ಪುಸ್ತಕವನ್ನು ವಿಭಿನ್ನ ವ್ಯಕ್ತಿಯು ಬರೆದಿರಬಹುದು ಎಂದು ಸೂಚಿಸುವಂಥ ಕೆಲವು ಸುಳಿವುಗಳು ಸನ್ನಿವೇಶದಲ್ಲಿವೆ.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ.ಪೂ. 940-931 ರ ನಡುವಿನ ಕಾಲದಲ್ಲಿ ಬರೆದಿರಬಹುದು.
\ip ಬಹುಶಃ ಪ್ರಸಂಗಿಯ ಪುಸ್ತಕವು ಸೊಲೊಮೋನನ ಆಳ್ವಿಕೆಯ ಅಂತ್ಯಕಾಲದಲ್ಲಿ ಬರೆಯಲ್ಪಟ್ಟಿರಬಹುದು, ಇದು ಯೆರೂಸಲೇಮಿನಲ್ಲಿ ಬರೆಯಲ್ಪಟ್ಟಿದೆ ಎಂದು ತೋರುತ್ತದೆ.
\is ಸ್ವೀಕೃತದಾರ
\ip ಪ್ರಸಂಗಿಯ ಪುಸ್ತಕವು ಪ್ರಾಚೀನ ಇಸ್ರಾಯೇಲ್ಯರಿಗಾಗಿ ಮತ್ತು ನಂತರದ ಎಲ್ಲಾ ಸತ್ಯವೇದದ ಓದುಗರಿಗಾಗಿ ಬರೆಯಲಾಯಿತ್ತು.
\is ಉದ್ದೇಶ
\ip ಈ ಪುಸ್ತಕವು ನಮಗೆ ಕಠಿಣ ಎಚ್ಚರಿಕೆಯಾಗಿ ನಿಲ್ಲುತ್ತದೆ. ಗೊತ್ತುಗುರಿಯಿಲ್ಲದೆ ಮತ್ತು ದೇವರ ಭಯವಿಲ್ಲದೆ ಜೀವಿಸುವ ಜೀವನವು ನಿರರ್ಥಕವಾದುದು, ಮತ್ತು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವಾದುದು ಆಗಿದೆ. ನಾವು ಸುಖಸಂತೋಷ, ಸಂಪತ್ತು, ಸೃಜನಶೀಲ ಚಟುವಟಿಕೆ, ಜ್ಞಾನ ಅಥವಾ ಸರಳವಾದ ಆನಂದವನ್ನು ಹಿಂದಟ್ಟಿದರೂ, ನಾವು ಜೀವನದ ಅಂತ್ಯಕ್ಕೆ ಬರುತ್ತೇವೆ ಮತ್ತು ನಮ್ಮ ಜೀವನವನ್ನು ವ್ಯರ್ಥವಾಗಿ ಜೀವಿಸಿದ್ದೇವು ಎಂದು ಕಂಡುಕೊಳ್ಳುತ್ತೇವೆ. ದೇವರ ಮೇಲೆ ಕೇಂದ್ರೀಕೃತವಾಗಿರುವ ಜೀವನದ ಮೂಲಕ ಮಾತ್ರವೇ ಜೀವನಕ್ಕೆ ಅರ್ಥ ಬರುತ್ತದೆ.
\v 1 ಯೆರೂಸಲೇಮಿನಲ್ಲಿ ಅರಸನಾಗಿದ್ದ ದಾವೀದನ ಮಗನಾದ ಪ್ರಸಂಗಿಯ ಮಾತುಗಳು.
\v 2 ಪ್ರಸಂಗಿಯು ಹೀಗೆ ಹೇಳುತ್ತಾನೆ.
\q1 <<ವ್ಯರ್ಥವೇ ವ್ಯರ್ಥ,
\q2 ವ್ಯರ್ಥವೇ ವ್ಯರ್ಥ,
\q1 ಸಮಸ್ತವೂ ವ್ಯರ್ಥ.
\q1
\v 3 ಈ ಲೋಕದಲ್ಲಿ
\f +
\fr 1:3
\fq ಈ ಲೋಕದಲ್ಲಿ
\ft ಅಥವಾ ಸೂರ್ಯನ ಕೆಳಗೆ.
\f* ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಲಾಭವೇನು?
\q1
\s5
\v 4 ಒಂದು ಸಂತತಿಯು ಹೋಗುವುದು,
\q2 ಇನ್ನೊಂದು ಸಂತತಿಯು ಬರುವುದು,
\q1 ಆದರೆ ಭೂಮಿಯು ಶಾಶ್ವತವಾಗಿ ನಿಲ್ಲುವುದು.
\q1
\v 5 ಸೂರ್ಯನು ಉದಯಿಸುತ್ತಾನೆ.
\q2 ಸೂರ್ಯನು ಮುಳುಗುತ್ತಾನೆ.
\q1 ತಾನು ಉದಯಿಸುವ ಸ್ಥಾನಕ್ಕೆ ಅವಸರವಾಗಿ ಹಿಂತಿರುಗಿ ಹೋಗುತ್ತಾನೆ.
\q1
\v 6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ.
\q2 ಉತ್ತರದ ಕಡೆಗೆ ತಿರುಗುವುದು.
\q1 ಅದು ಸುತ್ತುತ್ತಾ ಸುತ್ತುತ್ತಾ ಹೋಗಿ,
\q2 ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.
\q1
\s5
\v 7 ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ.
\q2 ಆದರೂ ಸಮುದ್ರವು ತುಂಬುವುದಿಲ್ಲ.
\q1 ನದಿಗಳು ಎಲ್ಲಿಂದ ಬಂದಿವೆಯೋ
\q2 ಅದೇ ಸ್ಥಳಕ್ಕೆ ಹಿಂತಿರುಗುತ್ತವೆ.
\q1
\v 8 ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ.
\q2 ಇದನ್ನು ಮನುಷ್ಯನು ವಿವರಿಸಲಾರನು.
\q1 ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು,
\q2 ಕೇಳುವುದರಿಂದ ಕಿವಿಯು ದಣಿಯದು.
\q1
\s5
\v 9 ಇದ್ದದ್ದೇ ಇರುವುದು,
\q2 ನಡೆದದ್ದೇ ನಡೆಯುವುದು.
\q1 ಸೂರ್ಯನ ಕೆಳಗೆ ಹೊಸದಾದದ್ದು ಯಾವುದೂ ಇಲ್ಲ.
\q1
\v 10 <ನೋಡು, ಇದು ಹೊಸದು> ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ?
\q2 ನಮಗಿಂತ ಮೊದಲು ಇದ್ದದ್ದು,
\q1 ಪುರಾತನ ಕಾಲದಿಂದ ಇದ್ದದ್ದೇ.
\q1
\v 11 ಪುರಾತನ ಕಾಲದಲ್ಲಿ ನಡೆದ ಸಂಗತಿಗಳ ಜ್ಞಾಪಕವು ಈಗಿನ ಜನರಿಗೆ ಇಲ್ಲ.
\q2 ಮುಂದಿನ ಕಾಲದಲ್ಲಿ ನಡೆಯುವ ಸಂಗತಿಗಳ ಜ್ಞಾಪಕವು ಮುಂದಿನ ಕಾಲದ ಜನರಿಗೆ ಇರುವುದಿಲ್ಲ.>>
\p
\s5
\v 12 ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರಿಗೆ ಅರಸನಾಗಿದ್ದೆನು.
\v 13 ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.
\v 14 ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ
\f +
\fr 1:14
\fq ಗಾಳಿಯನ್ನು ಹಿಂದಟ್ಟುವ
\ft ಅಥವಾ ಗಾಳಿಯನ್ನು ತಿನ್ನುವ ಹಾಗೆ.
\f* ಹಾಗೆ ಸಮಸ್ತವೂ ವ್ಯರ್ಥ.
\q1
\v 15 ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ!
\q2 ಇಲ್ಲದ್ದನ್ನು ಲೆಕ್ಕಿಸುವುದಕ್ಕೆ ಅಸಾಧ್ಯ!
\s ಜ್ಞಾನಿಯ ಅನಿಸಿಕೆ
\p
\s5
\v 16 ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, <<ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ>> ಎಂದುಕೊಂಡೆನು.
\v 17 ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.
\v 18 ಏಕೆಂದರೆ ಬಹಳ ಜ್ಞಾನವಿದ್ದಲ್ಲಿ ಬಹಳ ಸಂಕಟ. ಹೆಚ್ಚು ತಿಳಿವಳಿಕೆಯನ್ನು ಪಡೆದವನಿಗೆ ಹೆಚ್ಚು ವ್ಯಥೆ ಇದೆ.
\v 3 ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.
\v 7 ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು.
\v 8 ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು
\v 19 ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.
\v 20 ಹೀಗಿರಲು ನಾನು ಲೋಕದಲ್ಲಿ ಪ್ರಯಾಸಪಟ್ಟ ಕೆಲಸದ ವಿಷಯವಾಗಿ ನಿರಾಶೆಗೊಳಗಾದೆನು.
\v 21 ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.
\v 24 ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.
\v 25 ಆತನಿಲ್ಲದೆ
\f +
\fr 2:25
\fq ಆತನಿಲ್ಲದೆ
\ft ಅಥವಾ ನಾನಿಲ್ಲದೆ.
\f* ಯಾರು ಭೋಜನ ಮಾಡಿ ಸುಖವನ್ನು ಅನುಭವಿಸುವರು?
\s5
\v 26 ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
\v 11 ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.
\v 14 ದೇವರ ಕಾರ್ಯವೆಲ್ಲವು ನಿತ್ಯವೆಂದು ಬಲ್ಲೆನು. ಅದಕ್ಕೆ ಯಾವುದನ್ನೂ ಸೇರಿಸಲಾರೆವು. ಅದರಿಂದ ಯಾವುದನ್ನೂ ತೆಗೆಯಲಾರೆವು. ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ.
\v 16 ಇದಲ್ಲದೆ ನಾನು ಲೋಕದಲ್ಲಿ ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ, ಧರ್ಮಸ್ಥಾನದಲ್ಲಿಯೂ ಅಧರ್ಮವಿರುವುದೆಂದು ನೋಡಿದೆನು.
\v 17 ಆಗ ನಾನು ಮನಸ್ಸಿನಲ್ಲಿ, <<ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು>> ಎಂದು ಅಂದುಕೊಂಡೆನು.
\v 21 ಮನುಷ್ಯನ ಆತ್ಮವು ಮೇಲಕ್ಕೆ ಏರುತ್ತದೋ, ಪಶುವಿನ ಆತ್ಮವು ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ ಯಾರಿಗೆ ಗೊತ್ತು?
\v 22 ಈ ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?
\v 1 ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ.
\v 6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. <<ಇದು ಅಜಾಗ್ರತೆಯಿಂದ ಆಯಿತು>> ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?
\v 7 ಬಹಳ ಕನಸುಗಳಿಂದಲೂ, ವ್ಯರ್ಥ ವಿಷಯಗಳಿಂದಲೂ, ಹೆಚ್ಚು ಮಾತುಗಳಿಂದಲೂ ವ್ಯರ್ಥವೇ. ನೀನಂತೂ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.
\v 8 ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.
\v 9 ಭೂಮಿಯಿಂದ ಎಲ್ಲರಿಗೂ ಲಾಭವಿದೆ ಮತ್ತು ಹೊಲಗದ್ದೆಗಳಿಂದ ರಾಜನಿಗೆ ಲಾಭವಾಗುತ್ತದೆ.
\v 18 ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.
\v 19 ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.
\v 20 ಇಂಥವನು ತನ್ನ ಜೀವಮಾನದ ದಿನಗಳನ್ನು ಹೆಚ್ಚಾಗಿ ಗಣನೆಗೆ ತಂದುಕೊಳ್ಳುವುದಿಲ್ಲ. ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾನೆ.
\v 1 ಈ ಲೋಕದಲ್ಲಿ ಮನುಷ್ಯರಿಗೆ ವಿಪರೀತವಾಗಿ ಉಂಟಾಗಿರುವ ದುರಾವಸ್ಥೆಯನ್ನು ಕಂಡೆನು.
\v 2 ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.
\p
\s5
\v 3 ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.
\v 4 ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲಿ ಮರೆಯಾಗುತ್ತದೆ. ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ.
\f +
\fr 6:4
\fq ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ.
\ft ಅಥವಾ ಅವನ ಹೆಸರು ಮರೆತುಹೋಗಲ್ಪಡುತ್ತದೆ.
\f*
\p
\s5
\v 5 ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು.
\v 6 ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ.
\q1
\s5
\v 7 ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ,
\q2 ಆದರೂ ಅವನಿಗೆ ತೃಪ್ತಿಯಿಲ್ಲ.
\q1
\v 8 ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ?
\q2 ಜನರ ಮುಂದೆ ಸರಿಯಾಗಿ ನಡೆದುಕೊಳ್ಳಲು ತಿಳಿಯದೇ ಇರುವ
\q3 ಬಡವನಿಗೆ ಲಾಭವೇನು?
\q1
\s5
\v 9 ಬಗೆಬಗೆಯಾಗಿ ಆಶಿಸುವುದಕ್ಕಿಂತ
\q2 ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು.
\q1 ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
\q1
\v 10 ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.
\q1
\v 11 ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ,
\q2 ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ?
\p
\v 12 ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?
\q2 ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.
\q1
\v 6 ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ,
\q2 ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.
\q1
\v 7 ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ.
\q2 ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು?
\q1
\s5
\v 8 ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ,
\q2 ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ.
\q1 ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ,
\q2 ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.
\v 9 ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ.
\p
\s5
\v 10 ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು.
\f +
\fr 8:10
\fq ಜ್ಞಾಪಕವೇ ಇಲ್ಲವಾಯಿತು.
\ft ಅಥವಾ ಅವರನ್ನು ಹೊಗಳುವರು.
\f* ಇದೂ ವ್ಯರ್ಥವೇ.
\v 11 ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.
\p
\s5
\v 12 ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.
\v 13 ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.
\p
\s5
\v 14 ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವು ಒಂದುಂಟು. ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟನಿಗೆ ಆಗುವುದು. ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವುದು. ಇದು ವ್ಯರ್ಥವೆಂದು ನಾನು ಹೇಳಿದೆನು.
\v 15 ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.
\q1
\s5
\v 16 ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, <<ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಕೊಡದೆ ಕೆಲಸ ಮಾಡಿದರೂ,
\v 17 ದೇವರ ಎಲ್ಲಾ ಕಾರ್ಯಗಳನ್ನೂ ಮತ್ತು ಲೋಕದಲ್ಲಿ ಮಾಡುವ ಕೆಲಸಗಳನ್ನೂ ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಪ್ರಯಾಸಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಅದನ್ನು ಗ್ರಹಿಸಿಕೊಳ್ಳಲು ಯೋಚಿಸಿದರೂ ಅವನು ಅದನ್ನು ಗ್ರಹಿಸಲಾರನು.>>
\v 1 ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
\v 3 ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.
\v 9 ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.
\v 10 ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.
\v 2 ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ,
\q2 ಮಳೆಯ ಮೋಡಗಳು ಹಿಂತಿರುಗಿ ಬರುವವು.
\q1
\s5
\v 3
\f +
\fr 12:3
\ft ಇಲ್ಲಿ ಮನೆ ಮಾನವ ಶಾರೀರಿಕ ದೇಹವೆಂಬ, ಗಾವಲಿನವರು ಕೈಗಳೆಂಬ, ಬಲಿಷ್ಠರು ಕಾಲುಗಳೆಂಬ, ಅರೆಯುವವರು ಹಲ್ಲುಗಳೆಂಬ, ಮತ್ತು ನೋಡುವವರು ಕಣ್ಣುಗಳೆಂಬ ಅರ್ಥವನ್ನು ನೀಡುತ್ತದೆ. ಈ ಉದಾಹರಣೆಗಳು ಮರಣದ ಅರ್ಥವನ್ನು ಸಹ ತೋರಿಸುತ್ತವೆ ಎಂದು ಕೆಲವು ಪಂಡಿತರು ಹೇಳುತ್ತಾರೆ.
\f* ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು,
\q2 ಬಲಿಷ್ಠರು ಬಗ್ಗುವರು,
\q1 ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು,
\q2 ಕಿಟಕಿಗಳಿಂದ ನೋಡುವವರು ಮಂಕಾಗುವರು.
\q1
\s5
\v 4 ಬೀದಿಯ ಬಾಗಿಲುಗಳು ಮುಚ್ಚಿರುವವು,
\q2 ಅರೆಯುವ ಶಬ್ದವು ನಿಲ್ಲುವುದು,
\q1 ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು,
\q2 ಗಾಯಕಿಯರೆಲ್ಲಾ ಕುಗ್ಗುವರು.
\q1
\s5
\v 5 ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ,
\q2 ಮತ್ತು ದಾರಿಯಲ್ಲಿ ಅಪಾಯ,
\q1 ಬಾದಾಮಿಯ ಮರವು ಹೂ ಬಿಡುವುದು,
\q2 ಮಿಡತೆಯು ಕೂಡಾ ಭಾರವಾಗಿರುವುದು,
\q2 ಆಶೆಯು ಕುಂದುವುದು.
\q1 ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು,
\q2 ಗೋಳಾಟದವರು ಬೀದಿಯಲ್ಲಿ ತಿರುಗುವರು.
\q1
\s5
\v 6 ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು,
\q2 ಚಿನ್ನದ ಬಟ್ಟಲು ಜಜ್ಜಿಹೋಗುವುದು,
\q2 ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು,
\q2 ಬಾವಿಯ ರಾಟೆ ಮುರಿಯುವುದು,
\q1
\v 7 ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು,
\q2 ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
\q1
\s5
\v 8 <<ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ>> ಎಂದು ಪ್ರಸಂಗಿಯು ಹೇಳುತ್ತಾನೆ.