\ip ಈ ಪುಸ್ತಕವು ಬೂಜಿಯ ಮಗನು, ಯಾಜಕನು ಮತ್ತು ಪ್ರವಾದಿಯು ಆದ ಯೆಹೆಜ್ಕೇಲನಿಗೆ ಸೇರಿದುದೆಂದು ಹೇಳಲಾಗುತ್ತದೆ. ಅವನು ಯೆರೂಸಲೇಮಿನಲ್ಲಿ ಯಾಜಕನ ಕುಟುಂಬದಲ್ಲಿ ಬೆಳೆದನು ಮತ್ತು ಸೆರೆವಾಸದ ಸಮಯದಲ್ಲಿ ಬಾಬೆಲಿನಲ್ಲಿದ್ದ ಯೆಹೂದ್ಯರೊಂದಿಗೆ ವಾಸಿಸುತ್ತಿದ್ದನು. ಯೆಹೆಜ್ಕೇಲನ ಯಾಜಕತ್ವದ ವಂಶಾವಳಿಯು ಅವನ ಪ್ರವಾದಿಯ ಸೇವೆಯಲ್ಲಿ ವಿಜೃಂಭಿಸುತ್ತದೆ, ದೇವಾಲಯ, ಯಾಜಕತ್ವ, ಕರ್ತನ ಮಹಿಮೆ, ಮತ್ತು ಯಜ್ಞದ ಪದ್ಧತಿ ಮುಂತಾದ ವಿಷಯಗಳಲ್ಲಿ ಅವನು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ.ಪೂ. 593-570 ರ ನಡುವಿನ ಕಾಲದಲ್ಲಿ ಬರೆದಿರಬಹುದು.
\ip ಯೆಹೆಜ್ಕೇಲನು ಬಾಬೆಲನಿಂದ ಬರೆದನು, ಆದರೆ ಅವನ ಪ್ರವಾದನೆಗಳು ಇಸ್ರಾಯೇಲ್, ಐಗುಪ್ತ, ಮತ್ತು ನೆರೆಹೊರೆಯ ಹಲವಾರು ದೇಶಗಳ ಕುರಿತಾಗಿದ್ದವು.
\is ಸ್ವೀಕೃತದಾರರು
\ip ಬಾಬೆಲಿನಲ್ಲಿ ಮತ್ತು ಸ್ವದೇಶದಲ್ಲಿದ್ದ ಇಸ್ರಾಯೇಲ್ಯರು ಮತ್ತು ಸತ್ಯವೇದದ ಓದುಗಾರರೆಲ್ಲರು.
\is ಉದ್ದೇಶ
\ip ಅತೀವ ಪಾಪ ಮತ್ತು ಸಂಪೂರ್ಣವಾಗಿ ಹತಾಶರಾಗಿದ್ದ ತನ್ನ ಕಾಲದ ತಲೆಮಾರಿನವರಿಗೆ ಯೆಹೆಜ್ಕೇಲನು ಸೇವೆಮಾಡುತ್ತಿದ್ದನು. ಅವನು ತನ್ನ ಪ್ರವಾದನಾ ಸೇವೆಯ ಮೂಲಕ ಅವರನ್ನು ತಕ್ಷಣವೇ ಪಶ್ಚಾತ್ತಾಪಕ್ಕೆ ಮತ್ತು ಭವಿಷ್ಯದಲ್ಲಿ ಆತ್ಮವಿಶ್ವಾಸಕ್ಕೆ ತರಲು ಪ್ರಯತ್ನಿಸಿದನು. ದೇವರು ಮಾನವ ಸಂದೇಶಕರ ಮೂಲಕ ಕ್ರಿಯೆ ಮಾಡುತ್ತಾನೆ, ಸೋಲು ಮತ್ತು ಹತಾಶೆಯಲ್ಲಿಯೂ ಸಹ ದೇವರ ಜನರು ದೇವರ ಸಾರ್ವಭೌಮತ್ವವನ್ನು ದೃಢಪಡಿಸಿಕೊಳ್ಳಬೇಕು, ದೇವರ ವಾಕ್ಯವು ಎಂದಿಗೂ ವಿಫಲವಾಗುವುದಿಲ್ಲ, ದೇವರು ಎಲ್ಲೆಡೆಯು ಇದ್ದಾನೆ ಮತ್ತು ಎಲ್ಲೆಡೆಯು ಆತನನ್ನು ಆರಾಧಿಸಬಹುದು ಎಂದು ಅವನು ಬೋಧಿಸಿದನು. ಯೆಹೆಜ್ಕೇಲನ ಪುಸ್ತಕವು ನಾವು ಕಳೆದುಹೋಗಿದ್ದೇವೆ ಎಂದು ಭಾವಿಸುವಂಥ ಆ ಕಗ್ಗತ್ತಲೆಯ ಕಾಲದಲ್ಲಿ ಕರ್ತನನ್ನು ಹುಡುಕಿರಿ, ನಮ್ಮ ಜೀವನವನ್ನು ಪರೀಕ್ಷಿಸಿಕೊಳ್ಳಿರಿ, ಮತ್ತು ನಾವು ಏಕ ಸತ್ಯ ದೇವರೊಂದಿಗೆ ಒಂದಾಗಿರಬೇಕು ಎಂದು ನಮಗೆ ನೆನಪಿಸುತ್ತದೆ.
\is ಮುಖ್ಯಾಂಶ
\ip ಕರ್ತನ ಮಹಿಮೆ
\iot ಪರಿವಿಡಿ
\io1 1. ಯೆಹೆಜ್ಕೇಲನ ಕರೆ (1:1—3:27)
\io1 2. ಯೆರೂಸಲೇಮ್, ಯೆಹೂದ ಮತ್ತು ದೇವಾಲಯದ ವಿರುದ್ಧ ಪ್ರವಾದನೆಗಳು (4-24)
\io1 3. ದೇಶಗಳ ವಿರುದ್ಧ ಪ್ರವಾದನೆಗಳು (25-32)
\io1 4. ಇಸ್ರಾಯೇಲ್ಯರಿಗೆ ಸಂಬಂಧಿಸಿದ ಪ್ರವಾದನೆಗಳು (33-39)
\v 1 ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.
\v 2 ಅರಸನಾದ ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ,
\v 3 ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.
\v 4 ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು.
\v 5 ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು; ಅವುಗಳ ರೂಪವು ಮನುಷ್ಯನ ರೂಪದಂತಿತ್ತು.
\v 6 ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ಮತ್ತು ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು.
\v 10 ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು.
\v 11 ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟಿದ್ದವು; ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.
\v 12 ಆ ಜೀವಿಗಳೆಲ್ಲಾ ನೇರ ಮುಖವಾಗಿಯೇ ಹೋಗುತ್ತಿದ್ದವು, ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಹಿಂತಿರುಗಿನೋಡದೆ ಮುಂದೆ ಹೋದವು.
\v 13 ಆ ಜೀವಿಗಳ ಮಧ್ಯದಲ್ಲಿ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
\v 14 ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ, ಹಿಂದಕ್ಕೂ ವೇಗವಾಗಿ ಚಲಿಸುತ್ತಿದ್ದವು.
\v 15 ಇಗೋ, ನಾನು ಆ ಜೀವಿಗಳನ್ನು ನೋಡುತ್ತಿರಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ಕಾಣಿಸಿತು.
\v 16 ಆ ಚಕ್ರಗಳ ವರ್ಣವೂ, ರಚನೆಯೂ ಹೇಗಿದ್ದವೆಂದರೆ, ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.
\s5
\v 17 ಅವು ಚಲಿಸುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ತಿರುಗುತ್ತಿದ್ದವು; ಓರೆಯಾಗಿ ತಿರುಗುತ್ತಿರಲಿಲ್ಲ.
\v 19 ಜೀವಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದೆ ಹೋಗುತ್ತಿದ್ದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೇಳುವಾಗ ಚಕ್ರಗಳೂ ಮೇಲೆ ಏಳುತ್ತಿದ್ದವು;
\v 20 ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳ ಒಳಗಿನ ಆತ್ಮವು ಚಕ್ರಗಳಲ್ಲಿ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು.
\v 21 ಅವು ಮುಂದೆ ಹೋಗುವಾಗ ಇವೂ ಮುಂದೆ ಹೋಗುತ್ತಿದ್ದವು, ಅವು ನಿಂತು ಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು.
\v 22 ಭೀಕರವಾದ ಮಂಜುಗಡ್ಡೆಯಂತೆ ಥಳಥಳಿಸುವ ಒಂದು ರೀತಿಯ ಗಗನಮಂಡಲ ಆ ಜೀವಿಗಳ ತಲೆಯ ಮೇಲ್ಗಡೆ ಹರಡಿತ್ತು.
\v 23 ಅದರ ಕೆಳಗೆ ಜೀವಿಗಳ ರೆಕ್ಕೆಗಳು ನೇರವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು.
\s5
\v 24 ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.
\v 27 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು.
\p
\v 28 ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.
\v 1 ಯೆಹೋವನು ನನಗೆ, <<ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು>> ಎಂದು ಹೇಳಿದನು.
\v 2 ಆತನು ಈ ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು.
\v 3 ಆತನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ಈ ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ.
\v 4 <<ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, <ಕರ್ತನಾದ ಯೆಹೋವನು ಇಂತೆನ್ನುತ್ತಾನೆ> ಎಂದು ನುಡಿ.
\v 5 ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು".
\v 6 <<ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.
\v 1 ಆತನು ನನಗೆ, <<ನರಪುತ್ರನೇ, ನಿನಗೆ ಸಿಕ್ಕಿದ ಈ ಸುರುಳಿಯನ್ನು ತಿನ್ನು; ಅನಂತರ ನೀನು ಹೋಗಿ (ಇದರಲ್ಲಿನ ಸಂಗತಿಗಳನ್ನು) ಇಸ್ರಾಯೇಲ್ ವಂಶದವರಿಗೆ ಸಾರು>> ಎಂದು ಅಪ್ಪಣೆಕೊಟ್ಟನು.
\v 2 ನಾನು ಬಾಯಿ ತೆರೆದೆ, ಆತನು ಆ ಸುರುಳಿಯನ್ನು ನನಗೆ ತಿನ್ನಿಸಿದನು.
\v 3 ಆಗ ಆತನು ನನಗೆ, <<ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ>> ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಿಯಲ್ಲಿ ಜೇನಿನಂತೆ ಸಿಹಿಯಾಗಿತ್ತು.
\v 4 ಆಮೇಲೆ ಆತನು ನನಗೆ ಹೀಗೆಂದನು, <<ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.
\v 5 ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯ ಜನರ ಬಳಿಗೆ ಕಳುಹಿಸುವುದಿಲ್ಲ.
\v 6 ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಒಳಗೆ ನಿನ್ನನು ಕಳುಹಿಸುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
\v 14 ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.
\v 15 ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು.
\v 16 ಏಳು ದಿನಗಳಾದ ಮೇಲೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
\v 17 <<ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.
\v 18 ನಾನು ದುಷ್ಟನಿಗೆ, <ನೀನು ಖಂಡಿತವಾಗಿ ಸಾಯುವೆ> ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.
\v 19 ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
\v 20 ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ.
\v 21 ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.>>
\v 22 ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ, <<ನೀನು ಎದ್ದು, ಬಯಲು ಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು>> ಎಂದು ಹೇಳಿದನು.
\v 23 ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು.
\v 26 ಇದಲ್ಲದೆ ನಿನ್ನ ನಾಲಿಗೆಯು ಸೇದಿ ಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸಲಾರೆ; ಅವರು ತಿರುಗಿ ಬೀಳುವ ಮನೆತನದವರಾಗಿದ್ದಾರೆ.
\v 27 ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, <ಕರ್ತನಾದ ಯೆಹೋವನು ಇಂತೆನ್ನುತ್ತಾನೆ> ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ; ಅವರು ತಿರುಗಿ ಬೀಳುವ ವಂಶದವರೇ.>>
\v 1 <<ನರಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ಪಟ್ಟಣದ ನಕ್ಷೆಯನ್ನು ಬರೆ.
\v 2 ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಅಡ್ಡಕಟ್ಟಿ, ಪಾಳೆಯಗಳನ್ನು ಮಾಡಿ, ಕತ್ತರಿಸುವ ಯಂತ್ರಗಳನ್ನು ನಿಲ್ಲಿಸಿ, ಅದಕ್ಕೆ ಮುತ್ತಿಗೆ ಹಾಕು.
\v 3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಮತ್ತು ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಿಗೆ ಹಾಕಲ್ಪಡುವುದು, ನೀನು ಅದನ್ನು ಮುತ್ತಿಗೆ ಹಾಕಿದಂತಾಗುವುದು. ಇದು ಇಸ್ರಾಯೇಲ್ ವಂಶದವರಿಗೆ ಒಂದು ಗುರುತು.
\v 4 <<ಇದಲ್ಲದೆ, ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೋ. ಇಸ್ರಾಯೇಲ್ ವಂಶದವರ ಪಾಪದ ಭಾರವನ್ನು ಅದರ ಮೇಲಿಡಬೇಕು. ನೀನು ಎಡಮಗ್ಗುಲಲ್ಲಿ ಮಲಗುವ ದಿನಗಳ ಪ್ರಕಾರ ಅವರ ಪಾಪದ ಭಾರವನ್ನು ಹೊತ್ತುಕೊಂಡಿರಬೇಕು.
\v 5 ನಾನು ದಿನಗಳ ಲೆಕ್ಕದ ಪ್ರಕಾರ ಅವರ ಪಾಪದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಬತ್ತು ದಿನಗಳಾಗಿವೆ. ಹೀಗೆ ನೀನು ಇಸ್ರಾಯೇಲ್ ವಂಶದವರ ಪಾಪವನ್ನು ನೀನು ಹೊರಬೇಕು.
\v 6 <<ಅಷ್ಟು ದಿನಗಳು ತೀರಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಪಾಪವನ್ನು ಅನುಭವಿಸಬೇಕು; ವರ್ಷ ಒಂದಕ್ಕೆ ಒಂದು ದಿನದ ಮೇರೆಗೆ ನಲ್ವತ್ತು ದಿನ ಅವರ ಪಾಪವನ್ನು ಹೊರಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ.
\v 7 ನಿನ್ನ ತೋಳಿಗೆ ಹೊದಿಕೆಯಿಲ್ಲದೆ, ಮುತ್ತಿಗೆಯಾದ ಯೆರೂಸಲೇಮಿನ ಕಡೆಗೆ ಮುಖವನ್ನು ತಿರುಗಿಸಿ, ಅದರ ವಿಷಯವಾಗಿ ಅಶುಭವನ್ನು ಪ್ರವಾದಿಸು.
\v 8 ಇಗೋ, ನಿನ್ನ ಮುತ್ತಿಗೆಯ ದಿನಗಳು ತೀರುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.
\s ಮುತ್ತಿಗೆಯಲ್ಲಿನ ಕೊರತೆ, ಸೆರೆಯಲ್ಲಿನ ಹೊಲೆ ಇವುಗಳ ಸೂಚನೆ
\v 9 <<ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದಿ, ನವಣೆ, ಕಡಲೆ, ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರತೊಂಬತ್ತು ದಿನ ಅದನ್ನು ತಿನ್ನು.
\v 10 ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲಾದಂತೆ (230 ಗ್ರಾಂ) ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.
\v 11 ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.
\v 14 ಅದಕ್ಕೆ ನಾನು, <<ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ>> ಎಂದು ಅರಿಕೆಮಾಡಲು,
\v 15 ಆತನು ನನಗೆ, <<ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ, ಇದನ್ನು ಉರಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೋ>> ಎಂದು ಉತ್ತರಕೊಟ್ಟನು.
\v 16 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಕಳವಳದಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ನಡುಗುತ್ತಾ ಕುಡಿಯುವರು.
\v 17 ಅವರಲ್ಲಿ ಪ್ರತಿಯೊಬ್ಬರೂ ಅನ್ನ ಮತ್ತು ನೀರಿನ ಕೊರತೆಯಿಂದ ಕುಗ್ಗಿ ತಮ್ಮ ಅಧರ್ಮದಿಂದ ನಾಶವಾಗಿ ಹೋಗುವರು.>>
\v 1 <<ನರಪುತ್ರನೇ, ಹದವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ, ಗಡ್ಡವನ್ನೂ ಬೋಳಿಸಿಬಿಟ್ಟು, ತಕ್ಕಡಿಯನ್ನು ತಂದು ಅದರಿಂದ ತೂಗಿ ಆ ಕೂದಲನ್ನು ಭಾಗ ಮಾಡು.
\v 2 ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.
\v 5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇದು ಯೆರೂಸಲೇಮ್; ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ.
\v 6 ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.>>
\v 7 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಕೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.
\v 8 ಆದುದರಿಂದ ಯೆರೂಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು ಇದು ಕರ್ತನಾದ ಯೆಹೋವನ ನುಡಿ.
\v 11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.
\v 12 ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
\v 13 <<ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.
\v 14 ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ, ಸುತ್ತಲಿನ ಜನಾಂಗಗಳ ನಿಂದೆಗೆ ಗುರಿ ಮಾಡುವೆನು.
\v 15 <<ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.
\v 16 ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.
\v 17 ನಾನು ಕಳುಹಿಸುವ ಕ್ಷಾಮದಿಂದಲೂ, ದುಷ್ಟಮೃಗಗಳಿಂದಲೂ ನಿನಗೆ ಪುತ್ರಶೋಕವು ಉಂಟಾಗುವುದು; ವ್ಯಾಧಿಯೂ, ರಕ್ತ ಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು>> ಇದು ಯೆಹೋವನಾದ ನನ್ನ ನುಡಿ.
\v 2 <<ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು, ಅವುಗಳನ್ನು ಕುರಿತು ಪ್ರವಾದಿಸು.
\v 3 <ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.
\v 6 << <ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುದರಿಂದಲೂ, ಪೂಜಾ ಸ್ಥಳಗಳು ಪಾಳುಬೀಳುವುದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮ ಸೂರ್ಯಸ್ತಂಭಗಳು ಕಡಿಯಲ್ಪಡುವುವು.
\v 7 ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
\v 8 << <ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.
\v 9 ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.
\v 10 ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.> >>
\v 13 ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.
\v 14 ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.> >>
\v 1 ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.
\v 2 ಇಗೋ, ನಾನು ನೋಡಲಾಗಿ ಬೆಂಕಿಯು ಉರಿಯುತ್ತದೋ ಎಂಬಂತೆ ನನಗೆ ತೇಜೋರೂಪವು ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತಕಾಂತಿಯು ಹೊಳೆಯಿತು.
\v 3 ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.
\v 4 ಆಹಾ, ಇಸ್ರಾಯೇಲಿನ ದೇವರ ಮಹಿಮೆಯ ದರ್ಶನವು ಬಯಲು ಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.
\v 5 ಆಗ ಆತನು ನನಗೆ, <<ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು>> ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು.
\p
\v 6 ಆಗ ಆತನು ನನಗೆ, <<ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ>> ಎಂದು ಹೇಳಿದನು.
\v 10 ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು.
\v 11 ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.
\v 12 ಆಗ ಆತನು ನನಗೆ, <<ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? <ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ> ಎಂದು ಮಾತನಾಡಿಕೊಳ್ಳುತ್ತಾರಷ್ಟೆ>> ಎಂಬುದಾಗಿ ಹೇಳಿದನು.
\v 13 ಆಮೇಲೆ ಆತನು ನನಗೆ, <<ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ>> ಎಂದು ಹೇಳಿದನು.
\v 14 ಆತನು ನನ್ನನ್ನು ಯೆಹೋವನ ಆಲಯದ ಉತ್ತರದ ಬಾಗಿಲ ಮುಂದಕ್ಕೆ ಕರೆತಂದನು; ಇಗೋ, ಅಲ್ಲಿ ಸ್ತ್ರೀಯರು <<ತಮ್ಮೂಜ್
\f +
\fr 8:14
\fq ತಮ್ಮೂಜ್
\ft ಪುರಾತನ ಮಧ್ಯ ಪ್ರಾಚ್ಯದಲ್ಲಿ, ತಮ್ಮೂಜ್ ಅನ್ನು ಸಸ್ಯವು ಸತ್ತಾಗ ಸಾಯುವಂಥ ದೇವರು ಎಂದು ಪರಿಗಣಿಸಲ್ಪಟ್ಟಿದ್ದನು, ಅವನು ಮುಂಬರುವ ವರ್ಷದಲ್ಲಿ ಮರಣದಿಂದ ಮತ್ತೆ ಎದ್ದುಬರುವನು ಎಂದು ಊಹಿಸಲಾಗಿತ್ತು, ಅವನ ಸಾವಿಗೆ ಸ್ತ್ರೀಯರು ದುಃಖಿಸುತ್ತಿದ್ದರು.
\f* >> ದೇವತೆಗಾಗಿ ಅಳುತ್ತಾ ಕುಳಿತಿದ್ದರು.
\v 15 ಇದಾದ ಮೇಲೆ ಆತನು ನನಗೆ, <<ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವೆ>> ಎಂದು ಹೇಳಿದನು.
\v 16 ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.
\v 17 ಆಗ ಆತನು ನನಗೆ, <<ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.
\v 18 ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.>>
\v 1 ಆಮೇಲೆ ಆತನು, <<ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ಯಾ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ>> ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.
\v 2 ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರ ಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.
\v 3 ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಕಂಡನು.
\v 4 ಯೆಹೋವನು ಕೂಗಿ ಅವನಿಗೆ, <<ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು>> ಎಂದು ಅಪ್ಪಣೆಕೊಟ್ಟನು.
\v 5 ಮತ್ತೂ ಆತನು ಉಳಿದವರಿಗೆ, <<ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ>> ಎಂಬುದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು.
\v 6 ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.
\v 7 ಆತನು ಅವರಿಗೆ, <<ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿರಿ>> ಎಂದು ಅಪ್ಪಣೆ ಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.
\v 8 ಅವರು ಹತಿಸುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, <<ಅಯ್ಯೋ, ಕರ್ತನಾದ ಯೆಹೋವನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಹೊಯ್ದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ?>> ಎಂದು ಮೊರೆಯಿಟ್ಟೆನು.
\v 9 ಆತನು ನನಗೆ, <<ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, <ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ> ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.
\v 10 ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು>> ಎಂದು ಹೇಳಿದನು.
\v 1 ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.
\v 2 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, <<ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು>> ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.
\v 6 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಪುರುಷನಿಗೆ, <<ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೆಂಕಿಯನ್ನು ತೆಗೆದುಕೋ>> ಎಂದು ಅಪ್ಪಣೆ ಕೊಡಲು ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.
\v 7 ಆಗ ಒಬ್ಬ ಕೆರೂಬಿಯು ಇತರ ಕೆರೂಬಿಗಳ ನಡುವೆ ಕೈ ಚಾಚಿ ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು ನಾರಿನ ಬಟ್ಟೆಯನ್ನು ಹೊದ್ದುಕೊಂಡವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.
\v 8 ಕೆರೂಬಿಗಳ ಒಂದೊಂದು ರೆಕ್ಕೆಯ ಕೆಳಗೂ ಮನುಷ್ಯಹಸ್ತದಂಥ ಒಂದೊಂದು ಹಸ್ತವು ಕಾಣಿಸಿತು.
\v 9 ಇಗೋ, ನಾನು ನೋಡಲಾಗಿ ಆ ಕೆರೂಬಿಗಳ ಪಕ್ಕಗಳಲ್ಲಿ, ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ಬಣ್ಣವು ಪೀತರತ್ನದ ಹಾಗೆ ಹೊಳೆಯುತ್ತಿತ್ತು.
\v 10 ಅವುಗಳ ರೂಪವು ಹೇಗಿತ್ತೆಂದರೆ ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು, ಆ ನಾಲ್ಕು ಒಂದೇ ಮಾದರಿಯಾಗಿದ್ದವು.
\v 11 ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಓರೆಯಾಗಿ ಹೊರಳುತ್ತಿರಲಿಲ್ಲ; ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.
\v 12 ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಮತ್ತು ಚಕ್ರಗಳಲ್ಲಿಯೂ ಕಣ್ಣುಗಳು ಸುತ್ತಲೂ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.
\v 13 ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂಬುದೇ.
\v 14 ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು, ಎರಡನೆಯದು ಮನುಷ್ಯನದು, ಮೂರನೆಯದು ಸಿಂಹದ್ದು, ನಾಲ್ಕನೆಯದು ಗರುಡಪಕ್ಷಿಯದು.
\v 15 ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ.
\v 16 ಕೆರೂಬಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವುಗಳ ಸಂಗಡಲೇ ಏರಿದವು.
\v 17 ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು.
\v 18 ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು.
\v 19 ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಆಲಯದ ಪೂರ್ವ ಬಾಗಿಲಿನ ಮುಂದೆ ನಿಂತವು, ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು.
\v 1 ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.
\v 5 ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, <<ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.
\v 6 ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.
\p
\v 7 <<ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.
\v 11 ಈ ಪಟ್ಟಣವು ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿನ ಮಾಂಸವಾಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು.
\p
\v 12 << <ನಾನೇ ಯೆಹೋವನು> ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.>>
\v 13 ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, <<ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ?>> ಎಂದು ಮೊರೆಯಿಟ್ಟೆನು.
\v 15 <<ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇಮಿನವರು ಮತ್ತು ಇಸ್ರಾಯೇಲ್ ವಂಶದವರಲ್ಲಿ ಉಳಿದಿರುವವರು, <ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವತ್ತಾಗಿ ಸಿಕ್ಕಿದೆ> ಎಂದು ಹೀನೈಸಿದರೋ ಅವರೆಲ್ಲರು ಉಳಿದಿದ್ದಾರಲ್ಲಾ.
\v 16 <<ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.>
\p
\v 17 <<ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.>
\v 18 ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯ ವಸ್ತುಗಳನ್ನೂ, ಸಮಸ್ತ ಅಸಹ್ಯ ವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.
\v 19 <<ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.
\v 20 ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
\v 21 ಆದರೆ ಯಾರ ಮನಸ್ಸು ತಮ್ಮ ಅಸಹ್ಯ ವಸ್ತುಗಳನ್ನೂ, ಅಸಹ್ಯ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು>> ಇದು ಕರ್ತನಾದ ಯೆಹೋವನ ನುಡಿ.
\v 3 <<ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.
\v 4 ನೀನು ನಿನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ, ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮದಲ್ಲಿ ಹೊರಟು ಹೋಗು.
\v 5 ಅವರು ನೋಡುತ್ತಿರುವಾಗ, ನೀನು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ನಿನ್ನ ಸಾಮಗ್ರಿಗಳನ್ನು ಸಾಗಿಸಿಕೊಂಡು ಹೋಗು.
\v 6 ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆ ಹಾಕಿ, ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮುಖವನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಗುರುತನ್ನಾಗಿ ಮಾಡಿದ್ದೇನೆ.>>
\v 7 ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಆಚೆಗೆ ಹಾಕಿ, ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯಲ್ಲಿ ಕಿಂಡಿಯನ್ನು ಮಾಡಿ, ಕತ್ತಲಲ್ಲಿ ಆ ಸಾಮಾನನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು.
\v 11 ಇದನ್ನೂ ನುಡಿ, <ನಾನು ನಿಮಗೆ ಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವುದು; ಅವರು ವಲಸೆಯಾಗಿ ಸೆರೆ ಹೋಗುವರು.
\v 12 ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಆಚೆಗೆ ಸಾಗಿಸುವರು; ಅವನು ಮುಖವನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸುವುದಿಲ್ಲ.>
\v 13 ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯರ ದೇಶವಾದ ಬಾಬೆಲೋನಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡುವುದಿಲ್ಲ.
\v 14 ಅವನ ಸುತ್ತಲಿನ ಸಕಲ ಸಹಾಯಕರನ್ನೂ, ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
\p
\v 15 <<ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚೆಲ್ಲಾಪಿಲ್ಲಿ ಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.
\v 16 ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.>>
\v 19 ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು, <ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇಮಿನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ, ಅವರು ಅನ್ನವನ್ನು ನಡಗುತ್ತಾ ತಿನ್ನುವರು ಮತ್ತು ನೀರನ್ನು ಹೆದರಿಕೆಯಿಂದ ಕುಡಿಯುವರು; ಏಕೆಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವುದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ದೇಶವು ಬರಿದಾಗುವುದು.
\v 20 ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವುದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.> >>
\v 21 ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
\v 22 <<ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?>>
\v 23 ಅವರಿಗೆ ಹೀಗೆ ಹೇಳು, <<ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಗಾದೆಯನ್ನು ಬಳಸುವುದನ್ನು ನಿಲ್ಲಿಸಿಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ, <ಕ್ಲುಪ್ತಕಾಲವು ಸಮೀಪಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.
\v 24 ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು, ಮೋಸದ ಕಣಿಯೂ ಇರದು.
\v 25 ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು> >> ಇದು ಕರ್ತನಾದ ಯೆಹೋವನ ವಾಕ್ಯ.
\v 26 ಮತ್ತು ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
\v 27 <<ನರಪುತ್ರನೇ, ಇಗೋ, ಇಸ್ರಾಯೇಲ್ ವಂಶದವರು, <ಇವನಿಗಾದ ದಿವ್ಯದರ್ಶನವು ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ> ಎಂದು ಹೇಳುತ್ತಾರೆ.
\p
\v 28 <<ಆದಕಾರಣ ನೀನು ಅವರಿಗೆ ಹೀಗೆ ಹೇಳು, <ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ> ಇದು ಕರ್ತನಾದ ಯೆಹೋವನ ನುಡಿ.>>
\v 5 ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿ ಗೋಡೆಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಭದ್ರ ಮಾಡಲೂ ಇಲ್ಲ. ಯೆಹೋವನು ಇಂತೆನ್ನುತ್ತಾನೆ> ಎಂದು ನುಡಿ,
\v 6 ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.
\v 7 ನಾನು ಮಾತನಾಡದೆ ಹೋದರೂ, <ಯೆಹೋವನು ಇಂತೆನ್ನುತ್ತಾನೆ> ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು.
\v 8 <<ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನೀವು ವ್ಯರ್ಥವಾದದ್ದನ್ನು ನುಡಿದು, ಸುಳ್ಳಾದ ದರ್ಶನವನ್ನು ಕಂಡಿದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ> ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.
\v 9 <ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು> ಎಂದು ನಿಮಗೆ ಗೊತ್ತಾಗುವುದು.
\v 13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, << <ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶ ಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು, ನನ್ನ ರೋಷದಿಂದ ಆನೆಕಲ್ಲುಗಳು ಸುರಿಯುವವು;
\v 14 ನೀವು ಸುಣ್ಣಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲ ಸಮಮಾಡಿ ಅದರ ಅಸ್ತಿವಾರವನ್ನು ಬಯಲುಪಡಿಸುವೆನು; ಅದು ಬಿದ್ದುಹೋಗುವುದು ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ ನಾನೇ ಯೆಹೋವನು> ಎಂದು ನಿಮಗೆ ಗೊತ್ತಾಗುವುದು.
\v 15 ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು,
\v 16 <ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು> >> ಇದು ಕರ್ತನಾದ ಯೆಹೋವನ ನುಡಿ.
\v 17 << <ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.>
\v 18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಗಳನ್ನು ಕಟ್ಟಿ, ಉದ್ದವಾದವರಿಗೂ, ಗಿಡ್ಡವಾದವರಿಗೂ ತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?
\v 19 ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.>
\v 20 <<ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತು ಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಿಗಳನ್ನು ನಾನು ಬಿಡಿಸಿ, ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.
\v 21 ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
\v 22 ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.
\v 23 ಆದಕಾರಣ ನೀವು ಮಿಥ್ಯ ದರ್ಶನವನ್ನು ಹೊಂದಿ, ಕಣಿಹೇಳುವ ಕೆಲಸವು ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು, ನಾನೇ ಯೆಹೋವನು> ಎಂದು ನಿಮಗೆ ಗೊತ್ತಾಗುವುದು.>>
\v 2 ನನ್ನ ಮುಂದೆ ಕುಳಿತುಕೊಂಡಿರುವಾಗ ಯೆಹೋವನು ಈ ವಾಕ್ಯವನ್ನು ನನಗೆ ಅನುಗ್ರಹಿಸಿದನು,
\v 3 <<ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.>>
\v 4 ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು.
\v 5 ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.>>
\v 6 ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.
\v 7 <<ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.
\v 8 ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
\v 9 <<ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.
\v 10 ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು.
\v 11 ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು>> ಇದು ಕರ್ತನಾದ ಯೆಹೋವನ ನುಡಿ.
\v 12 ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
\v 13 <<ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.
\v 14 ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು>> ಇದು ಕರ್ತನಾದ ಯೆಹೋವನ ನುಡಿ.
\v 15 <<ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,
\v 16 ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವುದು>> ಇದು ಕರ್ತನಾದ ಯೆಹೋವನ ನುಡಿ.
\v 17 <<ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,
\v 18 ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ>> ಇದು ಕರ್ತನಾದ ಯೆಹೋವನ ನುಡಿ.
\v 19 <<ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ,
\v 20 ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ>> ಇದು ಕರ್ತನಾದ ಯೆಹೋವನ ನುಡಿ.
\v 21 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!
\v 22 ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.
\v 23 ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು>> ಇದು ಕರ್ತನಾದ ಯೆಹೋವನ ನುಡಿ.
\v 2 <<ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?
\v 3 ಜನರು ದ್ರಾಕ್ಷಿಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವ ವಸ್ತುವನ್ನಾದರೂ ನೇತು ಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
\v 4 ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ.
\v 5 ಅದು ಸಂಪೂರ್ಣವಾಗಿ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?>>
\p
\v 6 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ.
\v 7 ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
\v 8 ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು>> ಇದು ಕರ್ತನಾದ ಯೆಹೋವನ ನುಡಿ.
\v 2 <<ನರಪುತ್ರನೇ, ನೀನು ಯೆರೂಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ,
\v 3 ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ, <ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.
\v 4 ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಲ್ಲಿ ತಾಯಿಯು ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ, ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲು ಸುತ್ತಲಿಲ್ಲ.
\v 5 ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿನದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿ ಬಿಟ್ಟರು.
\v 6 <<ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, <ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು> ಎಂದು ಹೇಳಿದೆನು. ಹೌದು, <ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು> ಎಂದು ಹೇಳಿ ಬದುಕಿಸಿದೆನು.
\v 7 <ಭೂಮಿಯಲ್ಲಿ ಮೊಳೆಯುವ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು, ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಗಳು ಮೂಡಿದವು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ.
\v 8 ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ> >> ಇದು ಕರ್ತನಾದ ಯೆಹೋವನ ನುಡಿ.
\v 9 <<ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು.
\v 10 ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
\v 11 ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು,
\v 13 ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ.
\v 14 ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವು ಹೆಸರುವಾಸಿಯಾಗಿ ಜನಾಂಗಗಳಲ್ಲಿ ಹಬ್ಬಿತು>> ಇದು ಕರ್ತನಾದ ಯೆಹೋವನ ನುಡಿ.
\v 17 ಮತ್ತು ನಾನು ನನ್ನ ಬೆಳ್ಳಿ ಬಂಗಾರದಿಂದ ನಿನಗೆ ಮಾಡಿಸಿಕೊಟ್ಟಿದ್ದ ನಿನ್ನ ಚಂದವಾದ ಆಭರಣಗಳನ್ನು ನೀನು ತೆಗೆದು ಅವುಗಳಿಂದ ಪುರುಷ ಮೂರ್ತಿಗಳನ್ನು ರೂಪಿಸಿಕೊಂಡು ಅವುಗಳೊಡನೆ ವ್ಯಭಿಚಾರ ಮಾಡಿದೆ.
\v 18 ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.
\v 19 ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!>> ಇದು ಕರ್ತನಾದ ಯೆಹೋವನ ನುಡಿ.
\v 20 <<ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ?
\v 21 ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ, ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದಿಯೋ?
\v 22 ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.
\v 25 ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನು ಸೇರಿಸಿ ವ್ಯಭಿಚಾರವನ್ನು ಹೆಚ್ಚಾಗಿ ನಡೆಸಿರುವೆ.
\v 26 ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಬೆರೆತು ಹೆಚ್ಚಾಗಿ ವ್ಯಭಿಚಾರಮಾಡಿ ನನ್ನನ್ನು ರೇಗಿಸಿರುವೆ.
\v 27 ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.
\v 30 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿರುವೆ.
\v 31 ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ, ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ವ್ಯಭಿಚಾರಿಯಂತೆ ನೀನು ನಡೆಯುವವಳಲ್ಲ.
\v 32 <<ನೀನು ವ್ಯಭಿಚಾರಮಾಡುವ ಪತಿವ್ರತೆ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!
\v 33 ಎಲ್ಲಾ ಕಡೆ ವ್ಯಭಿಚಾರಿ ಸ್ತ್ರೀಗೆ ಹಣಕೊಡುವುದುಂಟು; ನೀನಾದರೋ ನಿನ್ನ ಪ್ರಿಯರಿಗೆಲ್ಲ ನೀನೇ ಹಣವನ್ನು ಕೊಡುತ್ತಿರುವೆ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.
\v 34 ನಿನ್ನ ವ್ಯಭಿಚಾರಕ್ಕೂ, ಇತರ ವೇಶ್ಯೆಯರ ವ್ಯಭಿಚಾರಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರ ಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ!>>
\v 35 ಹೀಗಿರಲು ವ್ಯಭಿಚಾರಿಯೇ, ಯೆಹೋವನ ಈ ವಾಕ್ಯವನ್ನು ಕೇಳು,
\v 36 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,
\v 37 ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.
\v 38 ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.
\v 39 ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕೆಡವಿ, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ಕಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.
\v 40 ಅವರು ನಿನ್ನ ವಿಚಾರವಾಗಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು, ಕತ್ತಿಗಳಿಂದ ಹತಿಸುವರು.
\v 41 ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ.
\v 42 ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.
\v 43 <<ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ>> ಇದು ಕರ್ತನಾದ ಯೆಹೋವನ ನುಡಿ.
\v 44 <<ಆಹಾ, ಗಾದೆಗಳಲ್ಲಿ ಜಾಣರು <ತಾಯಿಯಂತೆ ಮಗಳು> ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು.
\v 45 ಗಂಡನಿಗೂ, ಮಕ್ಕಳಿಗೂ ಬೇಸರಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ, ಮಕ್ಕಳಿಗೂ ಬೇಸರಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
\v 47 ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.>>
\v 48 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಜೀವದಾಣೆ, ನೀನೂ ನಿನ್ನ ಕುಮಾರ್ತೆಯರೂ ನಡೆದಂತೆ ಸೊದೋಮೆಂಬ ನಿನ್ನ ತಂಗಿಯಾಗಲಿ, ಆಕೆಯ ಕುಮಾರ್ತೆಯರಾಗಲಿ ನಡೆಯಲಿಲ್ಲ.
\v 49 ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.
\v 50 ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
\v 51 ಸಮಾರ್ಯವೆಂಬಾಕೆಯು ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.
\v 52 ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯ ಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.
\v 53 <<ಸೊದೋಮ್ ಮತ್ತು ಆಕೆಯ ಕುಮಾರ್ತೆಯರು, ಸಮಾರ್ಯ ಮತ್ತು ಆಕೆಯ ಕುಮಾರ್ತೆಯರು, ಇವರ ದುರಾವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರಾವಸ್ಥೆಯನ್ನೂ ತಪ್ಪಿಸುವೆನು.
\v 54 ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ.
\v 55 ಆಗ ಸಮಾರ್ಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಮತ್ತು ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ.
\v 56 ಅರಾಮಿನ ಕುಮಾರ್ತೆಯರು ಮತ್ತು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮೊದಲು,
\v 57 ನಿನ್ನ ಕೆಟ್ಟತನವು ಬಯಲಿಗೆ ಬರುವುದಕ್ಕೆ ಮೊದಲು, ಆ ನಿನ್ನ ಗರ್ವಕಾಲದಲ್ಲಿ ಅರಾಮ್ಯರ ಪುತ್ರಿಯರಿಂದಲೂ ಮತ್ತು ಫಿಲಿಷ್ಟಿಯರ ಪುತ್ರಿಯರಿಂದಲೂ ನಿನ್ನ ಹೆಸರು ಅವರ ಬಾಯಲ್ಲಿ ಬರಲೇ ಇಲ್ಲ.
\v 58 ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ನೀನು ಅನುಭವಿಸಬೇಕಾಗಿ ಬಂತು>> ಇದು ಯೆಹೋವನ ನುಡಿ.
\v 60 ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.
\v 61 ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.
\v 62 ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.
\v 63 ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ>> ಇದು ಕರ್ತನಾದ ಯೆಹೋವನ ನುಡಿ.
\v 2 <<ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು,
\v 3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು.
\v 4 ತುಟ್ಟತುದಿಯ ಚಿಗುರುಗಳನ್ನು ಕಚ್ಚಿ, ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ಬಹಳ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.
\v 5 << <ಆಮೇಲೆ ಅದು ಆ ದೇವದಾರು ಇದ್ದ ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂಮಿಯಲ್ಲಿ ನೆಟ್ಟು, ನೀರವಂಜಿಯ ಮರದ ಹಾಗೆ ಬೆಳೆಯಿಸಿತು.
\v 6 ಅದು ಮೊಳೆತು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು.
\v 7 << <ಅಗಲವಾದ ರೆಕ್ಕೆಗಳುಳ್ಳ ಗರಿ ತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.
\v 8 ಅದು ಸೊಂಪಾದ ದ್ರಾಕ್ಷಾಲತೆಯಾಗಿ ರೆಂಬೆಗಳನ್ನು ಹರಡಿ ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.> >>
\v 9 ಈ ಮಾತನ್ನು ನುಡಿ, <<ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅದು ಸಮೃದ್ಧವಾಗಿಯೇ ಇರುವುದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು, ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದು ಬೇರು ಸಹಿತ ಕೀಳಲ್ಪಡುವುದು; ಬಹಳ ಬಲದಿಂದಲ್ಲ, ಬಹಳ ಜನರಿಂದಲ್ಲ.
\v 10 ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.>>
\v 11 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
\v 12 <<ದ್ರೋಹಿ ವಂಶದವರಾದ ಈ ಜನರಿಗೆ ಹೀಗೆ ಹೇಳು, ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಮತ್ತು ಪ್ರಧಾನರನ್ನೂ ಹಿಡಿದು ಬಾಬೆಲೋನಿಗೆ ತೆಗೆದುಕೊಂಡು ಹೋದನು.
\v 15 ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?>>
\p
\v 16 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಜೀವದಾಣೆ, ಇವನು ಯಾರಿಂದ ಅರಸನಾಗಿ ನೇಮಿಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾರ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವುದು ಖಂಡಿತ.
\v 17 ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಕೋಟೆಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗುವುದಿಲ್ಲ.
\v 18 ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಆಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.>>
\v 19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ, ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು.
\v 20 ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬೆಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.
\v 21 ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.>>
\v 22 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.
\v 23 ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.
\v 24 ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.>>
\v 9 ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು>> ಇದು ಕರ್ತನಾದ ಯೆಹೋವನ ನುಡಿ.
\v 12 ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,
\v 13 ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.
\v 17 ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
\v 21 <<ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
\v 22 ಅವನು ಮಾಡಿದ ಯಾವ ಅಪರಾಧವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.>>
\v 24 ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.
\v 29 ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಿಲ್ಲವೋ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.>>
\p
\v 30 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.
\v 31 <<ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?
\v 32 ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ>> ಇದು ಕರ್ತನಾದ ಯೆಹೋವನ ನುಡಿ.
\v 3 <<ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನನ್ನನ್ನು ಪ್ರಶ್ನೆ ಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ> >> ಇದು ಕರ್ತನಾದ ಯೆಹೋವನ ನುಡಿ.
\v 4 <<ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಇವರ ಪೂರ್ವಿಕರ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು,
\v 5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಯಾವ ದಿನದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು, ಯಾಕೋಬ ಸಂತಾನದವರಿಗೆ ಮಾತುಕೊಟ್ಟು, ನಾನು ನಿಮ್ಮ ದೇವರಾದ ಯೆಹೋವನು> ಎಂದು ಐಗುಪ್ತ ದೇಶದಲ್ಲಿ ಪ್ರಮಾಣ ಪೂರ್ವಕವಾಗಿ ತಿಳಿಯಪಡಿಸಿದೆನೋ,
\v 6 ಆ ದಿನದಲ್ಲಿ ನಾನು ಅವರಿಗೆ, <ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು> ಎಂದು ಪ್ರಮಾಣಮಾಡಿದೆನು.
\v 7 <ನೀವೆಲ್ಲರೂ ನಿಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಬಿಸಾಡಿಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು> >> ಎಂಬುದಾಗಿ ಅವರನ್ನು ಎಚ್ಚರಿಸಿದೆನು.
\v 8 << <ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು> ಅಂದುಕೊಂಡೆನು.
\v 9 <ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.
\v 10 ಆಗ ನಾನು ಅವರನ್ನು ಐಗುಪ್ತ ದೇಶದೊಳಗಿಂದ ಬಿಡಿಸಿ, ಅರಣ್ಯಕ್ಕೆ ಕರೆದು ತರಲು,
\v 11 ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.
\v 12 ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು.
\v 13 << <ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು> ಅಂದುಕೊಂಡೆನು.
\v 14 <ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.
\v 15 ಆ ಮೇಲೆ ಸಕಲ ದೇಶ ಶಿರೋಮಣಿಯಾದ ಯಾವ ದೇಶವನ್ನು ವಾಗ್ದಾನಮಾಡಿದೆನೋ, ಹಾಲೂ ಮತ್ತು ಜೇನು ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸುವುದಿಲ್ಲ ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು.
\v 16 ಏಕೆಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತರಾಗಿ, ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.
\v 17 ಆದರೂ ನಾನು ಅವರನ್ನು ನಾಶ ಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.> >>
\v 18 ಆ ಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ, <<ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ, ಅವರ ವಿಧಿಗಳನ್ನು ಕೈಕೊಳ್ಳದೆ, ಅವರ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳದೆ ಇರಬೇಕು.
\v 19 ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನಡೆಯಿರಿ.
\v 20 ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ಪರಿಶುದ್ಧ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ಮತ್ತು ನನಗೂ ಗುರುತಾಗಿರುವುವು>> ಎಂದು ಹೇಳಿದೆನು.
\v 21 <<ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು
\f +
\fr 20:21
\fq ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು
\ft ನಾನು ನನ್ನ ಕ್ರೋಧವನ್ನು ಅವರ ಮೇಲೆ ಸುರಿಸಿ, ಅವರಿಗೆ ವಿರುದ್ಧವಾಗಿರುವ ನನ್ನ ಕೋಪವನ್ನು ತೀರಿಸಿಕೊಳ್ಳುವೆನು.
\f* >> ಅಂದುಕೊಂಡೆನು.
\v 22 <<ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.
\v 23 ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶದಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಪ್ರಮಾಣ ಮಾಡಿ ಹೇಳಿದೆ.
\v 24 ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.>> ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.
\v 27 ಹೀಗಿರಲು, <<ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನಿಮ್ಮ ಪೂರ್ವಿಕರು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ.
\v 28 ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.>
\v 29 ನೀವು ಹೋಗುವ, <ಬಾಮಾ ಎಂಬ ಪೂಜಾಸ್ಥಾನ ಇದು ಎಂಥ ಸ್ಥಳ?> >> (ಇಂದಿನ ವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂದೇ ಹೆಸರು).
\v 30 ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಿಮ್ಮ ಪೂರ್ವಿಕರಂತೆ ನಿಮ್ಮನ್ನು ನೀವೇ ಹೊಲಸು ಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯ ವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹ ಮಾಡುತ್ತೀರೋ?
\v 31 ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧ ಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸುವುದಿಲ್ಲ>> ಇದು ಕರ್ತನಾದ ಯೆಹೋವನ ನುಡಿ.
\v 32 <<ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.>>
\v 36 ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು>> ಇದು ಕರ್ತನಾದ ಯೆಹೋವನ ನುಡಿ.
\v 37 <<ನಾನು ನಿಮ್ಮನ್ನು ಲೆಕ್ಕಿಸುವಂತೆ, ದಂಡನೆಯ ಕೋಲಿನ ಕೆಳಗೆ ಹೋಗುವಂತೆ ಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು.
\v 38 ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು>> ಎಂದು ನಿಮಗೆ ಗೊತ್ತಾಗುವುದು.
\v 39 ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.>>
\v 40 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.
\v 41 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
\v 42 ನಾನು ಪ್ರಮಾಣಮಾಡಿ, ನಿಮ್ಮ ಪೂರ್ವಿಕರಿಗೆ ಯಾವ ದೇಶವನ್ನು ಕೊಟ್ಟೆನೋ, ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
\v 43 ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.
\v 44 ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ, ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ, ನನ್ನ ಹೆಸರಿನ ನಿಮಿತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು>> ಇದು ಕರ್ತನಾದ ಯೆಹೋವನ ನುಡಿ.
\v 45 ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
\v 46 <<ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ,
\v 47 ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು.
\v 2 <<ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ,
\v 3 ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, <ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.
\v 6 <<ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.
\v 7 <ಏಕೆ ನರಳಾಡುತ್ತೀ?> ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, <ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು> ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.>>
\v 15 ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!
\v 28 ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, <<ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.
\v 29 ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.
\v 2 <<ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು,
\v 3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ! ನಿನ್ನ ಕೇಡಿಗಾಗಿ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ!
\v 4 ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿ, ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ, ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.
\v 11 ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ.
\v 12 ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.
\v 13 << <ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ.
\v 14 ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.
\v 15 ನಾನು ನಿನ್ನನ್ನು ಜನಾಂಗಗಳಲ್ಲಿ ಚದುರಿಸಿ, ದೇಶ ದೇಶಗಳಿಗೆ ಹರಡಿಸಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.
\v 24 <<ನರಪುತ್ರನೇ, ಆ ನಾಡಿಗೆ ಹೀಗೆ ಹೇಳು, <ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.>
\v 25 ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
\v 26 ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.
\v 27 ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.
\v 28 ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, <ಕರ್ತನಾದ ಯೆಹೋವನು ಇಂತೆನ್ನುತ್ತಾನೆ> ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ.
\v 30 << <ನಾನು ದೇಶವನ್ನು ಹಾಳು ಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ ಪೌಳಿ ಗೋಡೆಯ ಬಿರುಕಿನಲ್ಲಿ ನಿಲ್ಲುವುದಕ್ಕೂ, ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.
\v 31 ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.> ಇದು ಕರ್ತನಾದ ಯೆಹೋವನ ನುಡಿ.>>
\v 1 ಯೆಹೋವನು ಮತ್ತೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
\v 2 <<ನರಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು.
\v 3 ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.
\v 4 ಅವರ ಹೆಸರುಗಳೇನೆಂದರೆ: ಹಿರಿಯವಳ ಹೆಸರು ಒಹೊಲ ಮತ್ತು ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರ್ಯವನ್ನೂ, ಒಹೊಲೀಬ ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.
\v 5 <<ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು,
\v 6 ಅವರೆಲ್ಲರೂ ನೇರಳೆ ಬಣ್ಣದಿಂದ ಹೊದಿಸಲ್ಪಟ್ಟ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಎಲ್ಲಾ ಯುವಕರೂ, ಕುದರೆಗಳ ಮೇಲೆ ಸವಾರಿಮಾಡುವ ರಾಹುತರೂ ಆಗಿರುವವರನ್ನು ಮೋಹಿಸಿದಳು.
\v 7 ಅವರಿಗೆ ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
\v 8 ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚೆಚ್ಚಾಗಿ ನಡೆಸಿದರು.
\v 9 <<ಆದಕಾರಣ ನಾನು ಅವಳನ್ನು ಅವಳ ಪ್ರಿಯರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು.
\v 10 ಇವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಮತ್ತು ಅವಳ ಗಂಡು, ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.>>
\v 11 <<ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ವ್ಯಭಿಚಾರಕ್ಕಿಂತ ಹೆಚ್ಚಾದ ವ್ಯಭಿಚಾರವನ್ನು ನಡೆಸಿ, ಅವಳನ್ನು ಮೀರುವಷ್ಟು ಕೆಟ್ಟವಳಾದಳು.
\v 12 ಇವಳು ತನ್ನ ನೆರೆಯವರಾದ ಅಶ್ಶೂರ್ಯರನ್ನೂ, ನಾಯಕರನ್ನೂ, ಅಧಿಕಾರಿಗಳನ್ನು ವಿಚಿತ್ರವಾಗಿ ಉಡುಪು ಧರಿಸಿ ಕುದರೆಗಳ ಮೇಲೆ ಸವಾರಿಮಾಡುವ ರಾಹುತರನ್ನು, ಸುಂದರವಾದ ಯುವಕರನ್ನು ಮೋಹಿಸಿದಳು.
\v 13 ಇವಳೂ ಅಪವಿತ್ರಳಾಗಿ ಹೋದದ್ದನ್ನು ನೋಡಿದೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದವರು.
\v 22 ಆದುದರಿಂದ ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ಆ ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ.
\v 23 ಬಾಬಿಲೋನಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು ಮತ್ತು ಎಲ್ಲಾ ಅಶ್ಶೂರ್ಯರೆಲ್ಲರೊಂದಿಗೂ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ, ಸೈನ್ಯಾಧಿಪತಿಗಳೂ, ಅಧಿಕಾರಸ್ಥರೂ, ಯುದ್ಧವೀರರು, ಖ್ಯಾತಿ ಹೊಂದಿದವರೂ, ಎಲ್ಲರೂ ಕುದರೆಗಳ ಮೇಲೆ ಬೀಳುವಂತೆ ಮಾಡುವೆನು.
\v 24 ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು.
\v 25 ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವುರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.
\v 26 ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.
\v 27 ಹೀಗೆ ನಾನು ನಿನ್ನ ದುಷ್ಕರ್ಮವನ್ನು, ನೀನು ಐಗುಪ್ತದಲ್ಲಿ ಇದ್ದಂದಿನಿಂದ ನಡೆದು ಬಂದ ನಿನ್ನ ವ್ಯಭಿಚಾರವನ್ನೂ ನಿನ್ನಿಂದ ತೊಲಗಿಸುವೆನು; ಆ ಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.>>
\v 28 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ, ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು,
\v 29 ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು.
\v 34 <<ನೀನು ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವಿ. ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ. ಏಕೆಂದರೆ ನಾನೇ ಅದನ್ನು ಹೇಳಿದ್ದೇನೆ>> ಎಂಬುದು ಕರ್ತನಾದ ಯೆಹೋವನ ನುಡಿ.
\v 35 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.>>
\v 42 <<ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನ ಶಬ್ದವು ಇತ್ತು. ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಅವರು ನಾಡಿನ ಜನರೊಂದಿಗೆ ಸೇರಿ, ನಿನ್ನ ಕೈಗೆ ಕಡಗವನ್ನು ತೊಡಿಸಿ, ತಲೆಗೆ ಸುಂದರ ಕಿರೀಟವನ್ನಿಟ್ಟರು.
\v 43 ಆಗ ನಾನು, <ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ, ಅವಳು ಇವರೊಂದಿಗೆ ವ್ಯಭಿಚಾರ ಮಾಡುತ್ತಾರಲ್ಲಾ> ಅಂದುಕೊಂಡೆನು.
\v 44 ವ್ಯಭಿಚಾರಿಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟ ಹೆಂಗಸರಾದ ಒಹೊಲಳನ್ನೂ ಮತ್ತು ಒಹೊಲೀಬಳನ್ನೂ ಸೇರಿದರು.
\v 45 ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.>>
\v 6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ರಕ್ತಮಯವಾದ ಪಟ್ಟಣವೇ ನನಗೆ ಧಿಕ್ಕಾರ ಹಂಡೆಯಲ್ಲಿನ ಕಿಲುಬು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ಮಾಂಸವನ್ನು ತುಂಡು ತುಂಡಾಗಿ ತೆಗೆ. ಆಯ್ಕೆಯ ಚೀಟಿಯನ್ನು ಹಾಕಬೇಡ.
\v 13 <<ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.>>
\v 14 ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, <<ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು>> ಇದು ಕರ್ತನಾದ ಯೆಹೋವನ ನುಡಿ.
\v 20 ನಾನು ಅವರಿಗೆ ಹೀಗೆ ಹೇಳಿದೆನು, <<ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ.
\v 21 ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, <ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ
\v 22 ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ, ಮನುಷ್ಯರ ರೊಟ್ಟಿಯನ್ನು ತಿನ್ನದೆ ಇರುವಿರಿ,
\v 23 ರುಮಾಲುಗಳು ನಿಮ್ಮ ತಲೆಯ ಮೇಲೆಯೂ, ಕೆರಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರ ಸಂಗಡಲೊಬ್ಬರು ನರಳುವಿರಿ.
\v 24 ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದಂತೆಯೇ ಎಲ್ಲವನ್ನು ನೀವು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವುದು.> >>
\v 25 <<ನರಪುತ್ರನೇ, ಅವರ ಬಲಾಧಾರವೂ, ಅವರ ನೇತ್ರಾನಂದಕರವಾದ ಆಲಯವನ್ನು, ಅವರು ಆಶಿಸುವುದನ್ನೂ, ಅವರ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಅವರ ಬಲದಿಂದ ತೆಗೆದು ಹಾಕುವ ದಿನದಲ್ಲಿ,
\v 26 ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದು ನಡೆದ ಸಂಗತಿಯನ್ನು ನಿನಗೆ ತಿಳಿಸುವನು.
\v 27 ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ. ನಾನೇ ಯೆಹೋವನು>> ಎಂದು ಅವರಿಗೆ ಗೊತ್ತಾಗುವುದು.
\v 3 <ಕರ್ತನಾದ ಯೆಹೋವನ ಮಾತನ್ನು ಕೇಳು> ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದನ್ನು, ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, <<ಅಹಾ!>> ಎಂದು ಹಿಗ್ಗಿಕೊಂಡೆ.
\v 4 ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು, ನಿನ್ನ ಹಾಲನ್ನು ಕುಡಿದುಬಿಡುವರು.
\v 5 ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.> >>
\v 6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.
\v 7 ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸುಲಿಗೆಗಾಗಿ ಮ್ಲೇಚ್ಛರಿಗೆ ವಶಪಡಿಸಿ, ಜನಾಂಗಗಳೊಳಗಿಂದ ಕಿತ್ತುಬಿಟ್ಟು, ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ, ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.>>
\v 8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.
\v 9 ಆದುದರಿಂದ, ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.
\v 10 ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು.
\v 11 ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸಿ ತೀರಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.>>
\v 14 ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು>> ಇದು ಕರ್ತನಾದ ಯೆಹೋವನ ನುಡಿ.
\v 1 ಹನ್ನೊಂದನೆಯ ವರ್ಷದ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
\v 2 <<ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು>> ಅಂದುಕೊಳ್ಳುವೆನು.
\v 3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.
\v 4 ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೋಟೆ ಕೊತ್ತಲುಗಳನ್ನು ಕೆಡವಿ ಹಾಕುವವು; ನಾನು ಅದರ ಧೂಳನ್ನು ಒರೆಸಿ, ಅದನ್ನು ಬೋಳು ಬಂಡೆಯಂತೆ ಮಾಡುವೆನು.
\v 9 ಗುರಾಣಿ ಹಿಡಿದಿರುವವರನ್ನು ಕಳುಹಿಸಿ, ತನ್ನ ಯುದ್ಧ ಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೋಟೆ ಕೊತ್ತಲಗಳನ್ನು ಒಡೆದು ಬಿಡುವನು.
\v 10 ಅವನ ಲೆಕ್ಕವಿಲ್ಲದ ಕುದುರೆಗಳಿಂದ ಏಳುವ ಧೂಳಿನಿಂದ ನಿನ್ನನ್ನು ಮುಸುಕುವನು; ಒಡಕು ಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.
\v 11 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲು ಕಂಬಗಳನ್ನು ಕೆಡವಿ ಹಾಕುವನು.
\v 12 ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.
\v 13 ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.
\v 14 ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ>> ಇದು ಕರ್ತನಾದ ಯೆಹೋವನ ನುಡಿ.
\v 15 ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, <<ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ?
\v 16 ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.
\v 17 ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!
\v 18 ಈ ನಿನ್ನ ಪತನದ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದ್ದಕ್ಕೆ ಸಮುದ್ರ ದ್ವೀಪಗಳು ಗಾಬರಿಯಾಗುವವು.>>
\v 1 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
\v 2 <<ನರಪುತ್ರನೇ, ನೀನು ತೂರಿನ ವಿಷಯದಲ್ಲಿ ಶೋಕ ಗೀತೆಯನ್ನೆತ್ತು, ಅದಕ್ಕೆ ಹೀಗೆ ನುಡಿ,
\v 3 <ಸಮುದ್ರ ದ್ವಾರದಲ್ಲಿ ವಾಸಿಸುತ್ತಾ, ಜನಾಂಗಗಳಿಗಾಗಿ ಅನೇಕ ದ್ವೀಪಗಳೊಂದಿಗೆ ವ್ಯಾಪಾರ ಮಾಡುವ ನಗರಿಯೇ!> ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
\q ತೂರೇ, <ನಾನು ಪರಿಪೂರ್ಣ ಸುಂದರಿಯಾಗಿದ್ದೇನೆ> ಎಂದು ನೀನು ಅಂದುಕೊಂಡಿದ್ದೀ!
\q
\s5
\v 4 ನಿನ್ನ ನೆಲೆಯು ಸಮುದ್ರದ ಮಧ್ಯವೇ; ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು.
\q
\v 5 ಸೆನೀರಿನ ತುರಾಯಿ ಮರದಿಂದ ನಿನ್ನ ಹಲಗೆಗಳನ್ನು ಮಾಡುವುದಕ್ಕೆ
\q ಮತ್ತು ನಿನ್ನ ಸ್ತಂಭವನ್ನು ರಚಿಸುವುದಕ್ಕೆ ಲೆಬನೋನಿನಿಂದ ದೇವದಾರು ಮರವನ್ನು ತಂದರು.
\q
\s5
\v 6 ನಿನ್ನ ಹುಟ್ಟುಗೋಲನ್ನು ಬಾಷಾನಿನ ಓಕ್ ಮರದಿಂದ ಮಾಡಿ,
\q ಕಿತ್ತೀಮ್ ದ್ವೀಪದ ಹಲಿಗೆಯಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಕೆತ್ತಿದ್ದಾರೆ.
\q
\v 7 ನಿನ್ನ ಹಾಯಿಯು ನಿನಗೆ ಧ್ವಜವಾಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರು ಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟನ್ನು ಎಲೀಷ ಕರಾವಳಿಯ ಧೂಮ್ರ ರಕ್ತವರ್ಣಗಳಿಂದ ಚಿತ್ರಿತವಾಗಿದೆ.
\q
\s5
\v 8 ಚೀದೋನಿನ, ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವರು;
\q ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು.
\q
\v 9 ನಿನ್ನಲ್ಲಿ ಸೇರಿಕೊಂಡಿದ್ದ ಗೇಬಾಲಿನ ಹಿರಿಯರೂ ಮತ್ತು ಜಾಣರೂ ನಿನ್ನ ಬಿರುಕುಗಳನ್ನು ಮುಚ್ಚಿದ್ದಾರೆ.
\q ಸಮುದ್ರದ ಸಕಲ ನಾವೆಗಳ ಮತ್ತು ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು, ನಿನಗೆ ಸರಕುಗಳನ್ನು ತಂದೊಪ್ಪಿಸಿದ್ದಾರೆ.
\q
\s5
\v 10 ಪಾರಸಿಯರೂ, ಲೂದ್ಯರೂ, ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು.
\q ಗುರಾಣಿಯನ್ನು ಮತ್ತು ಶಿರಸ್ತ್ರಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು!
\v 11 ಅರ್ವಾದಿನವರೂ ಮತ್ತು ಹೆಲೆಕರು ನಿನ್ನ ಸೈನಿಕರ ಸಂಗಡ ನಿನ್ನ ಗೋಡೆಗಳ ಸುತ್ತಲೂ ನಿಂತಿದ್ದರು. ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ಎಲ್ಲರೂ ತಮ್ಮ ಗುರಾಣಿಗಳನ್ನು ಸುತ್ತಮುತ್ತಲು ನಿನ್ನ ಗೋಡೆಗಳ ಮೇಲೆ ನೇತುಹಾಕಿ, ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು!
\p
\s5
\v 12 <<ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು.
\v 13 ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.
\p
\s5
\v 14 <<ತೋಗರ್ಮ ವಂಶದವರು ಕುದುರೆಗಳಿಂದಲೂ, ಕುದುರೆ ಸವಾರಿಗಳಿಂದಲೂ, ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
\v 15 ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತ ಕೊಂಬು ಮತ್ತು, ಕಪ್ಪುಮರಗಳನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.
\p
\s5
\v 16 <<ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
\p
\v 17 <<ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ
\f +
\fr 27:17
\fq ಖಂಡಸಕ್ಕರೆ
\ft ಮೂಲ ಪದ ಪನ್ನಗ್.
\f* , ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.
\p
\v 18 <<ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ, ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನೂ ಹಾಗು ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸುತ್ತಿದ್ದರು.
\p
\s5
\v 19 <<ದಾನಿನವರೂ ಮತ್ತು ಯಾವಾನಿನವರೂ ಊಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸಿದರು.ಕಬ್ಬಿಣ, ಬಜೆ, ಲವಂಗ, ಚಕ್ಕೆ ಇವುಗಳು ನಿನಗೆ ಆಮದಾಗುತ್ತಿದ್ದವು.
\v 20 ದೇದಾನಿನವರು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿದ್ದರು.
\v 21 ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು.
\p
\s5
\v 22 <<ಶೆಬದವರೂ ಮತ್ತು ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
\v 24 ಅವರು ನಿನ್ನ ವ್ಯಾಪಾರಿಗಳಾಗಿ, ಉತ್ತಮ ಕಸೂತಿಯ ಧೂಮ್ರ ವರ್ಣದ ನಿಲುವಂಗಿ ಮೊದಲಾದ ಸರಕುಗಳನ್ನೂ, ಹಗ್ಗಗಳಿಂದ ಬಲವಾಗಿ ಬಿಗಿದ ವಿಚಿತ್ರ ವಸ್ತ್ರಗಳ ಪೆಟ್ಟಿಗೆಗಳನ್ನೂ ತಂದರು.
\v 25
\f +
\fr 27:25
\ft ಪರ್ಯಾಯ ಭಾಷಾಂತರ; ತಾರ್ಷೀಷಿನ ಹಡಗುಗಳು ಸಾಲುಸಾಲಾಗಿ ನಿನಗೆ ಬೇಕಾದ ವಸ್ತುಗಳನ್ನು ತೆಗೆದುಕೊಂಡು ಬಂದವು. ನೀನು ಭರ್ತಿಯಾಗಿ, ಸಮುದ್ರದ ಮಧ್ಯದಲ್ಲಿ ಬಹು ಭಾರವಾಗಿದೆ.
\f* ತಾರ್ಷೀಷಿನ ಹಡಗಿನ ಪ್ರಯಾಣಿಕರು ನಿನ್ನನ್ನು ನಿನ್ನ ಮಾರುಕಟ್ಟೆಯಲ್ಲಿ ಹೊಗಳುವರು.
\q ನೀನು ಸಮುದ್ರ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ.
\q
\s5
\v 26 ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ.
\q
\v 27 ನಿನ್ನ ಆಸ್ತಿಯು, ನಿನ್ನ ವಸ್ತುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಒಡಕುಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ಮುಳುಗಿ ಹೋಗುವರು.
\q
\s5
\v 28 ನಿನ್ನ ನಾವಿಕರ ಕೂಗಾಟಕ್ಕೆ ಸಮೀಪದ ಪ್ರದೇಶಗಳು ನಡುಗುವುವು.
\q
\v 29 ಹುಟ್ಟುಹಾಕುವವರೆಲ್ಲರೂ, ಅಂಬಿಗರೂ,
\q ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದ ಇಳಿದು ನೆಲದ ಮೇಲೆ ನಿಂತುಕೊಳ್ಳುವರು.
\q
\v 30 ನಿನ್ನ ನಿಮಿತ್ತ ದುಃಖದಿಂದ ಅರಚಿ, ತಲೆಗೆ ಧೂಳೆರಚಿಕೊಂಡು,
\q ಬೂದಿಯಲ್ಲಿ ಬಿದ್ದು ಹೊರಳಾಡಿ,
\q
\s5
\v 31 ನಿನಗಾಗಿ ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು,
\v 1 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
\v 2 <<ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು> ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.
\v 6 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ. <<ನೀನು ನಿನ್ನನ್ನು ದೇವರಿಗೆ ಸಮಾನವಾಗಿಸಿಕೊಂಡಿರುವೆ.
\v 7 ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
\v 11 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
\v 12 <<ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ.
\v 13 ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
\v 14 << <ನೀನು ರೆಕ್ಕೆತೆರೆದು ನೆರಳು ನೀಡುವ ಕೆರೂಬಿಯಾಗಿದ್ದೆ; ನಾನು ನಿನ್ನನ್ನು ದೇವರ ಪರಿಶುದ್ಧ ಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಅಮೂಲ್ಯ ರತ್ನಗಳ ಕೆಂಡದ ಮಧ್ಯದಲ್ಲಿ ವಿಹಾರ ಮಾಡುತ್ತಿದ್ದೆ.
\v 15 ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
\v 16 << <ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
\p
\v 17 << <ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.
\v 21 <<ನರಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
\v 22 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು> ಎಂದು ಎಲ್ಲರಿಗೂ ಗೊತ್ತಾಗುವುದು.
\v 23 <ನಾನು ಅದರಲ್ಲಿ ವ್ಯಾಧಿಯನ್ನೂ, ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟು ಮಾಡುವೆನು, ಖಡ್ಗವು ಸುತ್ತುಮುತ್ತಲೂ ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು> ಎಂದು ಅವರಿಗೆ ತಿಳಿದು ಬರುವುದು.
\p
\v 24 <<ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು>> ಎಂದು ಅವರಿಗೆ ತಿಳಿಯುವುದು.
\v 25 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, << <ಜನಾಂಗಗಳಲ್ಲಿ ಚದುರಿ ಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.
\v 26 ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.> >>
\v 4 <<ನಾನು ನಿನ್ನ ದವಡೆಗಳಿಗೆ ಗಾಳ ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ, ಆ ಮೀನುಗಳ ಸಹಿತ ನಿನ್ನನ್ನು ನೈಲ್ ನದಿಯ ಮಧ್ಯದೊಳಗಿಂದ ಹೊರಗೆ ಎಳೆದು ಹಾಕುವೆನು.
\q
\v 5 ನಿನ್ನನ್ನೂ, ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಅರಣ್ಯದ ಪಾಲು ಮಾಡುವೆನು;
\q ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಹೂಣಿಡುವುದೂ ಇಲ್ಲ, ಸೇರಿಸುವುದೂ ಇಲ್ಲ;
\q ನಾನು ನಿನ್ನನ್ನು ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.
\v 11 << <ಯಾವ ಮನುಷ್ಯನ ಪಾದವೂ ಅದರಲ್ಲಿ ಹಾದುಹೋಗುವುದಿಲ್ಲ; ಯಾವ ಪಶುವಿನ ಪಾದವೂ ಅದರಲ್ಲಿ ದಾಟಿಹೋಗುವುದಿಲ್ಲ; ನಲ್ವತ್ತು ವರ್ಷ ನಿರ್ಜನವಾಗಿರುವುದು.
\v 12 ಹಾಳು ಬಿದ್ದಿರುವ ದೇಶಗಳ ಮಧ್ಯದಲ್ಲಿ ಐಗುಪ್ತ ದೇಶವನ್ನೂ ಹಾಳುಮಾಡುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲ್ವತ್ತು ವರ್ಷ ಹಾಗೆಯೇ ಇರುವುದು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ, ದೇಶದೇಶಗಳಲ್ಲಿ ಚದುರಿಸುವೆನು.> >>
\v 15 ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಸ್ಥಿತಿಗೆ ತರುವೆನು.
\v 16 ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲರಲ್ಲಿ ಐಗುಪ್ತದಿಂದ ಇನ್ನು ಹುಟ್ಟುವುದಿಲ್ಲ. ನಾನೇ ಯೆಹೋವನು> >> ಎಂದು ಅವರಿಗೆ ತಿಳಿಯುವುದು.
\v 17 ಇಪ್ಪತ್ತೇಳನೆಯ ವರ್ಷದ, ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
\v 18 <<ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಅತಿ ಕ್ರೂರವಾಗಿ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಸುಲಿದು ಹೋಗಿದೆ. ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ, ಅವನ ಸೈನಿಕರಿಗಾಗಲಿ ತೂರಿನಿಂದ ಪ್ರತಿಫಲವೇನೂ ಸಿಕ್ಕಲಿಲ್ಲ.>>
\v 19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು.
\v 20 ಅವನು ಸೈನ್ಯ ಸಮೇತನಾಗಿ ನನಗೋಸ್ಕರ ಸೇವೆ ಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಐಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ>> ಇದು ಕರ್ತನಾದ ಯೆಹೋವನ ನುಡಿ.
\v 21 <<ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.>>
\v 8 << <ನಾನು ಐಗುಪ್ತಕ್ಕೆ ಬೆಂಕಿ ಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು> ಎಂದು ಅವರಿಗೆ ಗೊತ್ತಾಗುವುದು.
\v 9 <ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!> >>
\v 12 ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.>>
\v 13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.
\v 14 ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ,
\v 17 <<ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.
\v 18 ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.
\v 19 ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು>> ಎಂದು ಅವರಿಗೆ ಗೊತ್ತಾಗುವುದು.
\v 20 ಹನ್ನೊಂದನೆಯ ವರ್ಷದ, ಮೊದಲನೆಯ ತಿಂಗಳಿನ ಏಳನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
\v 21 <<ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ, ಅದನ್ನು ಬಿಗಿಸಲಿಲ್ಲ.>>
\v 22 ಆದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.
\v 24 ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು, ಗಾಯದಿಂದ ಪ್ರಾಣ ಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.
\v 25 ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತ ದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು>> ಎಂದು ಎಲ್ಲರಿಗೂ ಗೊತ್ತಾಗುವುದು.
\v 26 <<ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದು ಬರುವುದು.>>
\v 10 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು, ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾದ ವಿಷಯವಾಗಿ ಉಬ್ಬಿಕೊಂಡಿತ್ತು.
\v 11 ಆದುದರಿಂದ ನಾನು ಅದನ್ನು ಜನಾಂಗಗಳಲ್ಲಿ ಮಹಾ ಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸುತ್ತಾನೆ. ನಾನು ಅದರ ದುಷ್ಟತ್ವದ ನಿಮಿತ್ತ ತಳ್ಳಿಹಾಕಿದ್ದೇನೆ.
\v 12 <<ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿದೆ.
\v 13 ಅದರ ಬುಡದ ಮೇಲೆ ಎಲ್ಲಾ ಆಕಾಶದ ಪಕ್ಷಿಗಳು ಕುಳಿತುಕೊಳ್ಳುವವು;
\q ಅದರ ಕೊಂಬೆಗಳಲ್ಲಿ ಸಮಸ್ತ ಭೂಜಂತುಗಳು ಇರುವವು.
\p
\v 14 <<ನೀರಾವರಿಯ ಯಾವ ಮರಗಳೂ ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು, ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ, ನೀರನ್ನು ಹೀರುತ್ತಲೇ ಇರುವ ದೊಡ್ಡದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು. ಅವೆಲ್ಲಾ ಮರಣದ ಪಾಲಾಗುವುವು, ಅಧೋಲೋಕವೇ ಅವುಗಳಿಗೆ ಗತಿಯಾಗುವುದು; ಪಾತಾಳಕ್ಕೆ ಇಳಿದು ಹೋದ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.>>
\v 15 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಕುಗ್ಗಿಹೋದವು.
\v 16 ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.
\v 17 ಇದಲ್ಲದೆ ಅದಕ್ಕೆ ತೋಳಿನ ಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು, ಖಡ್ಗದಿಂದ ಹತರಾದವರ ಜೊತೆಗೆ ಸೇರಿದರು.
\p
\v 18 <<ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.>>
\v 1 (ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, <<ನರಪುತ್ರನೇ, ನೀನು ಐಗುಪ್ತದ
\v 2 ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ,
\q <ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ.
\q ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.> >>
\p
\s5
\v 3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
\q <<ಗುಂಪಾಗಿ ಕೂಡಿದ ಬಹು ಜನಾಂಗಗಳವರ ಮೇಲೆ ನಾನು ನನ್ನ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ಆ ಬಲೆಯಿಂದ ಮೇಲಕ್ಕೆ ಎಳೆಯುವರು.
\q
\v 4 ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು;
\q ನಿನ್ನನ್ನು ಬಯಲಿನಲ್ಲಿ ಎಸೆದು ಆಕಾಶದ ಪಕ್ಷಿಗಳೆಲ್ಲಾ ನಿನ್ನ ಮೇಲೆ ಎರಗುವಂತೆ ಮಾಡಿ, ಸಮಸ್ತ ಭೂಜಂತುಗಳನ್ನು ನಿನ್ನಿಂದ ತೃಪ್ತಿಗೊಳಿಸುವೆನು.
\q
\s5
\v 5 ನಿನ್ನ ಮಾಂಸವನ್ನು ಗುಡ್ಡಗಳ ಮೇಲೆ ಹಾಕಿ, ಆ ನಿನ್ನ ಕಣಿವೆಗಳನ್ನು ಹೆಣಗಳ ರಾಶಿಯಿಂದ ತುಂಬಿಸುವೆನು.
\q
\v 6 ನಿನ್ನ ರಕ್ತಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು;
\q ಹಳ್ಳಗಳು ನಿನ್ನ ರಕ್ತದಿಂದ ತುಂಬುವವು.
\q
\s5
\v 7 ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ,
\q ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.
\q
\v 8 ನಿನ್ನ ಮೇಲೆ ಆಕಾಶದಲ್ಲಿ ಮಿನುಗುವ ಸಕಲ ಜ್ಯೋತಿಗಳನ್ನೂ ನಾನು ಮಸುಕುಮಾಡಿ,
\q ನಿನ್ನ ದೇಶವನ್ನು ಕತ್ತಲು ಮಾಡುವೆನು>> ಇದು ಕರ್ತನಾದ ಯೆಹೋವನ ನುಡಿ.
\p
\s5
\v 9 <<ನಾನು ನಿನ್ನ ನಾಶದ ಸುದ್ದಿಯನ್ನು, ಜನಾಂಗಗಳಲ್ಲಿ ನಿನಗೆ ತಿಳಿಯದ ದೇಶಗಳಿಗೂ ಮುಟ್ಟಿಸುವಾಗ, ಅವರ ಮನಸ್ಸಿನಲ್ಲಿ ಗಲಿಬಿಲಿಯನ್ನು ಎಬ್ಬಿಸುವೆನು.
\v 10 ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು.>>
\p
\s5
\v 11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಬಾಬೆಲಿನ ಅರಸನ ಖಡ್ಗವು ನಿನ್ನ ಮೇಲೆ ಬೀಳುವುದು.
\q
\v 12 ನಾನು ನಿನ್ನ ಪ್ರಜೆಯನ್ನು ಅತಿಭಯಂಕರ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು.
\q ಅವರು ಐಗುಪ್ತದ ಮಹತ್ತನ್ನು ನಾಶ ಮಾಡುವರು.
\q ಅದರ ಜನ ಸಮೂಹವೆಲ್ಲಾ ನಿರ್ನಾಮವಾಗುವುದು.
\q
\s5
\v 13 ನಾನು ಬಹು ಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು;
\q ಇನ್ನು ಮೇಲೆ ಯಾವ ಮನುಷ್ಯನ ಕಾಲಾಗಲಿ, ಯಾವ ಪಶುವಿನ ಗೊರಸಾಗಲಿ ನೀರಿನಲ್ಲಿ ಹೆಜ್ಜೆಯಿಡುವುದಿಲ್ಲ.
\q
\v 14 ಆಗ ಆ ನೀರು ತಿಳಿಯಾಗುವಂತೆಯೂ, ಆ ಪ್ರವಾಹಗಳು ಎಣ್ಣೆಯ ಹಾಗೆ ಹರಿಯುವಂತೆಯೂ ಮಾಡುವೆನು>>
\q ಇದು ಕರ್ತನಾದ ಯೆಹೋವನ ನುಡಿ.
\q
\s5
\v 15 <<ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ಧ್ವಂಸಗೊಳಿಸಿ,
\q ಆ ದೇಶವನ್ನು ಹಾಳುಮಾಡಿ, ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.
\q
\v 16 ಪ್ರಲಾಪಿಸುವವರು ಈ ಶೋಕ ಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಾಡಲಿ; ಐಗುಪ್ತಕ್ಕಾಗಿಯೂ,
\q ಅಲ್ಲಿನ ಬಹು ಪ್ರಜೆಗಳಿಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ>> ಇದು ಕರ್ತನಾದ ಯೆಹೋವನ ನುಡಿ.
\s ಫರೋಹನ ಪಾತಾಳಪ್ರವೇಶ
\p
\s5
\v 17 (ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
\q
\v 18 <<ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ,
\q ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.
\q
\s5
\v 19 ಐಗುಪ್ತ್ಯವೇ, ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಹೀನರ ಸಂಗಡ ಮಲಗು.
\q
\v 20 ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಐಗುಪ್ತವೂ ಮತ್ತು ಅದರ ಸಮೂಹವೂ ಕತ್ತಿಗೆ ಒಪ್ಪಿಸಲ್ಪಟ್ಟಿದೆ.
\q
\v 21 ಪಾತಾಳದೊಳಗಿನ ಬಲಿಷ್ಠ ಶೂರರು ಅದನ್ನೂ, ಅದರ ಸಹಾಯಕರನ್ನೂ ನೋಡಿ,
\q ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು,
\q ತಮ್ಮ ಎಲಬುಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ?
\q
\s5
\v 28 ಐಗುಪ್ತ್ಯವೇ, ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗದಿಂದ ಹತರಾದವರ ನಡುವೆ ಮಲಗುವೆ!
\m
\v 29 ಅಲ್ಲಿ ಎದೋಮು, ಅದರ ಅರಸರೂ ಮತ್ತು ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ಸಂಗಡ ಮಲಗಿದ್ದಾರೆ.
\p
\s5
\v 30 <<ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
\s5
\v 31 ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನ ಹೊಂದುವನು; ಹೌದು, ಫರೋಹನೂ ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು>> ಇದು ಕರ್ತನಾದ ಯೆಹೋವನ ನುಡಿ.
\v 32 <<ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಮತ್ತು ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗದಿಂದ ಹತರಾದವರ ನಡುವೆ ಮಲಗುವರು>> ಎಂಬುದು ಕರ್ತನಾದ ಯೆಹೋವನ ನುಡಿ.
\v 2 <<ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, <ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.
\v 3 ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಊದಿ ಸ್ವಜನರನ್ನು ಎಚ್ಚರಿಸಲಿ.
\v 4 ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು.
\v 5 ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.
\v 6 ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.>
\v 7 <<ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು.
\v 8 ನಾನು ದುಷ್ಟನಿಗೆ ದುಷ್ಟನೇ, <ನೀನು ಖಂಡಿತವಾಗಿ ಸಾಯುವೆ> ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.
\v 9 ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ.
\v 10 <<ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, <ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.
\v 11 ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?> >> ಇದು ಕರ್ತನಾದ ಯೆಹೋವನ ನುಡಿ.
\v 12 ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, <<ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ.
\v 13 ನಾನು ನೀತಿವಂತನಿಗೆ, <ನೀನು ಖಂಡಿತವಾಗಿ ಬದುಕುವಿ> ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.
\v 14 ನಾನು ದುಷ್ಟನಿಗೆ, <ನೀನು ಖಂಡಿತವಾಗಿ ಸಾಯುವಿ> ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,
\v 15 ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.
\v 16 ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ನೀತಿನ್ಯಾಯಗಳನ್ನು ನಡೆಸುತ್ತಿದ್ದುದರಿಂದ ನಿಶ್ಚಯವಾಗಿ ಬದುಕುವನು.
\v 21 ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, <<ಪಟ್ಟಣವು ಶತ್ರುವಶವಾಯಿತು>> ಎಂದು ಹೇಳಿದನು.
\v 22 ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.
\v 24 <<ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು <ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?> >> ಎಂದು ಅಂದುಕೊಳ್ಳುತ್ತಿದ್ದಾರೆ.
\v 25 ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?
\v 26 ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳಲ್ಲಿ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ಮಾನಭಂಗ ಪಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?>>
\v 30 ನರಪುತ್ರನೇ, <<ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, <ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ> ಎಂದು ಹೇಳಿಕೊಳ್ಳುತ್ತಿದ್ದಾರೆ.
\v 31 ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.
\v 32 ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.
\v 33 ನೀನು ಮುಂತಿಳಿಸಿದ್ದು ಸಂಭವಿಸುವಾಗ, ತಮ್ಮ ಮಧ್ಯದಲ್ಲಿ ಪ್ರವಾದಿಯು ಇದ್ದಾನೆ ಎಂದು ಅವರಿಗೆ ತಿಳಿಯುವುದು.>>
\v 4 ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
\v 5 ಕುರುಬರು ಇಲ್ಲವಾದುದರಿಂದ ಅವು ಚದುರಿ ಹೋದವು; ಚದುರಿ ಹೋಗಿ, ಕಾಡಿನ ಸಕಲ ಮೃಗಗಳಿಗೆ ತುತ್ತಾದವು.
\v 6 ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.
\v 8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ <<ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.>>
\v 10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.>>
\v 12 ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.
\p
\v 13 << < <<ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.
\v 14 ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು.
\v 15 ನಾನೇ ನನ್ನ ಕುರಿಗಳನ್ನು ಮೇಯಿಸಿ, ಹಾಯಾಗಿ ಮಲಗುವಂತೆ ಮಾಡುವೆನು>> ಇದು ಕರ್ತನಾದ ಯೆಹೋವನ ನುಡಿ.
\v 17 << <ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ, ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು.
\v 18 (ಟಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?
\v 19 ನೀವು ತುಳಿದು ಕಾಲಕಸ ಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು; ನೀವು ಕಾಲಿನಿಂದ ಕಲಕಿ ಹೊಲಸು ಮಾಡಿದ್ದನ್ನು ಅವು ಕುಡಿಯಬೇಕಾಯಿತು.>>
\v 21 ಏಕೆಂದರೆ (ಟಗರುಹೋತಗಳೇ,) ನೀವು ಕುರಿಮೇಕೆಗಳನ್ನು ಪಕ್ಕೆಯಿಂದಲೂ, ಹೆಗಲಿನಿಂದಲೂ ನೂಕುತ್ತಾ, ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ, ನನ್ನ ಹಿಂಡನ್ನು ಚದುರಿಸಿಬಿಟ್ಟಿರಿ.
\v 22 ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಕೊಳ್ಳೆಯಾಗದಂತೆ ನಾನು ಅದನ್ನು ರಕ್ಷಿಸಿ, ಟಗರುಹೋತಗಳಿಗೂ, ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.>>
\s ದೇವರ ಕೃಪಾಪೂರ್ಣವಾದ ಒಡಂಬಡಿಕೆ
\p
\v 23 << <ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.
\v 24 ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಅರಸನಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.
\v 25 << <ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.
\v 26 ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.
\v 27 ತೋಟದ ಮರಗಳು ಹಣ್ಣುಬಿಡುವುದು; ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುದು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಬಂಧನಗಳನ್ನು ಮುರಿದು ಹಾಕಿ, ಅವರನ್ನು ದಾಸರಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವುದು.
\v 30 << <ಆಗ ಅವರು ತಮ್ಮ ದೇವರಾದ ಯೆಹೋವನೆಂಬ ನಾನು ತಮ್ಮೊಂದಿಗೆ ಇದ್ದೇನೆಂತಲೂ, ಇಸ್ರಾಯೇಲ್ ವಂಶದವರಾದ ತಾವು ತನ್ನ ಜನರಾಗಿದ್ದೇವೆಂತಲೂ ತಿಳಿದುಕೊಳ್ಳುವರು> >> ಇದು ಕರ್ತನಾದ ಯೆಹೋವನ ನುಡಿ.
\v 31 <<ನೀವು ನನ್ನ ಕುರಿಗಳು, ನನ್ನ ಮೇವಿನ ಮಂದೆಯ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.>>
\v 4 ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಹಾಳಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ.
\p
\v 5 << <ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ.
\v 6 ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು> >> ಇದು ಕರ್ತನಾದ ಯೆಹೋವನ ನುಡಿ.
\v 10 ನೀನು, <<ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು>> ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,
\v 11 <<ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ, ಹೊಟ್ಟೆಕಿಚ್ಚಿಗೂ ನಾನು ನಿನ್ನ ವಿರುದ್ಧವಾಗಿ ನ್ಯಾಯ ತೀರಿಸಿದ ಮೇಲೆ, ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.
\v 12 ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ. ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ, ಆಹಾ, ಹಾಳಾದವು! ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.
\v 13 ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.>>
\v 15 ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.>>
\v 5 ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.>
\v 6 ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!>
\v 10 ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.
\v 11 ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.
\v 12 ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.> >>
\v 13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ>> ಎಂದು ನಿನ್ನನ್ನು ಬಯ್ಯುತ್ತಾರೆ.
\v 14 <<ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ, ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡುವುದಿಲ್ಲ.
\v 15 ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ>> ಇದು ಕರ್ತನಾದ ಯೆಹೋವನ ನುಡಿ.
\v 19 ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು.
\v 20 ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, <ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ> ಎಂದು ಅವರಿಗೆ ಹೇಳಿ, ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡುವರು.
\v 21 ಆದರೆ ಇಸ್ರಾಯೇಲಿನ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು ಮನಮರುಗಿದೆನು.>>
\v 22 ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ.
\v 23 ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು>> ಇದು ಕರ್ತನಾದ ಯೆಹೋವನ ನುಡಿ.
\v 24 <<ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.
\v 25 ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
\v 26 ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.
\v 27 ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.
\v 28 ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.
\v 29 ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.
\v 30 ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು.
\v 31 ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.>>
\v 32 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.>>
\p
\v 33 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿ ಮಾಡುವ ದಿನದಲ್ಲಿ, ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.
\v 34 ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ಹಾಳುಬಿದ್ದು ಭೂಮಿಯನ್ನು ಉಳುವರು.
\v 35 ಆಗ ಜನರು, <ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ> ಎಂದು ಹೇಳುವರು.
\v 36 ಯೆಹೋವನಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವನಾದ ನಾನೇ ನುಡಿದಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.>>
\v 37 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.
\v 38 ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆಯೂ ಇರುವರು. ಆದಕಾರಣ ಮನುಷ್ಯರು ಹಾಳು ಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.>>
\v 4 ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು, <<ನೀನು ಈ ಎಲುಬುಗಳ ಮೇಲೆ ಪ್ರವಾದಿಸಿ, ಹೀಗೆ ನುಡಿ, <ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ>.
\v 5 ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ, <ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ.
\v 6 ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ತಂದು, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.> >>
\v 7 ನನಗೆ ಅಪ್ಪಣೆಯಾದಂತೆ ನಾನು ಆ ಪ್ರವಾದನೆಯನ್ನು ನುಡಿಯುತ್ತಿರಲು, ಅಲ್ಲಿ ಟಕಟಕ ಶಬ್ದವಾಯಿತು, ಇಗೋ, ಅದು ಕದಲುತ್ತಿತ್ತು. ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಜೋಡಣೆಯಾದವು.
\v 8 ನಾನು ನೋಡುತ್ತಿರುವಾಗ ಏನಾಶ್ಚರ್ಯ ಆಹಾ, ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲ್ಹೊದಿಕೆಯಾಯಿತು, ಶ್ವಾಸ ಮಾತ್ರ ಇರಲಿಲ್ಲ.
\v 9 ಆಗ ಆತನು ನನಗೆ, <<ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, <ಓ ಶ್ವಾಸವೇ,> ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನೀನು ಚತುರ್ದಿಕ್ಕುಗಳಿಂದ ಬೀಸಿ, ಈ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಊದು.> >>
\v 10 ನನಗೆ ಕೊಟ್ಟ ಅಪ್ಪಣೆಯಂತೆ ನಾನು ನುಡಿದು, ಶ್ವಾಸ ಊದಿದೆ. ಇಗೋ, ಉಸಿರು ಅವುಗಳಲ್ಲಿ ಬಂದಿತು, ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ಮಹಾ ಸೈನ್ಯವಾದವು.
\v 11 ಆಮೇಲೆ ಆತನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, <ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು> >> ಅಂದುಕೊಳ್ಳುತ್ತಿದ್ದಾರೆ.
\v 12 ಆದಕಾರಣ ನೀನು ಈ ಪ್ರವಾದನೆಯನ್ನು ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಜನರೇ, ನೋಡಿರಿ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.
\v 13 ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.
\v 14 ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು, ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ>> ಇದು ಯೆಹೋವನ ಸಂಕಲ್ಪ.
\v 15 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
\v 16 <<ನರಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು, ಅದರಲ್ಲಿ ಯೆಹೂದದ್ದು ಮತ್ತು ಯೆಹೂದಕ್ಕೆ ಸೇರಿದ ಇಸ್ರಾಯೇಲರದು ಎಂದು ಬರೆದು, ಇನ್ನೊಂದು ಕೋಲನ್ನು ತೆಗೆದುಕೊಂಡು ಅದರಲ್ಲಿ ಯೋಸೇಫಿನದು, ಎಫ್ರಾಯೀಮಿನದು, ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲರದು ಎಂದು ಬರೆ.
\v 17 ಆ ಮೇಲೆ ಅವು ನಿನ್ನ ಕೈಯಲ್ಲಿ ಒಂದಾಗುವಂತೆ ಅವೆರಡನ್ನೂ ಒಂದಕ್ಕೊಂದು ಉದ್ದವಾಗಿ ಸೇರಿಸಿ ಹಿಡಿ.
\v 18 <<ನಿನ್ನ ಜನರು, <ಇದೇನು? ನಮಗೆ ತಿಳಿಸುವುದಿಲ್ಲವೋ> ಎಂದು ನಿನ್ನನ್ನು ಕೇಳುವಾಗ ನೀನು ಅವರಿಗೆ,
\v 19 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ಕೋಲನ್ನು ನಾನು ತೆಗೆದು, ಯೆಹೂದದ ಕೋಲಿಗೆ ಉದ್ದವಾಗಿ ಸೇರಿಸಿ, ಅವೆರಡನ್ನು ನನ್ನ ಕೈಯಲ್ಲಿ ಒಂದೇ ಕೋಲನ್ನಾಗಿ ಹಿಡಿಯುವೆನು ಎಂದು ಹೇಳು.
\v 20 ಹೇಳುವಾಗ ನೀನು ಹೆಸರು ಬರೆದಿರುವ ಕೋಲುಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.> >>
\v 21 ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು.
\v 22 ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.
\v 23 ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
\v 24 <<ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.
\v 25 ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.
\v 26 ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.
\v 27 ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.
\v 28 ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರುವಾಗ ಯೆಹೋವನಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಅನ್ಯಜನಾಂಗದವರು ತಿಳಿದುಕೊಳ್ಳುವರು.>>
\v 4 ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕಿ, ನಿನ್ನ ಎಲ್ಲಾ ಸೈನ್ಯವನ್ನೂ, ಕುದರೆಗಳನ್ನೂ ಮತ್ತು ಕುದರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯ ಮತ್ತು ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗವನ್ನು ಹಿಡಿದಿರುವರು.
\v 5 ಅವರೊಂದಿಗೆ ಪಾರಸಿಯರು, ಕೂಷ್ಯರು, ಪೂಟ್ಯರು ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.
\v 6 ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಗೋಮೆರ್ ಮತ್ತು ಸೈನ್ಯದವರನ್ನೂ, ತೋಗರ್ಮದವರನ್ನು ಮತ್ತು ಅನೇಕ ಜನರನ್ನು ನಿನ್ನೊಂದಿಗೆ ಬರಮಾಡುವೆನು.
\v 7 << <ಸಿದ್ಧವಾಗಿರು! ನಿನ್ನಲ್ಲಿ ಕೂಡಿಬಂದಿರುವ ಎಲ್ಲಾ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವರ ದಂಡ ನಾಯಕನಾಗಿರು.
\v 8 ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.
\v 9 ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.> >>
\v 10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ.
\v 11 ಆಗ ನೀನು, <ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು> ಅಂದುಕೊಂಡೆ.
\v 12 ಸುಲಿಗೆಯನ್ನು, ಕೊಳ್ಳೆಯನ್ನು ಹೊಡೆಯಬೇಕೆಂತಲೂ, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಕೂಡಿಸಲ್ಪಟ್ಟ ಧನ ಕನಕ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು, ಭೂಮಿಯ ಮಧ್ಯದಲ್ಲಿ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ.
\v 13 ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, <ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?> >> ಎಂದು ಕೇಳುವರು.
\v 14 ಹೀಗಿರಲು, <<ನರಪುತ್ರನೇ, ನೀನು ಗೋಗನಿಗೆ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನನ್ನ ಜನರಾದ ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವುದು.
\v 15 ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪು ಕೂಡಿದ ಅನೇಕ ಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವಿ.
\v 16 ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.> >>
\v 17 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನ ಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ, ನಾನು ಒಬ್ಬನನ್ನು ಇಸ್ರಾಯೇಲರ ಮೇಲೆ ಬೀಳ ಮಾಡುವೆನು>> ಎಂದು ಮುಂತಿಳಿಸಿದಂತೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ.
\s ಗೋಗನಿಗಾದ ಶಿಕ್ಷೆ
\p
\v 18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.
\v 19 ನಾನು ರೋಷದಿಂದ ಮತ್ತು ಕೋಪದಿಂದ ಉರಿಯುತ್ತಾ ಹೀಗೆ ನುಡಿದಿದ್ದೇನೆ, <ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಮಹಾಕಂಪನವಾಗುವುದು ಖಂಡಿತ.
\v 20 ಆಗ ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಕಾಡುಮೃಗಳು ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು, ಭೂಮಂಡಲದ ಸಕಲ ಮನುಷ್ಯರೂ ನನ್ನೆದುರಿಗೆ ನಡುಗುವವು; ಪರ್ವತಗಳು ಉರುಳಿಹೋಗುವವು, ಝರಿಗಳು ಕವಚಿಗೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.> >>
\v 21 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು.
\v 22 ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.
\v 23 ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.>>
\v 1 ಈಗ, <<ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ.
\v 2 ನಾನು ನಿನ್ನನ್ನು ಪರಿವರ್ತಿಸಿ, ಮುಂದುವರಿಸಿ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,
\v 3 ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆದು ಹಾಕಿ, ನಿನ್ನ ಬಲಗೈಯಲ್ಲಿರುವ ಬಾಣಗಳನ್ನು ಬೀಳುವಂತೆ ಮಾಡುವೆನು.
\v 4 ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.
\v 5 ನೀನು ತೆರೆದ ಬಯಲಿನಲ್ಲಿ ಬೀಳುವಿ. ಏಕೆಂದರೆ ನಾನೇ ಅಪ್ಪಣೆ ಕೊಟ್ಟಿದ್ದೇನೆ> ಎಂದು ಕರ್ತನಾದ ಯೆಹೋವನ ನುಡಿಯುತ್ತಾನೆ.
\v 6 ನಾನು ಮಾಗೋಗ್ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.
\v 7 <<ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.>>
\v 8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ. <<ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.
\v 9 <<ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು ಶತ್ರುವಿನ ಆಯುಧಗಳಿಗೆ ಬೆಂಕಿಯಿಟ್ಟು ಸುಟ್ಟುಬಿಡುವರು. ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.
\v 10 ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು>> ಇದು ಕರ್ತನಾದ ಯೆಹೋವನ ನುಡಿ.
\v 11 <<ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಅ ಕಣಿವೆಯನ್ನು <ಗೋಗನ ಸಮೂಹದ ಕಣಿವೆ> ಎಂದು ಕರೆಯುವರು.
\v 14 ತರುವಾಯ ಅವರು ದೇಶವನ್ನು ಶುದ್ಧಿ ಮಾಡುವುದಕ್ಕೆ ತಕ್ಕವರನ್ನು ಆರಿಸಿ, ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ಉಳಿದಿರುವವರನ್ನು ಸಮಾಧಿ ಮಾಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಏಳು ತಿಂಗಳಾದ ಮೇಲೆ ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು.
\v 15 ಪ್ರಯಾಣಿಕರಲ್ಲಿ ಯಾರೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ನೋಡಿದರೆ, ಅಲ್ಲಿ ಒಂದು ಗುರುತನ್ನು ನಿಲ್ಲಿಸುವರು; ಸಮಾಧಿ ಮಾಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಸಮಾಧಿ ಮಾಡುವ ತನಕ ಆ ಗುರುತು ಹಾಗೆಯೇ ನಿಂತಿರುವುದು.
\v 16 ಆ ಪಟ್ಟಣಕ್ಕೆ 'ಹಮೇನ್' <<ಸಮೂಹಪುರ>> ಎಂದು ಹೆಸರಾಗುವುದು. ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.
\v 17 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, <ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.
\v 18 ಟಗರುಗಳ, ಕುರಿಗಳ, ಹೋತಗಳ, ಹೋರಿಗಳ ಅಂತು ಬಾಷಾನಿನ ಕೊಬ್ಬಿದ ಪಶುಗಳ ರಕ್ತವನ್ನು ಕುಡಿಯುವಿರಿ. ನೀವು ಬಲಿಷ್ಠರ ಮತ್ತು ಭೂಪತಿಗಳ ಮಾಂಸವನ್ನು ತಿನ್ನುವಿರಿ.
\v 23 <<ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು.
\v 24 ಅವರ ಪಾಪಕ್ಕೂ, ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ನನ್ನ ಮುಖವನ್ನು ಅವರಿಗೆ ಮರೆಮಾಡಿದ್ದೇನೆ.>>
\v 25 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.
\v 26 ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
\v 27 ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು.
\v 28 <<ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.
\v 29 ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ>> ಇದು ಕರ್ತನಾದ ಯೆಹೋವನ ನುಡಿ.
\v 1 ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ, ಮೊದಲನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಪಟ್ಟಣವು ಹಾಳಾದ ಮೇಲೆ ಹದಿನಾಲ್ಕನೆಯ ವರ್ಷದ ಆ ದಿನದಲ್ಲೇ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾಗಲು, ಆತನು ನನ್ನನ್ನು ಅಲ್ಲಿಗೆ ಬರಮಾಡಿದನು.
\v 2 ಯೆಹೋವನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣದ ಕಡೆ ಆ ಪರ್ವತದ ಮೇಲೆ ಪಟ್ಟಣದಂತಿರುವ ಕಟ್ಟಡಗಳು ಕಾಣಿಸಿತು.
\v 3 ಆಮೇಲೆ ಆತನು ನನ್ನನ್ನು ಅಲ್ಲಿಗೆ ತಂದಾಗ, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ನೂಲನ್ನು, ಅಳತೆಯ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲೇ ನಿಂತುಕೊಂಡಿದ್ದನು.
\v 4 ಆ ಪುರುಷನು ನನಗೆ, <<ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು>> ಎಂದು ಹೇಳಿದನು.
\v 5 ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಆರು ಮೊಳ ಉದ್ದದ ಅಳತೆ ಕೋಲು ಇತ್ತು. (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ); ಅವನು ಆ ಗೋಡೆಯ ಅಗಲವನ್ನು ಅಳತೆ ಮಾಡಿದಾಗ ಅದರ ಅಗಲವೂ ಮತ್ತು ಎತ್ತರವೂ ಒಂದೇ ಕೋಲಾಗಿತ್ತು.
\v 6 ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು, ಮೆಟ್ಟಿಲುಗಳನ್ನು ಹತ್ತಿ, ಹೊಸ್ತಿಲಿನ ಅಗಲವನ್ನು ಅಳೆದನು. ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.
\v 7 ಅಲ್ಲಿ ಗೋಡೆಯಲ್ಲಿದ್ದ ಒಂದೊಂದು ಕೋಣೆಯು ಒಂದು ಕೋಲು ಉದ್ದವಾಗಿಯೂ, ಒಂದು ಕೋಲು ಅಗಲವಾಗಿಯೂ ಇತ್ತು. ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು. ಆ ಗೋಡೆಕೋಣೆಗಳು ಒಂದಕ್ಕೊಂದು ಐದೈದು ಮೊಳ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು.
\v 11 ಅನಂತರ ಅವನು ಹೆಬ್ಬಾಗಿಲ ದ್ವಾರದ ಅಗಲ ಹತ್ತು ಮೊಳವೆಂದೂ ಉದ್ದ ಹದಿಮೂರು ಮೊಳವೆಂದೂ ಅಳೆದನು.
\v 12 ಎರಡು ಪಕ್ಕಗಳಲ್ಲಿನ ಗೋಡೆಕೋಣೆಗಳ ಮುಂದೆ ಒಂದೊಂದು ಮೊಳ ಅವಕಾಶ; ಎರಡು ಕಡೆಯ ಗೋಡೆಕೋಣೆಗಳ ಅಗಲವು ಮೂರು ಮೊಳ.
\v 13 ಅವನು ಒಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆಯಿಂದ ಇನ್ನೊಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆ ಅಂದರೆ ಒಂದು ಕೋಣೆಯ ಬಾಗಿಲಿಂದ ಇನ್ನೊಂದು ಕೋಣೆಯ ಬಾಗಿಲಿಗೆ ಹೆಬ್ಬಾಗಿಲಿನ ಅಗಲವನ್ನು ಅಳೆಯಲು ಇಪ್ಪತ್ತೈದು ಮೊಳವಾಗಿತ್ತು.
\v 14 ಅಂಗಳದಲ್ಲಿನ ಕಂಬಗಳನ್ನು ಅಳತೆ ಮಾಡಲು ಅರವತ್ತು ಮೊಳವಿದ್ದವು; ಅದನ್ನು ಹೆಬ್ಬಾಗಿಲಿನ ಸುತ್ತುಮುತ್ತಲಿರುವ ಕಂಬದವರೆಗೂ ಅಳೆದನು.
\v 15 ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳ ಬಾಗಿಲಿನ ದ್ವಾರದ ಅಂಗಳದವರೆಗೂ ಐವತ್ತು ಮೊಳ ಉದ್ದವಾಗಿತ್ತು.
\v 16 ಗೋಡೆ ಕೋಣೆಗಳಲ್ಲಿಯೂ ಒಳ ಎರಡು ಕಡೆಯ ನಿಲುವು ಕಂಬಗಳಲ್ಲಿಯೂ, ಕೈಸಾಲೆಗಳಲ್ಲಿಯೂ ಸಹ ಒಳಗಡೆ ಸುತ್ತಲೂ ಇಕ್ಕಟಾದ ಕಿಟಕಿಗಳಿದ್ದವು. ಒಂದೊಂದು ಗೋಡೆಯ ಮೇಲೆ ಖರ್ಜೂರ ಮರಗಳ ಚಿತ್ರಗಳಿದ್ದವು.
\v 17 ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು.
\v 18 ಆ ಕೆಳಗಣ ಕಲ್ಲುಹಾಸಿದ ನೆಲವೂ ಹೆಬ್ಬಾಗಿಲುಗಳ ಎರಡು ಪಕ್ಕಗಳವರೆಗೂ ಹಾಸಲ್ಪಟಿತ್ತು. ಅದರ ಅಗಲವೂ ಬಾಗಿಲುಗಳ ಉದ್ದಕ್ಕೆ ಸಮನಾಗಿತ್ತು. ಇದು ಕೆಳಗಿನ ಕಲ್ಲುಹಾಸಿದ ನೆಲವಾಗಿತ್ತು.
\v 19 ಅವನು ಪೂರ್ವಕ್ಕೂ, ಉತ್ತರಕ್ಕೂ ಕೆಳಗಣ ಹೆಬ್ಬಾಗಿಲಿನ ಒಳಗಡೆಯಿಂದ ಒಳಗಣ ಅಂಗಳದ ಹೊರಗಡೆಯ ತನಕ ಅಳೆಯಲು, ಅದು ನೂರು ಮೊಳವಿತ್ತು.
\v 20 ಇದಲ್ಲದೆ ಹೊರಗಣ ಅಂಗಳದ ಉತ್ತರದ ಹೆಬ್ಬಾಗಿಲಿನ ಅಗಲವನ್ನೂ ಮತ್ತು ಉದ್ದವನ್ನೂ ಅಳೆದನು.
\v 21 ಅದರೊಳಗೆ ಎರಡು ಕಡೆ ಮೂರು ಗೋಡೆಕೋಣೆಗಳಿದ್ದವು; ಅಲ್ಲಿನ ಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು. ಆ ಹೆಬ್ಬಾಗಿಲಿನ ಉದ್ದವೂ ಐವತ್ತು ಮೊಳ, ಅಗಲವೂ ಇಪ್ಪತ್ತೈದು ಮೊಳವಾಗಿತ್ತು.
\v 22 ಅಲ್ಲಿನ ಕಿಟಕಿಗಳೂ, ಕೈಸಾಲೆಯೂ, ಚಿತ್ರಿತವಾಗಿದ್ದ ಖರ್ಜೂರ ಮರಗಳೂ ಮೂಡಣ ಹೆಬ್ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಕೈಸಾಲೆಯು ಅದರ ಒಳಗಡೆಯಿತ್ತು.
\v 23 ಹೊರಗಣ ಅಂಗಳದ ಉತ್ತರ ಮತ್ತು ಪೂರ್ವಕ್ಕಿರುವ ಹೆಬ್ಬಾಗಿಲುಗಳಿಗೆ ಎದುರಾಗಿ ಒಳಗಣ ಹೆಬ್ಬಾಗಿಲುಗಳು ಇದ್ದವು; ಒಂದು ಬಾಗಿಲಿನಿಂದ ಎದುರು ಬಾಗಿಲಿಗೆ ನೂರು ಮೊಳ ಅಳತೆ ಮಾಡಿದನು.
\v 28 ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನ ಮಾರ್ಗವಾಗಿ ಒಳಗಣ ಅಂಗಳಕ್ಕೆ ಕರೆದು ತಂದನು. ಅವನು ಆ ದಕ್ಷಿಣ ಹೆಬ್ಬಾಗಿಲನ್ನೂ, ಅಲ್ಲಿನ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಅಳೆಯಲು, ಅದರ ಅಳತೆಗಳೆಲ್ಲ ಸಮನಾಗಿದ್ದವು.
\v 29 ಅದರಲ್ಲಿಯೂ, ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲಾ ಕಡೆಯಿದ್ದವು; ಹೆಬ್ಬಾಗಿಲಿನ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು.
\v 30 ಸುತ್ತುಮುತ್ತಲಿನ ಕೈಸಾಲೆಗಳ ಉದ್ದ ಇಪ್ಪತ್ತೈದು ಮೊಳ ಮತ್ತು ಅಗಲ ಐದು ಮೊಳವಾಗಿತ್ತು.
\v 31 ಆ ಹೆಬ್ಬಾಗಿಲ ಕೈಸಾಲೆಯು ಹೊರಗಣ ಅಂಗಳಕ್ಕೆ ಅಭಿಮುಖವಾಗಿತ್ತು. ಅದರ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು. ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.
\v 32 ಅವನು ನನ್ನನ್ನು ಒಳಗಣ ಅಂಗಳದ ಪೂರ್ವಕ್ಕೆ ಕರೆದು ತಂದು, ಅಲ್ಲಿನ ಹೆಬ್ಬಾಗಿಲನ್ನೂ ಅಳೆಯಲು, ಅದರ ಅಳತೆಗಳೆಲ್ಲಾ ಒಂದೇ ಆಗಿ ಕಂಡುಬಂದವು.
\v 33 ಅದರಲ್ಲಿಯೂ ಮತ್ತು ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಕಿಟಕಿಗಳಿದ್ದವು; ಆ ಹೆಬ್ಬಾಗಿಲಿನ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು.
\v 34 ಅದರ ಕೈಸಾಲೆಯು ಹೊರಗಿನ ಅಂಗಳಕ್ಕೆ ಅಭಿಮುಖವಾಗಿತ್ತು; ಕೈಸಾಲೆಯ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.
\v 35 ಆ ಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿಗೆ ಕರೆದು ತಂದನು. ಅದರ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಆ ಅಳತೆಯ ಪ್ರಕಾರವೇ ಅಳೆದನು.
\v 36 ಅಲ್ಲಿನ ಕೋಣೆಗಳ, ಕಂಬಗಳ, ಕೈಸಾಲೆಗಳ ಎಲ್ಲಾ ಕಡೆಗಳಲ್ಲಿಯೂ ಕಿಟಕಿಗಳಿದ್ದವು; ಅದರ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು.
\v 37 ಅದರ ಕಂಬಗಳು, ಕೈಸಾಲೆಗಳು ಹೊರಗಣ ಅಂಗಳಕ್ಕೆ ಅಭಿಮುಖವಾಗಿದ್ದವು; ಆ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.
\v 38 ಹೆಬ್ಬಾಗಿಲ ಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ, ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ಸರ್ವಾಂಗಹೋಮ ಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.
\v 39 ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು.
\v 42 ಇದಲ್ಲದೆ ಸರ್ವಾಂಗಹೋಮಕ್ಕಾಗಿ ಉಪಯುಕ್ತವಾದ ಕೆತ್ತಿದ ಕಲ್ಲಿನ ನಾಲ್ಕು ಪೀಠಗಳಿದ್ದವು. ಅವುಗಳ ಅಗಲ ಒಂದುವರೆ ಮೊಳ, ಉದ್ದ ಒಂದುವರೆ ಮೊಳ, ಎತ್ತರ ಒಂದುವರೆ ಮೊಳವಾಗಿತ್ತು. ಅವುಗಳ ಮೇಲೆ ಸರ್ವಾಂಗಹೋಮ ಪಶುಗಳನ್ನು ವಧಿಸುವ ಉಪಕರಣಗಳನ್ನು ಇಡುತ್ತಿದ್ದರು.
\v 44 ಆ ಮೇಲೆ ಅವನು ನನ್ನನ್ನು ಒಳಗಣ ಅಂಗಳಕ್ಕೆ ಕರೆ ತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರದ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ಒಂದು ಕೋಣೆಯು ಉತ್ತರಕ್ಕೂ, ಇನ್ನೊಂದು ಕೋಣೆಯು ದಕ್ಷಿಣಕ್ಕೂ ಇತ್ತು.
\v 45 ಆಗ ಅವನು ನನಗೆ, <<ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಮೇಲ್ವಿಚಾರಣೆಯನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.
\v 46 ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿ ಸೇವಕರಾಗಿದ್ದಾರೆ>> ಎಂದು ಹೇಳಿದನು.
\v 47 ಆ ಮೇಲೆ ಅವನು ಅಂಗಳವನ್ನು ಅಳೆಯಲು, ಅದು ನೂರು ಮೊಳ ಉದ್ದವಾಗಿಯೂ, ನೂರು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು. ಯಜ್ಞವೇದಿಯು ದೇವಸ್ಥಾನದ ಮುಂದೆ ಇತ್ತು.
\v 48 ಕೂಡಲೆ ಅವನು ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆ ತಂದನು. ಅದನ್ನು ಅಳೆಯಲು, ಅದರ ಎದುರುಬದುರಿನ ಕಂಬಗಳ ಅಗಲ ಐದೈದು ಮೊಳ, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಮೂರು ಮೂರು ಮೊಳವಾಗಿತ್ತು.
\v 49 ದ್ವಾರಮಂಟಪದ ಉದ್ದ ಇಪ್ಪತ್ತು ಮೊಳ, ಅಗಲ ಹನ್ನೊಂದು ಮೊಳ ಇದ್ದವು. ಹತ್ತು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಎರಡು ಕಡೆಯ ಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭವು ಇತ್ತು.
\v 1 ಆಮೇಲೆ ಅವನು ನನ್ನನ್ನು ದೇವಾಲಯದ ಪರಿಶುದ್ಧ ಸ್ಥಳಕ್ಕೆ ಕರೆದುಕೊಂಡು ಬಂದು, ಅದರ ದ್ವಾರಕಂಬಗಳನ್ನು ಅಳತೆ ಮಾಡಲು, ಅದರ ಎರಡು ಕಡೆಗಳು ಆರು ಮೊಳ ಅಗಲವಾಗಿತ್ತು.
\v 2 ದ್ವಾರದ ಅಗಲವು ಹತ್ತು ಮೊಳಗಳೂ, ದ್ವಾರದ ಎರಡು ಪಕ್ಕದ ಗೋಡೆಗಳ ಅಗಲವು ಐದೈದು ಮೊಳಗಳೂ ಆಗಿದ್ದವು. ಅವನು ಪರಿಶುದ್ಧ ಸ್ಥಳವನ್ನು ಅಳತೆಮಾಡಿದಾಗ ಅದರ ಉದ್ದ ನಲ್ವತ್ತು ಮೊಳಗಳೂ, ಅಗಲ ಇಪ್ಪತ್ತು ಮೊಳಗಳೂ ಇದ್ದವು.
\v 3 ಆಮೇಲೆ ಅವನು ಇನ್ನೂ ಮುಂದಕ್ಕೆ ಹೋಗಿ, ಮಹಾಪರಿಶುದ್ಧ ಸ್ಥಳದ ಕಂಬಗಳನ್ನು ಅಳತೆ ಮಾಡಲು ದ್ವಾರದ ಒಂದೊಂದು ಕಂಬದ ಅಗಲ ಎರಡೆರಡು ಮೊಳಗಳೂ, ದ್ವಾರದ ಅಗಲವು ಆರು ಮೊಳಗಳೂ, ದ್ವಾರದ ಪಕ್ಕದ ಗೋಡೆಗಳ ಅಗಲವು ಏಳು ಮೊಳವೆಂದು ಅಳೆದನು.
\v 4 ಅದರ ಕೋಣೆಗಳ ಉದ್ದವು ಇಪ್ಪತ್ತು ಮೊಳಗಳೂ, ಅಗಲವು ಇಪ್ಪತ್ತು ಮೊಳಗಳೂ ಇದ್ದವು. ಆಗ ಅವನು ನನಗೆ, <<ಇದು ಮಹಾಪರಿಶುದ್ಧ ಸ್ಥಳ>> ಎಂದು ಹೇಳಿದನು.
\v 5 ಆಮೇಲೆ ಅವನು ಅಳತೆ ಮಾಡಲು, ದೇವಸ್ಥಾನದ ಗೋಡೆಯ ಅಗಲ ಆರು ಮೊಳಗಳೂ, ದೇವಸ್ಥಾನದ ಸುತ್ತುಮುತ್ತಲೂ ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳಗಳೂ ಇದ್ದವು.
\v 6 ಆ ಕೊಠಡಿಗಳು ಒಂದರ ಮೇಲೊಂದು ಮೂರು ಅಂತಸ್ತು ಆಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಕೊಠಡಿಗಳಿದ್ದವು; ದೇವಸ್ಥಾನದ ಗೋಡೆಯು ಮೆಟ್ಟಿಲುಗಳಿಂದ ಕಟ್ಟಲ್ಪಟ್ಟಿತ್ತು. ಗೋಡೆಯಲ್ಲಿ ರಂಧ್ರವಿಲ್ಲದೆ ಆ ಮೆಟ್ಟಿಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಆಧಾರವಾಗಿದ್ದವು. ಆದರೆ ಮನೆಯ ಗೋಡೆಗೆ ಯಾವ ಆಧಾರವಿರಲಿಲ್ಲ.
\v 7 ಸುತ್ತಣ ಅಂತಸ್ತುಗಳು ಮೇಲೆ ಹೋದ ಹಾಗೆಲ್ಲಾ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು. ಅವು ದೇವಸ್ಥಾನವನ್ನು ಸುತ್ತಿಕೊಂಡು ಮೇಲೆ ಹೋದ ಹಾಗೆಲ್ಲಾ ಅದನ್ನು ಬಿಗಿಯಾಗಿ ತಬ್ಬಿಕೊಂಡಂತೆ ಕಟ್ಟಲ್ಪಟ್ಟಿತ್ತು. ಹೀಗೆ ಮೇಲಿನ ಅಂತಸ್ತುಗಳು ದೇವಸ್ಥಾನದ ಕಡೆಗೆ ಅಗಲವಾಗುತ್ತಾ ಬಂದವು. ಕೆಳಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದರು.
\v 18 ಗೋಡೆಯ ಚೌಕಗಳಲ್ಲಿ ಕೆರೂಬಿಗಳೂ ಮತ್ತು ಖರ್ಜೂರ ಮರಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ಮರ; ಒಂದೊಂದು ಕೆರೂಬಿಗೆ ಎರಡೆರಡು ಮುಖಗಳಿತ್ತು.
\v 19 ಖರ್ಜೂರ ಮರದ ಒಂದು ಪಕ್ಕ ಮನುಷ್ಯನ ಮುಖಕ್ಕೆ ಎದುರಾಗಿಯೂ, ಇನ್ನೊಂದು ಪಕ್ಕ ಸಿಂಹದ ಮುಖಕ್ಕೆ ಎದುರಾಗಿತ್ತು. ಹೀಗೆ ದೇವಸ್ಥಾನದ ಒಳಗಿನ ಭಾಗವೆಲ್ಲಾ ಮತ್ತು ಸುತ್ತುಮುತ್ತಲೂ ಚಿತ್ರಮಯವಾಗಿತ್ತು.
\v 20 ನೆಲದಿಂದ ದ್ವಾರದ ಮೇಲಿನ ತನಕ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿದ್ದವು.
\v 21 ಪರಿಶುದ್ಧ ಸ್ಥಳದ ಇನ್ನೊಂದು ಕಡೆಯ ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು. ಮಹಾಪರಿಶುದ್ಧ ಸ್ಥಳದ ಈಚಿನ ಗೋಡೆಯ ಚೌಕಟ್ಟೂ ಹಾಗೆಯೇ ಇತ್ತು.
\v 22 ಅಲ್ಲಿ ಮರದ ವೇದಿಕೆಯೊಂದಿತ್ತು. ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳವಾಗಿತ್ತು. ಅದರ ಮೂಲೆಗಳೂ, ಪೀಠವೂ, ಪಕ್ಕಗಳೂ ಮರದ್ದೇ ಆಗಿದ್ದವು. ಆ ಪುರುಷನು ನನಗೆ, <<ಇದು ಯೆಹೋವನ ಸಮ್ಮುಖದ ಮೇಜು>> ಎಂದು ಹೇಳಿದನು.
\v 23 ಪರಿಶುದ್ಧ ಸ್ಥಳಕ್ಕೆ ಮತ್ತು ಮಹಾಪರಿಶುದ್ಧ ಸ್ಥಳಕ್ಕೆ ಎರಡೆರಡು ಬಾಗಿಲುಗಳಿದ್ದವು.
\v 24 ಒಂದೊಂದು ಬಾಗಿಲಿಗೆ ಎರಡೆರಡು ಮಡಚುವ ಭಾಗಗಳಿದ್ದವು. ಈ ಕಡೆಯ ಬಾಗಿಲಿಗೆ ಎರಡು ಭಾಗ, ಆ ಕಡೆಯ ಬಾಗಿಲಿಗೆ ಎರಡು ಭಾಗಗಳು ಇದ್ದವು.
\v 25 ಆ ಬಾಗಿಲುಗಳಲ್ಲಿ ಅಂದರೆ ಪರಿಶುದ್ಧ ಸ್ಥಳದ ಬಾಗಿಲುಗಳಲ್ಲಿ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳು ಗೋಡೆಗಳಲ್ಲಿ ಚಿತ್ರಿಸಲ್ಪಟ್ಟ ಹಾಗೆಯೇ ಇದ್ದವು. ದ್ವಾರಮಂಟಪದ ಹೊರಗಡೆ ಮರದ ಹಲಗೆಗಳಿದ್ದವು.
\v 26 ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಇದ್ದವು. ಅವುಗಳ ಮೇಲೆ ಖರ್ಜೂರ ಮರಗಳು ಚಿತ್ರಿತವಾಗಿದ್ದವು ಮತ್ತು ಮೇಲೆ ತೂಗಾಡುವ ಮೇಲ್ಛಾವಣಿಗಳು ಇದ್ದವು.
\v 1 ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆದು ತಂದನು.
\v 2 ನೂರು ಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಿಲಿನ ಅಗಲವು ಐವತ್ತು ಮೊಳವಾಗಿತ್ತು.
\v 3 ಒಳಗಿನ ಅಂಗಳಕ್ಕೆ ಸೇರಿದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ, ಹೊರಗಿನ ಅಂಗಳದ ಕಲ್ಲುಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಿದ್ದವು ಅವುಗಳಲ್ಲಿ ಪಡಸಾಲೆಗಳಿದ್ದವು.
\v 4 ಕೋಣೆಗಳ ಒಳಗೆ ಹೋಗಲು, ನೂರು ಮೊಳ ಉದ್ದದ ಮತ್ತು ಹತ್ತು ಮೊಳ ಅಗಲದ ಹಾದಿ ಇತ್ತು. ಕೋಣೆಗಳ ಬಾಗಿಲುಗಳು ಉತ್ತರದಿಕ್ಕಿನ ಕಡೆಗಿದ್ದವು.
\v 5 ಮೇಲಿನ ಕೋಣೆಗಳು, ಮಧ್ಯದ ಮತ್ತು ಕೆಳಗಿನ ಕೋಣೆಗಳಿಗಿಂತ ಚಿಕ್ಕದಾಗಿದ್ದವು. ಏಕೆಂದರೆ ಕಟ್ಟಡದ ಮಧ್ಯದ ಮತ್ತು ಕೆಳಗಿನ ಭಾಗಕ್ಕಿಂತಲೂ ಪಡಸಾಲೆಗಳು ಎತ್ತರದಲ್ಲಿದ್ದವು.
\v 6 ಕೋಣೆಗಳು ಮೂರು ಅಂತಸ್ತಾಗಿದ್ದವು. ಹೊರಗಿನ ಅಂಗಳದ ಕೋಣೆಗಳಿಗೆ ಇದ್ದಂತೆ ಈ ಕೋಣೆಗಳಿಗೆ ಪಡಸಾಲೆಗಳಿರಲಿಲ್ಲ. ಆದುದರಿಂದ ನೆಲದಿಂದ ಎತ್ತರದಲ್ಲಿದ್ದ ಮೇಲಿನ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗಿಂತ ಚಿಕ್ಕದಾಗಿದ್ದವು.
\v 10 ಇದಲ್ಲದೆ, ಪೂರ್ವಕಡೆಗೆ ಅಂಗಳದ ಪ್ರತ್ಯೇಕ ಸ್ಥಳಕ್ಕೂ ಮತ್ತು ಪೌಳಿಗೋಡೆಯ ಮಧ್ಯದಲ್ಲಿ ಕೋಣೆಗಳಿದ್ದವು.
\v 11 ಇವುಗಳ ಮುಂದೆ ಮಾರ್ಗವಿತ್ತು. ಅವು ಉತ್ತರದ ಕೋಣೆಗಳಂತೆ ಕಾಣಿಸುತ್ತಿದ್ದವು. ಇವುಗಳ ಉದ್ದವೂ ಮತ್ತು ಅಗಲವೂ ಒಂದೇ ಆಗಿತ್ತು. ಇವುಗಳ ರಚನಾಕ್ರಮ, ನಿರ್ಗಮನದ ಸ್ಥಾನಗಳೆಲ್ಲವೂ ದಕ್ಷಿಣದ ಕೋಣೆಗಳ ಹಾಗೆಯೇ ಇದ್ದವು.
\v 12 ದಕ್ಷಿಣ ಕಡೆಗಿದ್ದ ಕೋಣೆಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ, ಪೂರ್ವದ ಕಡೆಯ ಗೋಡೆಗೆ ಸರಿಯಾದ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು.
\v 13 ಆಗ ಅವನು ನನಗೆ, <<ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು
\f +
\fr 42:13
\fq ಕೋಣೆಗಳು
\ft ಯಾಜಕರ ಕೋಣೆಗಳು.
\f* ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.
\v 14 ಯಾಜಕರು ಪರಿಶುದ್ಧ ಸ್ಥಳವನ್ನು ಪ್ರವೇಶಿಸಿದ ಮೇಲೆ, ಅದನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವು ಪರಿಶುದ್ಧವೇ. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಸಾಮಾನ್ಯ ಜನರ ಅಂಗಳಕ್ಕೆ ಬರಬೇಕು>> ಎಂದನು.
\v 20 ಆಲಯವನ್ನು ನಾಲ್ಕು ಕಡೆಗಳಲ್ಲಿಯೂ ಅಳೆದನು. ಪವಿತ್ರವಾದ ಮತ್ತು ಅಪವಿತ್ರವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರು ಕೋಲು ಉದ್ದವಾದ ಮತ್ತು ಐನೂರು ಕೋಲು ಅಗಲವಾದ ಗೋಡೆ ಇತ್ತು.
\v 6 ಆಗ ಆಲಯದೊಳಗಿಂದ ನನ್ನ ಸಂಗಡ ಮಾತನಾಡುವವನ ಶಬ್ದವನ್ನು ಕೇಳಿದೆನು. ಆ ಪುರುಷನು ನನ್ನ ಪಕ್ಕದಲ್ಲಿ ನಿಂತಿದ್ದನು.
\v 7 ಮಾತನಾಡುವಾತನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ಇದು ನನ್ನ ಸಿಂಹಾಸನ, ನನ್ನ ಪಾದ ಪೀಠ, ಇಲ್ಲಿ ನಾನು ಇಸ್ರಾಯೇಲರ ಮಧ್ಯದಲ್ಲಿ ಸದಾ ವಾಸಿಸುವೆನು. ಇಸ್ರಾಯೇಲ್ ವಂಶದವರಾಗಲಿ, ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ, ಗತಿಸಿದ ಅರಸರ ಶವಗಳಿಂದಲೂ ನನ್ನ ಪರಿಶುದ್ಧ ನಾಮವನ್ನು ಅಪವಿತ್ರ ಮಾಡುವುದಿಲ್ಲ.
\v 8 ನನ್ನ ಹೊಸ್ತಿಲುಗಳ ಪಕ್ಕದಲ್ಲಿ ತಮ್ಮ ಹೊಸ್ತಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.
\v 10 <<ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ಆಲಯವನ್ನು ಅವರಿಗೆ ತೋರಿಸು ಮತ್ತು ಅವರು ಅದನ್ನು ಅಳತೆ ಮಾಡಲಿ.
\v 11 ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.
\v 13 <<ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರ ಹೀಗಿರಬೇಕು. (ಉದ್ದ ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ) ಕೆಳಭಾಗದ ಎತ್ತರ ಒಂದು ಮೊಳ, ಮೇಲಿನ ಅಂಚಿನ ಅಗಲ ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಒಂದು ಗೇಣು; ಇದೇ ಯಜ್ಞವೇದಿಯ ಪೀಠ.
\v 14 ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರ ಎರಡು ಮೊಳ, ಅದರ ಮೇಲಣ ಅಂಚಿನ ಅಗಲ ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರ ನಾಲ್ಕು ಮೊಳ, ಮೇಲಣ ಅಂಚಿನ ಅಗಲವು ಒಂದು ಮೊಳ.
\v 15 ಯಜ್ಞವೇದಿಯ ಅಂತಸ್ತಿನ ಎತ್ತರವು ನಾಲ್ಕು ಮೊಳ; ಆ ಯಜ್ಞವೇದಿಯ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.
\v 16 ಯಜ್ಞವೇದಿ ಹನ್ನೆರಡು ಮೊಳ ಉದ್ದವೂ, ಹನ್ನೆರಡು ಮೊಳ ಅಗಲವೂ ಮತ್ತು ಚಚ್ಚೌಕವಾಗಿರಬೇಕು.
\v 17 ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ, ನಾಲ್ಕು ಕಡೆಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ, ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಅಭಿಮುಖವಾಗಿರಬೇಕು.>>
\v 18 ಆಗ ಆ ಪುರುಷನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಸರ್ವಾಂಗಹೋಮಕ್ಕೂ, ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.
\v 19 ಲೇವಿಯರೂ, ಚಾದೋಕನ ಸಂತಾನದವರೂ, ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷ ಪರಿಹಾರಕಯಜ್ಞಕ್ಕಾಗಿ ಕೊಡು ಇದು ಕರ್ತನಾದ ಯೆಹೋವನ ನುಡಿ.
\v 20 ಆಮೇಲೆ ಅದರ ರಕ್ತದಲ್ಲಿ ಸ್ವಲ್ಪವನ್ನು ನೀನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ, ಸುತ್ತಣ ದಿಂಡಿಗೂ ಹಚ್ಚಿ, ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.
\v 21 ಮತ್ತು ದೋಷ ಪರಿಹಾರಕಯಜ್ಞಕ್ಕಾಗಿ ವಧಿಸಲ್ಪಟ್ಟ ಹೋರಿಯನ್ನು ನೀನು ಒಪ್ಪಿಸಲು ನೇಮಿಸಲ್ಪಟ್ಟವನು, ಪವಿತ್ರಾಲಯದ ಹೊರಗೆ ಆಲಯಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ ಅದನ್ನು ಸುಡಬೇಕು.
\v 22 <<ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು
\v 23 ನೀನು ಯಜ್ಞವೇದಿಯ ಶುದ್ಧೀಕರಣದ ಕಾರ್ಯವನ್ನು ಮುಗಿಸಿದ ಮೇಲೆ, ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ತಂದು ಅರ್ಪಿಸಬೇಕು.
\v 24 ನೀನು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು, ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ, ಯೆಹೋವನಿಗಾಗಿ ಸರ್ವಾಂಗಹೋಮವನ್ನು ಅರ್ಪಿಸಬೇಕು.
\v 25 <<ಏಳು ದಿನಗಳ ತನಕ ನೀನು ಪ್ರತಿ ದಿನವೂ ದೋಷಪರಿಹಾರ ಬಲಿಗಾಗಿ ಒಂದೊಂದು ಹೋತವನ್ನು ಸಿದ್ಧಮಾಡಬೇಕು. ಯಾಜಕರು ಸಹ ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ಸಿದ್ಧಮಾಡಬೇಕು.
\v 26 ಹೀಗೆ ಏಳು ದಿನ ಯಜ್ಞವೇದಿಯ ದೋಷವನ್ನು ಪರಿಹರಿಸುತ್ತಾ ಅದನ್ನು ಶುದ್ಧಿ ಮಾಡಿ ಪ್ರತಿಷ್ಠಿಸಬೇಕು.
\v 27 ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು>> ಇದು ಕರ್ತನಾದ ಯೆಹೋವನ ನುಡಿ.
\v 1 ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು.
\v 2 ಆಗ ಯೆಹೋವನು ನನಗೆ, <<ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದನ್ನು ತೆರೆಯಬಾರದು, ಇದರಿಂದ ಯಾರೂ ಪ್ರವೇಶಿಸಬಾರದು. ಇಸ್ರಾಯೇಲಿನ ದೇವರಾದ ಯೆಹೋವನು ಇದರಿಂದ ಪ್ರವೇಶಿಸಿದ್ದಾನೆ. ಆದುದರಿಂದ ಇದು ಮುಚ್ಚಿರಬೇಕು.
\v 3 ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು>> ಎಂದು ಹೇಳಿದನು.
\v 4 ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು.
\p
\v 5 ಆಗ ಯೆಹೋವನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ಯೆಹೋವನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ ಮತ್ತು ಪವಿತ್ರಾಲಯದ ಪ್ರವೇಶವನ್ನೂ, ಪರಿಶುದ್ಧ ಸ್ಥಳದ ಪ್ರತಿಯೊಂದು ಹಾಗುಹೋಗುಗಳನ್ನೂ ಗಮನಿಸು.
\v 6 ಇದಲ್ಲದೆ, ನೀನು ಆ ದ್ರೋಹಿಗಳಾದ ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
\v 7 <ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.
\v 8 ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.>
\v 9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು.
\v 10 << <ಇಸ್ರಾಯೇಲರು ನನ್ನನ್ನು ತೊರೆದು, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ದೋಷಫಲವನ್ನು ಅನುಭವಿಸುವರು.
\v 11 ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು.
\v 12 ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆ ಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿಯಾದ ವಿಘ್ನವಾದುದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸಲೇಬೇಕು.> ಇದು ಕರ್ತನಾದ ಯೆಹೋವನ ನುಡಿ.
\v 13 <ಅವರು ನನಗೆ ಯಾಜಕಸೇವೆ ಮಾಡುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ನನ್ನ ಅತಿ ಪವಿತ್ರವಾದ ಪರಿಶುದ್ಧ ವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ, ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.
\v 14 ದೇವಾಲಯದ ಸಕಲ ಸೇವೆಯಲ್ಲಿಯೂ, ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.
\v 15 << <ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು> ಇದು ಕರ್ತನಾದ ಯೆಹೋವನ ನುಡಿ.
\v 16 ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ, ನನ್ನ ಸೇವೆ ಮಾಡುವುದಕ್ಕೆ ನನ್ನ ಯಜ್ಞವೇದಿಯನ್ನು ಸಮೀಪಿಸಿ, ನನ್ನ ಆಲಯದ ಪಾರುಪತ್ಯವನ್ನು ವಹಿಸುವರು.
\v 17 <<ಅವರು ಒಳಗಿನ ಅಂಗಳದ ಬಾಗಿಲುಗಳನ್ನು ಪ್ರವೇಶಿಸುವಾಗ, ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ, ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಬಾರದು.
\v 18 ಅವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಒಳಉಡುಪನ್ನು ಹಾಕಿಕೊಂಡಿರಬೇಕು; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.
\v 19 ಅವರು ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗುಲಿಸಿ, ಅವರನ್ನು ಪರಿಶುದ್ಧರನ್ನಾಗಿ ಮಾಡದಂತೆ. ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು, ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು.
\v 23 ಅವರು ನನ್ನ ಜನರಿಗೆ ಪವಿತ್ರವಾದದ್ದಕ್ಕೂ ಮತ್ತು ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧ ಹಾಗೂ ಅಶುದ್ಧಗಳ ಭೇದವನ್ನು ತಿಳಿಸಲಿ.
\v 24 ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.
\v 25 <<ಸತ್ತವರ ಹೆಣವನ್ನು ಸಮೀಪಿಸಿ, ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ, ಮದುವೆಯಿಲ್ಲದ ತಂಗಿ, ಇವರಿಗೋಸ್ಕರ ಒಬ್ಬನು ತನ್ನನ್ನು ಅಪವಿತ್ರ ಮಾಡಿಕೊಳ್ಳಬಹುದು.
\v 26 ಅಂಥವನನ್ನು ಶುದ್ಧನಾದ ಮೇಲೂ, ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.
\v 27 ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ, ಒಳಗಿನ ಅಂಗಳಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು.>> ಇದು ಕರ್ತನಾದ ಯೆಹೋವನ ನುಡಿ.
\v 30 <<ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದನ್ನು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.
\v 31 ಯಾಜಕರು ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಅಥವಾ ಪಶುವನ್ನಾಗಲಿ ತಿನ್ನಬಾರದು.>>
\v 1 ನೀವು ದೇಶವನ್ನು ಸ್ವತ್ತಾಗಿ ಹಂಚುವಾಗ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಬೇಕು. ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ ಇರಲಿ. ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.
\v 2 ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಅದರ ಸುತ್ತಲೂ ಐವತ್ತು ಮೊಳ ಅಗಲವಾದ ಭೂಮಿಯು ಇರುವುದು.
\v 3 ಮೊದಲು ಅಳೆದ ಕ್ಷೇತ್ರದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು. ಇದರಲ್ಲಿ ಪರಿಶುದ್ಧವಾದ ಪವಿತ್ರಾಯಲವು ಇರಬೇಕು.
\v 4 ಇದು ದೇಶದಲ್ಲಿ ಪರಿಶುದ್ಧ ಭಾಗವೂ; ಯೆಹೋವನಿಗೆ ಸೇವೆ ಮಾಡಲು ಸಮೀಪಿಸುವಂತೆ, ಇದು ಪರಿಶುದ್ಧ ಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ, ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವುದು.
\v 5 ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಇಪ್ಪತ್ತೈದು ಸಾವಿರ ಮೊಳ ಉದ್ದವೂ ಮತ್ತು ಹತ್ತು ಸಾವಿರ ಮೊಳ ಅಗಲದ ಕ್ಷೇತ್ರವು ಅವರಿಗೆ ಸ್ವಾಸ್ತ್ಯವಾಗುವುದು.
\v 6 ನೀವು ನನಗೆ ಸಮರ್ಪಿಸುವ ಪರಿಶುದ್ಧ ಭಾಗದ ಪಕ್ಕದಲ್ಲಿ ಐದು ಸಾವಿರ ಮೊಳ ಅಗಲದ, ಇಪ್ಪತ್ತೈದು ಸಾವಿರ ಮೊಳ ಉದ್ದದ ಕ್ಷೇತ್ರವನ್ನು ಪಟ್ಟಣಕ್ಕೆ ಒಳಪಟ್ಟ ಭೂಮಿಯನ್ನಾಗಿ ನೇಮಿಸಬೇಕು. ಅದರಲ್ಲಿ ಇಸ್ರಾಯೇಲ್ ವಂಶದವರಿಗೆಲ್ಲಾ ಹಕ್ಕಿರುವುದು.
\s ರಾಜನ ಸ್ವತ್ತು
\p
\v 7 ರಾಜನ ಸ್ವತ್ತು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರಕ್ಕೂ, ಪಟ್ಟಣಕ್ಕೆ ಒಳಪಟ್ಟ ಭೂಮಿಗೂ ಎರಡು ಕಡೆಗಳಲ್ಲಿರುವುದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಪಶ್ಚಿಮ ಕಡೆಯಲ್ಲಿ ಹರಡುವುದು, ಪೂರ್ವದಿಂದ ಪೂರ್ವಕ್ಕೂ ಹರಡುವುದು, ಅದರ ಉದ್ದವು ಪಶ್ಚಿಮದಿಂದ ಪೂರ್ವಕ್ಕೂ ಒಂದು ಕುಲದ ಸ್ವತ್ತಿನ ಉದ್ದಕ್ಕೆ ಸರಿಸಮಾನವಾಗಿರುವುದು.
\v 8 ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವುದು; ಇನ್ನು ಮೇಲೆ ನನ್ನ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸುವುದಿಲ್ಲ; ದೇಶದ ಭೂಮಿಯನ್ನು ಇಸ್ರಾಯೇಲರಿಗೆ ಕುಲಕ್ಕೆ ತಕ್ಕಂತೆ ಹಂಚುವರು.
\v 9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ, ನೀತಿನ್ಯಾಯಗಳನ್ನು ನಡೆಸಿರಿ. ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ. ಇದು ಕರ್ತನಾದ ಯೆಹೋವನ ನುಡಿ.
\v 10 ನಿಮ್ಮ ತಕ್ಕಡಿಯೂ, ಧಾನ್ಯದ ಅಳತೆಯೂ, ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು.
\v 11 ಏಫಾ (ಧಾನ್ಯದ ಅಳತೆ) ಮತ್ತು ಬತ್ (ರಸದ್ರವ್ಯದ ಅಳತೆ) ಒಂದೇ ಪ್ರಮಾಣವಾಗಿರಬೇಕು. ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಏಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು.
\v 12 ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ತೊಲಾ ತೂಕದ್ದಾಗಿರಲಿ.>>
\v 13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನೈವೇದ್ಯವನ್ನೂ, ಸರ್ವಾಂಗಹೋಮವನ್ನೂ, ಸಮಾಧಾನಯಜ್ಞವನ್ನೂ ಮಾಡುವುದಕ್ಕೋಸ್ಕರ ಸಮರ್ಪಿಸತಕ್ಕದು ಏನೆಂದರೆ ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು.
\v 14 ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು. (ಹತ್ತು ಬತ್ ಅಂದರೆ ಒಂದು ಹೋಮೆರ್)
\v 15 ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ; ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಸರ್ವಾಂಗಹೋಮ ಮತ್ತು ಸಮಾಧಾನಬಲಿಯಾಗಿ ಒಪ್ಪಿಸಬೇಕು>> ಇದು ಕರ್ತನಾದ ಯೆಹೋವನ ನುಡಿ.
\v 18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀವು ಪೂರ್ಣಾಂಗವಾದ ಹೋರಿಯನ್ನು ಆರಿಸಿಕೊಂಡು ಪವಿತ್ರಾಲಯವನ್ನು ಶುದ್ಧೀಕರಿಸಬೇಕು.
\v 19 ಆಗ ಯಾಜಕನು ಆ ದೋಷಪರಿಹಾರಕ ಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ, ಯಜ್ಞವೇದಿಯ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಹೆಬ್ಬಾಗಿಲಿನ ಕಂಬಗಳಿಗೂ ಹಚ್ಚಬೇಕು.
\v 20 ಅದೇ ಮೇರೆಗೆ ಏಳನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ, ಯಾರಾದರೂ ಆಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.
\v 23 ಹಬ್ಬದ ಏಳು ದಿನಗಳಲ್ಲಿಯೂ ಯೆಹೋವನಿಗೆ ಸಮರ್ಪಿಸತಕ್ಕ ಸರ್ವಾಂಗಹೋಮಕ್ಕಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಪೂರ್ಣಾಂಗವಾದ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಒದಗಿಸಲಿ ಮತ್ತು ದೋಷಪರಿಹಾರಕ ಯಜ್ಞವಾಗಿ ಪ್ರತಿ ದಿನವೂ ಒಂದು ಹೋತವನ್ನು ಕೊಡಲಿ.
\v 24 ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಸೇರು ಗೋದಿಹಿಟ್ಟನ್ನೂ, ಆರಾರು ಸೇರು ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒಪ್ಪಿಸಬೇಕು.
\v 25 <<ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿನಗಳಲ್ಲಿಯೂ ಅವನು ದೋಷಪರಿಹಾರಕ ಯಜ್ಞಪಶು, ಸರ್ವಾಂಗಹೋಮ ಪಶು, ಧಾನ್ಯನೈವೇದ್ಯ ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.>>
\v 1 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.
\v 2 ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.
\v 6 ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ, ಆರು ಕುರಿಗಳನ್ನೂ, ಒಂದು ಟಗರನ್ನೂ ಒಪ್ಪಿಸತಕ್ಕದ್ದು. ಅವು ಪೂರ್ಣಾಂಗವಾಗಿಯೇ ಇರಬೇಕು.
\v 7 ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.
\s ದೇವಾಲಯದ ಆಗಮನ ನಿರ್ಗಮನದ ಕ್ರಮ, ವಿವಿಧ ನಿಯಮಗಳು
\p
\v 8 <<ಅರಸನು ಪ್ರವೇಶ ಮಾಡುವಾಗ ಹೆಬ್ಬಾಗಿಲಿನ ಕೈಸಾಲೆಯ ಮಾರ್ಗವಾಗಿ ಒಳಗೆ ಬಂದು, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
\v 9 ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿನಿಂದ ಆರಾಧಿಸುವುದಕ್ಕೆ ಪ್ರವೇಶಿಸಿದವನು ದಕ್ಷಿಣ ಬಾಗಿಲಿಂದ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನಿಂದ ಪ್ರವೇಶಿಸಿದವನು ಉತ್ತರ ಬಾಗಿಲಿನಿಂದ ಹೊರಗೆ ಹೋಗಬೇಕು. ತಾನು ಪ್ರವೇಶಿಸಿದ ಬಾಗಿಲಿನಿಂದ ಹಿಂದಿರುಗದೆ ಅದಕ್ಕೆ ಎದುರಾಗಿರುವ ಬಾಗಿಲಿಂದ ಹೊರಗೆ ಹೋಗಬೇಕು.
\v 10 ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ.
\v 13 <<ನೀನು ಪೂರ್ಣಾಂಗವಾದ ವರ್ಷದ ಕುರಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಪ್ರತಿ ದಿನ ಅರ್ಪಿಸಬೇಕು. ಪ್ರತಿ ದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.
\v 14 ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.
\v 15 ಯಾಜಕರು ಕುರಿಯನ್ನೂ, ಧಾನ್ಯನೈವೇದ್ಯವನ್ನೂ, ಎಣ್ಣೆಯನ್ನೂ ನಿತ್ಯ ಸರ್ವಾಂಗಹೋಮವಾಗಿ ಪ್ರತಿ ದಿನ ಬೆಳಗ್ಗೆ ಸಮರ್ಪಿಸಬೇಕು.>>
\v 16 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಅರಸನು ತನ್ನ ಮಕ್ಕಳಲ್ಲಿ ಒಬ್ಬನಿಗೆ ದಾನ ಕೊಟ್ಟರೆ, ಅದು ತಂದೆಯ ಸ್ವಾಸ್ತ್ಯವಾದ ಕಾರಣ, ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸ್ವಾಸ್ತ್ಯವೇ.
\v 17 ಆದರೆ ಅರಸನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನ ಮಾಡಿದರೆ, ಬಿಡುಗಡೆಯ ವರ್ಷದವರೆಗೆ
\f +
\fr 46:17
\fq ಬಿಡುಗಡೆಯ ವರ್ಷದವರೆಗೆ
\ft ಇದು ಜೂಬಿಲಿ ವರ್ಷವಾಗಿದ್ದು ಏಳನೆಯ ವರ್ಷವಾಗಿದ್ದು ಕ್ಷಮಾಪಣೆ ಮತ್ತು ಪುನಃ ಸ್ಥಾಪನೆಯ ವರ್ಷವಾಗಿದೆ.
\f* ಅದು ಅವನ ಅಧೀನವಾಗಿರುವುದು; ಆ ಮೇಲೆ ಅದು ಪುನಃ ಅರಸನ ವಶವಾಗುವುದು; ಆದರೆ ಅರಸನು ತನ್ನ ಮಕ್ಕಳಿಗೆ ಕೊಟ್ಟ ಸ್ವತ್ತು ಅವರಿಗೇ ಸೇರುವುದು.
\v 18 ಇದಲ್ಲದೆ ಅರಸನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ. ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗುವನು.
\v 19 <<ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖವಾಗಿಯೂ, ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.>>
\v 20 ಆಗ ಅವನು ನನಗೆ, <<ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ>> ಎಂದು ಹೇಳಿದನು.
\v 21 ತರುವಾಯ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಬರಮಾಡಿ, ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರೆದುಕೊಂಡು ಹೋದನು. ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು.
\v 22 ಹೌದು, ಅಂಗಳದ ನಾಲ್ಕು ಮೂಲೆಗಳಲ್ಲಿಯೂ ನಲ್ವತ್ತು ಮೊಳ ಉದ್ದದ, ಮೂವತ್ತು ಮೊಳ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.
\v 23 ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತು ಮುತ್ತಲು ಕಲ್ಲಿನ ಸಾಲುಗಳು ಚಾಚಿಕೊಂಡಿತು. ಆ ಸಾಲುಗಳ ಕೆಳಗೆ ಒಲೆಗಳು ಸುತ್ತಲೂ ಇದ್ದವು.
\v 24 ಆಗ ಅವನು ನನಗೆ, <<ಇವು ದೇವಾಲಯದ ಸೇವಕರು. ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸಿದ ಪಾಕಶಾಲೆಗಳು>> ಎಂದು ಹೇಳಿದನು.
\v 1 ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.
\v 2 ಆಗ ಅವನು ನನ್ನನ್ನು ಉತ್ತರದಿಕ್ಕಿನ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಕೊಂಡು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಕರೆದು ತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲನೆ ಹರಿಯುವ ನೀರು ಕಾಣಿಸಿತು.
\v 3 ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವಕ್ಕೆ ಮುಂದುವರಿದು ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸಿದನು. ಅಲ್ಲಿ ನೀರು ಕಾಲು ಮುಳುಗುವಷ್ಟಿತ್ತು.
\v 4 ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಸೊಂಟದವರೆಗೆ ಇತ್ತು.
\v 5 ಅವನು ಮತ್ತೆ ಸಾವಿರ ಮೊಳ ಅಳೆದನು. ಅದು ನನ್ನಿಂದ ದಾಟಲಾಗದ ನದಿಯಾಗಿತ್ತು; ನೀರು ಆಳವಾಗಿ ಈಜಾಡುವಷ್ಟು ಪ್ರವಾಹವಾಗಿತ್ತು, ದಾಟಲಾಗದ ನದಿಯಾಗಿತ್ತು.
\v 6 ಆಗ ಅವನು ನನಗೆ, <<ನರಪುತ್ರನೇ, ಇದನ್ನು ನೋಡಿದೆಯಾ?>> ಎಂದು ಹೇಳಿ ನನ್ನನ್ನು ನದಿಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು.
\p
\v 7 ನಾನು ಹಿಂದಿರುಗಲು ಆಹಾ, ನದಿಯ ಎರಡು ದಡಗಳಲ್ಲಿಯೂ ಅನೇಕ ವೃಕ್ಷಗಳು ಕಾಣಿಸಿದವು.
\v 8 ಆಗ ಅವನು ನನಗೆ ಹೀಗೆ ಹೇಳಿದನು, <<ಈ ಪ್ರವಾಹವು ಪೂರ್ವ ಪ್ರಾಂತ್ಯಕ್ಕೆ ಹೊರಟು, ಅರಾಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು. ಈ ನೀರು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.
\v 9 ಈ ನದಿಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲ ವಿಧವಾದ ಜಲಜಂತುಗಳು ಬದುಕಿ ಬಾಳುವವು; ಮೀನುಗಳು ಗುಂಪು ಗುಂಪಾಗಿರುವವು. ಈ ನೀರು ಸಮುದ್ರಕ್ಕೆ ಬೀಳಲು, ಆ ನೀರೂ ಸಿಹಿಯಾಗುವುದು. ಈ ನದಿಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.
\v 10 ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್ ಗೆದಿಯಿಂದ ಏನ್ ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆ ಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿ ರಾಶಿಯಾಗಿ ಸಿಕ್ಕುವವು.
\v 11 ಆದರೆ ಅದರ ಸುತ್ತಣ ಕೆಸರಾದ ಸ್ಥಳಗಳು, ಕೊಳಚೆಗಳು ಸಿಹಿಯಾಗುವುದಿಲ್ಲ. ಅವು ಉಪ್ಪಿನ ಗಣಿಯಾಗುವುವು.
\v 12 ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.>>
\v 13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡು ಪಾಲು ಸೇರಲಿ.
\v 14 ನಾನು ನಿಮ್ಮ ಪೂರ್ವಿಕರಿಗೆ ಪ್ರಮಾಣವಾಗಿ ವಾಗ್ದಾನ ಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ. ಇದು ನಿಮಗೆ ಸ್ವತ್ತಾಗಿಯೇ ಇರುವುದು.
\v 18 <<ಇದು ಪೂರ್ವದಿಕ್ಕಿನ ಮೇರೆಯಾಗಿದೆ: ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯದಲ್ಲಿರುವ ಯೊರ್ದನ್ ಹೊಳೆಯು ಮೇರೆಯಾಗಿರುವುದು. ಉತ್ತರ ಮೇರೆಯಿಂದ ದಕ್ಷಿಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು.
\v 19 ಇದು ದಕ್ಷಿಣದ ಮೇರೆಯಾಗಿದೆ: ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು, ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ ಐಗುಪ್ತದವರೆಗೆ ಮುಂದುವರೆಯುವ ನದಿಯ ಮಾರ್ಗವಾಗಿ ಮಹಾ ಸಮುದ್ರವನ್ನು ಮುಟ್ಟಬೇಕು.
\v 20 ಇದು ಪಶ್ಚಿಮದ ಮೇರೆಯಾಗಿದೆ. ಹಮಾತಿನ ದಾರಿಗೆ ಎದುರಿನ (ಕರಾವಳಿಯ) ತನಕ ಮಹಾ ಸಮುದ್ರದವರೆಗೂ ಪಶ್ಚಿಮದ ಮೇರೆಯಾಗಿರುವುದು.
\v 21 ಈ ರೀತಿಯಾಗಿ ದೇಶವನ್ನು ನೀವು ಇಸ್ರಾಯೇಲಿನ ಎಲ್ಲಾ ಕುಲಕ್ಕೂ ಹಂಚಿಕೊಳ್ಳಬೇಕು.
\v 22 ನಿಮಗೂ, ನಿಮ್ಮ ಮಧ್ಯದಲ್ಲಿ ಪ್ರವಾಸ ಮಾಡುತ್ತಾ, ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು. ಅವರು ಇಸ್ರಾಯೇಲರ ಮಧ್ಯದಲ್ಲಿ ನಿಮಗೆ ಸ್ವದೇಶಿಗಳಂತೆಯೇ ಇರಬೇಕು. ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.
\v 23 ಯಾವ ಕುಲದಲ್ಲಿ ವಿದೇಶಿಯು ಪ್ರವಾಸವಾಗಿರುತ್ತಾನೋ ಅಲ್ಲಿ ಅವನಿಗೆ ಸ್ವತ್ತನ್ನು ಕೊಡಬೇಕು>> ಇದು ಕರ್ತನಾದ ಯೆಹೋವನ ನುಡಿ.
\v 1 ಹಂಚುವಿಕೆಯನ್ನು ಅನುಸರಿಸಿ ಕುಲಗಳ ಹೆಸರುಗಳು ಇವೇ. ದೇಶದ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನ್ ಕುಲಕ್ಕೆ ಒಂದು ಭಾಗವಿದೆ. ಅದರ ಉತ್ತರ ಮೇರೆಯು ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು, ಹಮಾತಿನ ದಾರಿಯನ್ನು ದಾಟಿ, ದಮಸ್ಕದ ಮೇರೆಯಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು. ಅದರ ಕಡೆಗಳು ದೇಶದ ಪೂರ್ವ, ಪಶ್ಚಿಮಗಳ ಮೇರೆಗಳ ತನಕ ಚಾಚಿಕೊಂಡಿರುವವು.
\p
\v 2 ದಾನಿನ ದಕ್ಷಿಣ ದಿಕ್ಕಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಆಶೇರಿಗೆ ಒಂದು ಪಾಲು.
\p
\v 3 ಆಶೇರಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನಫ್ತಾಲಿಗೆ ಒಂದು ಪಾಲು.
\v 8 ಯೆಹೂದದ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವುದು. ಅದರ ಅಗಲವು ಇಪ್ಪತ್ತೈದು ಸಾವಿರ ಮೊಳ ಉದ್ದವು, ಪೂರ್ವದಿಂದ ಪಶ್ಚಿಮ ಕುಲಗಳ ಪಾಲುಗಳ ಉದ್ದಕ್ಕೆ ಸಮಾನವಾಗಿದೆ. ಅದರ ಮಧ್ಯದಲ್ಲಿ ಪವಿತ್ರಾಲಯವಿರುವುದು.
\p
\v 9 ನೀವು ಮೀಸಲು ಭೂಮಿಯಲ್ಲಿ ಯೆಹೋವನಿಗೆ ವಿಶೇಷವಾದ ಮೀಸಲಾಗಿ ಸಮರ್ಪಿಸುವ ಪಾಲಿನ ಉದ್ದವು ಇಪ್ಪತ್ತೈದು ಸಾವಿರ ಮೊಳವು ಮತ್ತು ಅಗಲವು ಹತ್ತು ಸಾವಿರ ಮೊಳವಾಗಿದೆ.
\v 10 ಮೀಸಲಾದ ಆ ಪವಿತ್ರ ಕ್ಷೇತ್ರವು ಯಾಜಕರಿಗೆ ಸಲ್ಲತಕ್ಕದ್ದು. ಉತ್ತರಕ್ಕೆ ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳವು, ಪಶ್ಚಿಮಕ್ಕೆ ಹತ್ತು ಸಾವಿರ ಮೊಳ ಅಗಲವು, ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿದೆ. ಅದರ ಮಧ್ಯದಲ್ಲಿ ಯೆಹೋವನ ಪವಿತ್ರಾಲಯವಿರುವುದು.
\v 11 ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ, ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.
\v 12 ಲೇವಿಯರ ಪಾಲಿನ ಮೇರೆಯ ಪಕ್ಕದಲ್ಲಿರುವ ಆ ಕ್ಷೇತ್ರವು ಅತಿ ಪವಿತ್ರವೂ ದೇಶದೊಳಗೆ ಮೀಸಲೂ ಆಗಿ ಯಾಜಕರಿಗೆ ಸೇರತಕ್ಕದ್ದಾಗಿದೆ.
\v 13 ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಮೇರೆಯ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು. ಈ ಎರಡು ಪಾಲುಗಳ ಒಟ್ಟು ಅಳತೆ ಎಷ್ಟೆಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ ಮತ್ತು ಅಗಲವು ಇಪ್ಪತ್ತು ಸಾವಿರ ಮೊಳವಾಗಿದೆ.
\v 14 ಆ ಕ್ಷೇತ್ರವು ಯೆಹೋವನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು ಮತ್ತು ಬದಲಾಯಿಸಲೂಬಾರದು. ದೇಶದ ಆ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವನಿಗೆ ಪರಿಶುದ್ಧವಾಗಿದೆ.
\v 15 ಇಪ್ಪತ್ತೈದು ಸಾವಿರ ಮೊಳ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ ಮೀಸಲು ಪಾಲಿನ ಒಟ್ಟು ಅಳತೆಯಲ್ಲಿ ಉಳಿದ ಐದು ಸಾವಿರ ಮೊಳ ಅಗಲದ ಭೂಮಿಯು ಮೀಸಲಿಲ್ಲವೆಂದೆಣಿಸಿ ಪಟ್ಟಣಕ್ಕೆ ಅಂದರೆ ಜನರ ನಿವಾಸಕ್ಕೂ ಮತ್ತು ಸುತ್ತಣ ಪ್ರದೇಶಕ್ಕೂ ಪ್ರತ್ಯೇಕಿಸಲ್ಪಡಲಿ. ಪಟ್ಟಣವು ಅದರ ಮಧ್ಯದಲ್ಲಿರಲಿ.
\v 16 ಪಟ್ಟಣದ ಅಳತೆಯು ಹೀಗಿರಬೇಕು: ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಮೊಳವು, ದಕ್ಷಿಣದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಮೊಳವು; ಪೂರ್ವದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಮೊಳವು ಮತ್ತು ಪಶ್ಚಿಮಕ್ಕೆ ನಾಲ್ಕು ಸಾವಿರದ ಐನೂರು ಮೊಳವು ಇರಬೇಕು.
\v 17 ಪಟ್ಟಣಕ್ಕೆ ಸುತ್ತಣ ಪ್ರದೇಶವಿರಬೇಕು. ಅದರ ಅಗಲವು ಉತ್ತರದಲ್ಲಿ ಇನ್ನೂರೈವತ್ತು ಮೊಳವು, ದಕ್ಷಿಣದಲ್ಲಿ ಇನ್ನೂರೈವತ್ತು ಮೊಳವು, ಪೂರ್ವದಲ್ಲಿ ಇನ್ನೂರೈವತ್ತು ಮೊಳವು ಮತ್ತು ಪಶ್ಚಿಮದಲ್ಲಿ ಇನ್ನೂರೈವತ್ತು ಮೊಳವು ಇರಬೇಕು.
\v 18 ಪಟ್ಟಣವನ್ನು ಹೊರತುಪಡಿಸಿ, ಅದಕ್ಕೆ ಒಳಪಟ್ಟ ಉಳಿದ ಭೂಮಿಯ ಉದ್ದವು ಮೀಸಲಾದ ಪವಿತ್ರ ಕ್ಷೇತ್ರದ ಪಕ್ಕದಲ್ಲಿ ಪೂರ್ವದ ಕಡೆಗೆ ಹತ್ತು ಸಾವಿರ ಮೊಳವು, ಪಶ್ಚಿಮದ ಕಡೆಗೆ ಹತ್ತು ಸಾವಿರ ಮೊಳವು ಆಗಿರಬೇಕು. ಆ ಭೂಮಿಯು ಮೀಸಲಾದ ಪವಿತ್ರ ಕ್ಷೇತ್ರದ ಮೇರೆಯನ್ನು ಅನುಸರಿಸುವುದು. ಅದರ ಉತ್ಪತ್ತಿಯು ಆ ಪಟ್ಟಣದ ನಿವಾಸಿಗಳಿಗೆ ಆಹಾರವಾಗುವುದು.
\v 19 ಅವರು ಇಸ್ರಾಯೇಲಿನ ಯಾವ ಕುಲಕ್ಕೆ ಸೇರಿದ್ದರೂ, ಪಟ್ಟಣದಲ್ಲಿ ವಾಸಿಸುತ್ತಾ ಆ ಭೂಮಿಯನ್ನು ಬಿತ್ತುವರು.
\v 20 ಮೀಸಲಾದ ಪೂರ್ಣ ಕ್ಷೇತ್ರದ ಉದ್ದ ಇಪ್ಪತ್ತೈದು ಸಾವಿರ ಮೊಳವು, ಅಗಲ ಇಪ್ಪತ್ತೈದು ಸಾವಿರ ಮೊಳ ಮತ್ತು ನೀವು ಮೀಸಲಾಗಿ ಅರ್ಪಿಸುವ ಪವಿತ್ರ ಕ್ಷೇತ್ರವು ಪಟ್ಟಣಕ್ಕೆ ಒಳಪಟ್ಟು, ಭೂಮಿ ಸಹಿತವಾಗಿ ಚಚ್ಚೌಕವಾಗಿರಬೇಕು.
\v 21 ಮೀಸಲಾದ ಪವಿತ್ರ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಎರಡು ಕಡೆಗಳಲ್ಲಿ ಉಳಿದ ಭೂಮಿಯು ಅರಸನ ಪಾಲಾಗಿರಲಿ. ಆ ಪಾಲು ಮೀಸಲಾದ ಕ್ಷೇತ್ರದ ಪೂರ್ವದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯ ಪಶ್ಚಿಮದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವುದು; ಅದು ಪ್ರಭುವಿಗೆ ಸೇರತಕ್ಕದ್ದು. ಪವಿತ್ರಾಲಯವೂ ಮೀಸಲಾದ ಪವಿತ್ರ ಕ್ಷೇತ್ರದ ಮಧ್ಯದಲ್ಲಿರುವುದು.
\v 22 ಅರಸನ ಪಾಲಿನ ಎರಡು ಭಾಗಗಳ ಮಧ್ಯದಲ್ಲಿ ಲೇವಿಯರ ಪಾಲಿನ (ಬಡಗಣ) ಮೇರೆಯಿಂದ ಪಟ್ಟಣಕ್ಕೆ ಒಳಪಟ್ಟ ಭೂಮಿಯ (ತೆಂಕಣ) ಮೇರೆಯ ತನಕ ಅಂದರೆ ಯೆಹೂದದ (ತೆಂಕಣ) ಮೇರೆಯಿಂದ ಬೆನ್ಯಾಮೀನಿನ (ಬಡಗಣ) ಮೇರೆಯವರೆಗೆ ಅರಸನ ಪಾಲು ಹರಡಿರುವುದು.
\v 27 ಜೆಬುಲೂನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಗಾದಿಗೆ ಒಂದು ಪಾಲು.
\p
\v 28 ಗಾದನ್ ಮೇರೆಯು ದಕ್ಷಿಣದ ಕಡೆಯಲ್ಲಿ, ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ, (ಐಗುಪ್ತದ ಮುಂದಣ) ನದಿಯ ಮಾರ್ಗವಾಗಿ ಮಹಾ ಸಮುದ್ರಕ್ಕೆ ಸೇರುವುದು.
\p
\v 29 ನೀವು ಇಸ್ರಾಯೇಲಿನ ಕುಲಗಳಿಗೆ ಸ್ವತ್ತಾಗಿ ಹಂಚಿ ಕೊಡಬೇಕಾದ ದೇಶವು ಇದೇ. ಕುಲಗಳ ಪಾಲುಗಳು ಇವೇ. ಇದು ಕರ್ತನಾದ ಯೆಹೋವನ ನುಡಿ.
\v 30 ಪಟ್ಟಣದ ನಿರ್ಗಮನ ಹೀಗಿರಬೇಕು: ಉತ್ತರದ ಕಡೆಯ ಉದ್ದ ನಾಲ್ಕು ಸಾವಿರದ ಐನೂರು ಮೊಳವಾಗಿದೆ.
\p
\v 31 ಪಟ್ಟಣದ ಬಾಗಿಲುಗಳಿಗೆ ಇಸ್ರಾಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಉತ್ತರಕ್ಕೆ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ ಬಾಗಿಲು, ಮತ್ತೊಂದು ಲೇವಿಯರ ಬಾಗಿಲು.
\p
\v 32 ಪೂರ್ವದ ಕಡೆಯ ಉದ್ದವು ನಾಲ್ಕು ಸಾವಿರದ ಇನ್ನೂರು ಮೊಳವಾಗಿದೆ; ಅದರಲ್ಲಿ ಮೂರು ಬಾಗಿಲುಗಳು; ಒಂದು ಯೋಸೇಫನ ಬಾಗಿಲು; ಇನ್ನೊಂದು ಬೆನ್ಯಾಮೀನನ ಬಾಗಿಲು, ಮತ್ತೊಂದು ದಾನಿನ ಬಾಗಿಲು.
\v 33 ದಕ್ಷಿಣದ ಕಡೆಯಲ್ಲಿ ಉದ್ದವು ನಾಲ್ಕು ಸಾವಿರದ ಐನೂರು ಮೊಳವು; ಅದರಲ್ಲಿ ಮೂರು ಬಾಗಿಲುಗಳು; ಒಂದು ಸಿಮೆಯೋನನ ಬಾಗಿಲು, ಇನ್ನೊಂದು ಇಸ್ಸಾಕಾರನ ಬಾಗಿಲು, ಮತ್ತೊಂದು ಜೆಬುಲೂನಿನ ಬಾಗಿಲು.
\p
\v 34 ಪಶ್ಚಿಮದ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳವು; ಅದರಲ್ಲಿ ಮೂರು ಬಾಗಿಲುಗಳು; ಒಂದು ಗಾದಿನ ಬಾಗಿಲು, ಇನ್ನೊಂದು ಆಶೇರಿನ ಬಾಗಿಲು, ಮತ್ತೊಂದು ನಫ್ತಾಲಿನ ಬಾಗಿಲು.
\p
\v 35 ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ <<ಯೆಹೋವನ ನೆಲೆ